Mysore
26
clear sky

Social Media

ಭಾನುವಾರ, 22 ಮಾರ್ಚ್ 2026
Light
Dark

ಒಳಚರಂಡಿ ಅವ್ಯವಸ್ಥೆ ಸರಿಪಡಿಸಿದ ತಿ.ನರಸೀಪುರ ಪುರಸಭೆ

ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯ ಪುರಸಭೆ ಅಧಿಕಾರಿಗಳು ಒಳಚರಂಡಿ ವ್ಯವಸ್ಥೆ ಸರಿಪಡಿಸಿದ್ದಾರೆ.

‘ಆಂದೋಲನ’ದೊಂದಿಗೆ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್‌ರವರು, ವಾರ್ಡ್ ನಂಬರ್ ೧೦ರ ವಿದ್ಯಾನಗರದ ಒಳಚರಂಡಿ ಕಟ್ಟಿಕೊಳ್ಳಲು ಅಲ್ಲಿನ ನಿವಾಸಿಗಳು ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬಾತ್‌ರೂಮ್ ಒಳಗೆ ಹಾಕಿರುವುದು ಕಾರಣವಾಗಿದೆ. ಆದ್ದರಿಂದ ಮಹಿಳೆಯರು ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತಿನಿತ್ಯ ಬರುವ ಕಸದ ವಾಹನಗಳಿಗೆ ನೀಡಿ ಸಹಕರಿಸಬೇಕು ಎಂದರು.

ಪುರಸಭೆ ವ್ಯಾಪ್ತಿಯೊಳಗೆ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನನ್ನೇ ಸಂಪರ್ಕಿಸಬಹುದು. ನಾನು ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತವಾಗಿ ಕೆಲಸ ಮಾಡಿ ಕೊಡುತ್ತೇನೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೆಲವು ನೌಕರರು ರಜೆ ಹಾಕಿದ್ದರಿಂದ ಸಮಸ್ಯೆಗೆ ಸ್ಪಂದಿಸಲು ವಿಳಂಬವಾಗಿದೆ. ತ್ವರಿತವಾಗಿ ಸ್ಪಂದಿಸಲು ನೌಕರರಿಗೆ ಸಲಹೆ ನೀಡಿದ್ದೇನೆ. ಅವರು ಸ್ಪಂದಿಸದಿದ್ದರೆ ನೇರವಾಗಿ ನನಗೆ ದೂರು ನೀಡಿ ಎಂದು ಮನವಿ ಮಾಡಿದರು. ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಸಮಸ್ಯೆ ಉದ್ಭವವಾದರೆ ಅದಕ್ಕಾಗಿ ಪ್ರತ್ಯೇಕ ವಾಹನ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು ಅವರು ತಕ್ಷಣವೇ ಸ್ಪಂದಿಸಲಿದ್ದಾರೆ. ಸಾರ್ವಜನಿಕರು ಕಚೇರಿಯ ವೇಳೆ ಭೇಟಿ ಮಾಡಿ ಮಾಹಿತಿ ನೀಡಿದರೆ, ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದರು.

Tags:
error: Content is protected !!