ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕು ವ್ಯಾಪ್ತಿಗೆ ಸೇರಿದ ನುಗು ಜಲಾಶಯದಿಂದ ಹೆಡಿಯಾಲ ಗ್ರಾಮದ ವರೆಗೂ ರಸ್ತೆ ಹಾಳಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗಿದೆ.
ಎಚ್.ಡಿ.ಕೋಟೆ ಹಾಗೂ ಸರಗೂರು ಕಡೆಯಿಂದ ನಂಜನಗೂಡು- ಹುರ-ಹುಲ್ಲಹಳ್ಳಿ- ಚಾಮರಾಜನಗರ ಮತ್ತಿತರ ಊರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀರ ಹದಗೆಟ್ಟಿದೆ. ಬಡಗಲಪುರ, ಹಾದನೂರು, ಬೇಲದಕುಪ್ಪೆ ದೇವಸ್ಥಾನ ಹಾಗೂ ನುಗು ಜಲಾಶಯದ ಕಡೆಗೆ ಪ್ರತಿನಿತ್ಯ ಪ್ರವಾಸಿಗರು ಬರುತ್ತಾರೆ. ಆದರೆ ಈ ರಸ್ತೆಯಲ್ಲಿ ಪ್ರಯಾಣಿಸಬೇಕಾದರೆ ಹರಸಾಹಸಪಡಬೇಕಿದೆ.
ಮಳೆಗಾಲದಲ್ಲಿ ನುಗು ಜಲಾಶಯದ ಬಳಿ ಕೆಸರು ಗದ್ದೆಯಂತಾಗುತ್ತದೆ. ಇಲ್ಲಿ ವಾಹನ ಸವಾರರು ವಾಹನ ಚಾಲನೆ ಮಾಡಲು ಸರ್ಕಸ್ ಮಾಡುವಂತಾಗಿದೆ. ರಾತ್ರಿ ಸಮಯದಲ್ಲಂತೂ ಇಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕು. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ನಂಜನಗೂಡು ಹಾಗೂ ಎಚ್.ಡಿ.ಕೋಟೆ ಶಾಸಕರು ಹಾಗೂ ಚಾಮರಾಜನಗರ ಜಿಲ್ಲೆಯ ಸಂಸದರು ಕೂಡಲೆ ರಸ್ತೆ ದುರಸ್ತಿಗೆ ಕ್ರಮವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ.
-ಸಿದ್ದಲಿಂಗೇಗೌಡ. ಹೈರಿಗೆ, ಎಚ್.ಡಿ.ಕೋಟೆ ತಾಲ್ಲೂಕು
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…