ತಿ. ನರಸೀಪುರ: ಮುಂಗಾರು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅನಾಹುತಗಳು ಆಗದಂತೆ ಕ್ರಮ ವಹಿಸಲಾಗಿದೆ.
ತಾಲ್ಲೂಕಿನಲ್ಲಿ ಭಾರೀ ಮಳೆ ಆದರೆ ಮನೆಗಳಿಗೆ ಹಾನಿ, ಬೆಳೆ ಹಾನಿ ಹಾಗೂ ಜಾನುವಾರುಗಳಿಗೆ ತೊಂದರೆ ಯಾಗುವುದನ್ನು ತಪ್ಪಿಸಲು ಗ್ರಾಮಸೇವಕರುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿ ನೀಡಲಾಗಿದ್ದು ಬೆಳೆ ಹಾನಿಯಾದ ಬಗ್ಗೆ ಗಮನಕ್ಕೆ ತಂದ ಕೂಡಲೇ ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳು ಜಂಟಿಯಾಗಿ ಸರ್ವೆ ನಡೆಸಿ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುತ್ತದೆ. ಮನೆಗೆ ಹಾನಿಯಾದರೆ ಎಸ್‌ಡಿಎಫ್‌ಆರ್ ಯೋಜನೆಯಡಿ ಪರಿಹಾರ ನೀಡಲಾಗುವುದು. ಮಳೆ ಹಾಗೂ ಭೂಕುಸಿತದಿಂದ ಪ್ರಾಣ ಹಾನಿಯಾದರೆ ೫ ಲಕ್ಷ ರೂ. ಪರಿಹಾರ ನೀಡಲಾಗುವುದು. ಒಟ್ಟಾರೆ ಮಳೆಯಿಂದ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ತಡಿಮಾಲಂಗಿಯಲ್ಲಿ ಎಚ್ಚರಿಕೆ: ಹೆಚ್ಚಾಗಿ ಮಳೆಯಾದರೆ ಕಾವೇರಿ ಹಾಗೂ ಕಪಿಲ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವುದರಿಂದ ತಡಿಮಾಲಂಗಿ ಗ್ರಾಮದಲ್ಲಿ ಅನಾಹುತಗಳು ಆಗುತ್ತವೆ. ಈ ಹಿನ್ನೆಲೆಯಲ್ಲಿ ಗ್ರಾಮದ ಸುತ್ತ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರದಿಂದ ೧ ಕೋಟಿ ರೂ. ಮಂಜೂರಾಗಿದ್ದು, ಲೋಕೋಪಯೋಗಿ ಇಲಾಖೆ ವತಿಯಿಂದ ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ತಹಸಿಲ್ದಾರ್ ಸುರೇಶಾಚಾರ್ ಪತ್ರಿಕೆಗೆ ತಿಳಿಸಿದ್ದಾರೆ.
ಕೆಸರು ಗುಂಡಿಯಾಗುವ ರಸ್ತೆಗಳು: ತಿ. ನರಸೀಪುರದ ಸೇಂಟ್ ಮೇರಿಸ್ ಶಾಲೆ ರಸ್ತೆಯು ಮಳೆ ಬಿದ್ದಾಗ ಕೆಸರುಗದ್ದೆಯಂತಾಗುತ್ತದೆ. ನಂಜನಗೂಡು, ಕೊಳ್ಳೇಗಾಲದ ರಸ್ತೆಗಳು ಹಳ್ಳ ಕೊಳ್ಳಗಳಿಂದ ಕೂಡಿದ್ದು, ಮಳೆಯಾದರೆ ರಸ್ತೆಯಲ್ಲಿ ವಾಹನ ಸವಾರರು ಬೀಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಂಸದ ಸುನಿಲ್ ಬೋಸ್ ಅವರು ಭೂಮಿ ಪೂಜೆ ಮಾಡಿ ತಿಂಗಳುಗಳೇ ಕಳೆದರೂ ಕಾಮಗಾರಿ ಇನ್ನೂ ಆರಂಭವಾಗಿಲ್ಲ.
ಮಳೆಗಾಲ ಆರಂಭವಾಗಿರುವುದರಿಂದ ತಾಲ್ಲೂಕಿನಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಗ್ರಾಮ ಸಹಾಯಕರುಗಳಿಗೆ ಸೂಚನೆ ನೀಡಲಾಗಿದ್ದು, ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಹಾನಿ ಉಂಟಾದ ಕೂಡಲೇ ಮಾಹಿತಿ ನೀಡುವಂತೆ ಸಲಹೆ ನೀಡಲಾಗಿದೆ. ಹಾನಿ ಉಂಟಾದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಏಳು ದಿನಗಳ ಒಳಗೆ ಪರಿಹಾರ ನೀಡಲಾಗುವುದು. – ಸುರೇಶಾಚಾರ್, ತಹಸಿಲ್ದಾರ್
ಮಳೆಗಾಲ ಆರಂಭವಾಗಿರುವುದರಿಂದ ಮನೆಗಳಲ್ಲಿ ಸಂಗ್ರಹಿಸಿದ ನೀರನ್ನು ಆಶಾ ಕಾರ್ಯಕರ್ತರ ಮೂಲಕ ಪರಿಶೀಲಿಸಿ, ಸೊಳ್ಳೆ, ಕ್ರಿಮಿಕೀಟಗಳು ಕೂರದಂತೆ ಹಾಗೂ ನೀರನ್ನು ಬದಲಾಯಿಸುವಂತೆ ತಿಳಿಸಲಾಗು ತ್ತದೆ. ಬಿಸಿನೀರು ಸೇವನೆ ಮಾಡಲು ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯಿತಿಯ ವರು ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. -ಡಾ. ರವಿಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ
ಪಟ್ಟಣದ ಸೇಂಟ್ ಮೇರಿಸ್ ಶಾಲೆ ರಸ್ತೆಯಲ್ಲಿ ಮಳೆ ಬಂದಾಗ ಶಾಲೆಗೆ ರಜೆ ನೀಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಳೆ ಬಿದ್ದರೆ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗು ವುದು ಅಸಾಧ್ಯ ಎಂಬಂತಾಗಿದೆ. ಹೀಗಿದ್ದರೂ ಪುರಸಭೆಯ ಅಧಿಕಾರಿಗಳು ಗಮಹರಿಸದಿರುವುದು ವಿಷಾದನೀಯ. – ಪರಮೇಶ್, ವಕೀಲರು, ತಿ. ನರಸೀಪುರ
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…