ನವೀನ್ ಡಿಸೋಜ
ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ
ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ ತಂಪಾದ ವಾತಾವರಣ ಹೊಂದಿರುವ ಕೊಡಗು ಜಿಲ್ಲೆಯಲ್ಲಿಯೂ ತಾಪಮಾನ ಹೆಚ್ಚುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಿಸಿಲಿನ ತಾಪ ೩೧ ಡಿಗ್ರಿ ದಾಟುತ್ತಿದ್ದು, ಬಿಸಿಲಿನ ಉರಿಗೆ ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಆದರೆ, ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಇಲ್ಲಿ ಹೀಟ್ ಸ್ಟ್ರೋಕ್‌ನಂತಹ ಸಮಸ್ಯೆ ಸಂಭವಿಸುವ ಸಾಧ್ಯತೆ ಕಡಿಮೆ ಇದೆ. ಆದರೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲಿನ ಜತೆಗೆ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಆತಂಕವೂ ಇದೆ.
ಬಿಸಿಲಿನೊಂದಿಗೆ ಮಳೆಯಾಗುಗುವುದರರಿಂದ ಅಲ್ಲಲ್ಲಿ ನೀರು ಸಂಗ್ರಹವಾಗಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೊಳ್ಳೆಗಳು ಹೆಚ್ಚಾಗದಿರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಈ ಹಿಂದೆ ಹೆಚ್ಚಿನ ಡೆಂಗ್ಯು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ ಈ ಬಾರಿ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಈ ಸಂಬಂಧ ಆತಂಕಪಡುವ ಅಗತ್ಯವಿಲ್ಲ. ಆದರೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಹೇಳಿದ್ದಾರೆ.
ಇನ್ನು ಬೇಸಿಗೆ ಬಿಸಿಲಿಗೆ ಕೇವಲ ಬಳಲಿಕೆ ಮಾತ್ರವಲ್ಲ, ನಿಧಾನವಾಗಿ ಕಾಯಿಲೆಗಳೂ ಬರುವ ಸಾಧ್ಯತೆ ಇದೆ. ಸೂಕ್ತ ರೀತಿಯಲ್ಲಿ ಮುಂಜಾಗ್ರತೆ ವಹಿಸದೇ ಇದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಾಮಾನ್ಯವಾಗಿ ವಾಂತಿ, ಭೇದಿ ಕಾಣಿಸಿಕೊಂಡಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬೇಕು. ಜೊತೆಗೆ ಬೇಸಿಗೆಯ ಸಂದರ್ಭದಲ್ಲಿ ಆಹಾರ, ಪರಿಸರದ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂಬುದು ಆರೋಗ್ಯ ಅಧಿಕಾರಿಗಳ ಸಲಹೆಯಾಗಿದೆ.
ಮುನ್ನೆಚ್ಚರಿಕೆ ಕ್ರಮಗಳು:
* ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು
* ತೆರೆದಿಟ್ಟ ಆಹಾರ ಪದಾರ್ಥ ಸೇವನೆ ಬೇಡ
* ಆಹಾರ ಪದಾರ್ಥಗಳನ್ನು ಜಿರಲೆ, ನೊಣಗಳಿಂದ ರಕ್ಷಿಸಿ ಇಡಬೇಕು
* ವಾಂತಿ, ಭೇದಿ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರ ಸಲಹೆ ಪಡೆಯಬೇಕು
* ಬಿಸಿ ಇರುವ ಆಹಾರವನ್ನೇ ಸೇವಿಸಬೇಕು
* ಮೀನು, ಮಾಂಸವನ್ನು ಸಮರ್ಪಕವಾಗಿ ಬೇಯಿಸಿ ತಿನ್ನಬೇಕು.
* ಸೊಳ್ಳೆ, ನೊಣಗಳಿಂದ ರಕ್ಷಿಸಿಕೊಳ್ಳಬೇಕು
* ಎಳನೀರು, ಓಆರ್‌ಎಸ್, ತಾಜಾ ಹಣ್ಣಿನ ರಸ, ಮಜ್ಜಿಗೆಯನ್ನು ಸೇವಿಸಬೇಕು
* ವಾಂತಿ ಭೇದಿ ಕಂಡುಬಂದಾಗ ಮೂಢನಂಬಿಕೆಗಳನ್ನು ಅನುಸರಿಸಬಾರದು
” ಬೇಸಿಗೆಯಲ್ಲಿ ವಾಂತಿ ಭೇದಿ ಯಂತಹ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸದ್ಯ ಜಿಲ್ಲೆ ಯಲ್ಲಿ ಇಂತಹ ಯಾವುದೇ ಪ್ರಕರಣ ಕಂಡುಬಂದಿಲ್ಲ. ಸಭೆ ಸಮಾರಂಭಗಳಿಗೆ ನೀರಿನ ಬಳಕೆ ವೇಳೆ ಎಚ್ಚರವಹಿಸಬೇಕು. ಈ ಸಂಬಂಧ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜನ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಮನೆ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಹೆಚ್ಚಾಗಿ ನೀರು ಕುಡಿಯಬೇಕು.”
-ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…