Andolana originals

ಯುವ ಸಂಸದನ ಕೈ ಹಿಡಿದ ಆ ಕ್ಷಣ. . .

ಇಂದಿರಗಾಂಧಿ ಅವರ ದೃಷ್ಠಿಗೆ ಬಿದ್ದ ಎಸ್‌ಎಂಕೆ

ಅರ್. ಟಿ. ವಿಠ್ಠಲಮೂರ್ತಿ
ಬೆಂಗಳೂರು: ಅವತ್ತು ದಿಲ್ಲಿಯಲ್ಲಿ ಪ್ರಧಾನಿ ಇಂದಿರಾಗಾಂಧಿ ನೇತೃತ್ವದಲ್ಲಿ ಸಭೆಯೊಂದು ಏರ್ಪಾಡಾಗಿತ್ತು. ಸಭೆಯೇನೋ ಆರಂಭವಾಯಿತು. ಆದರೆ ಸಭೆಯ ಕಾರ್ಯಸೂಚಿಯನ್ನು ಓದಬೇಕಿದ್ದ ಇಂದಿರಾಗಾಂಧ ಒಮ್ಮೆ ಗಂಟಲು ಸವರಿಕೊಂಡರು. ಅದೇಕೋ ಗಂಟಲು ಕೈ ಕೊಟ್ಟಿತ್ತು.

ಹೀಗಾಗಿ ತಮ್ಮೆದುರಿಗಿದ್ದ ಕಾರ್ಯಸೂಚಿಯನ್ನು ಓದಲಾಗದ ಇಂದಿರಾಗಾಂಧಿ ಮೌನವಾಗಿ ಸಭೆಯ ಸುತ್ತ ಕಣ್ಣಾಡಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಗಣ್ಯ ಅತಿಥಿಗಳು ತಮ್ಮತ್ತಲೇ ನೋಡುತ್ತಿದ್ದಾರೆ. ಹೀಗಾಗಿ ಮುಂದೇನು ಮಾಡಬೇಕು ಅಂತ ಇಂದಿರಾ ಗಾಂಧಿ ಯೋಚಿಸುತ್ತಿದ್ದಂತೆಯೇ ಸಭೆಯ ಕೊನೆಯಲ್ಲಿ ನಿಂತಿದ್ದ ಯುವ ಸಂಸದರೊಬ್ಬರು ಅವರ ಕಣ್ಣಿಗೆ ಕಾಣಿಸಿದ್ದಾರೆ.

ಆ ಯುವ ಸಂಸದರ ಕತೆಯಾದರೂ ಅಷ್ಟೇ. ಅವರಿಗೆ ಸಭೆಯಲ್ಲಿ ಕೂರಲು ಕುರ್ಚಿ ಸಿಕ್ಕಿಲ್ಲ. ಹೀಗಾಗಿ ಕುರ್ಚಿ ಹುಡುಕುತ್ತಿದ್ದ ಅವರಿಗೆ ಒಂದು ಕುರ್ಚಿ ಕಾಣಿಸಿದೆ. ಆದರೆ ಖಾಲಿ ಇದ್ದ ಕುರ್ಚಿ ಸ್ವತಃ ಪ್ರಧಾನಿ ಇಂದಿರಾಗಾಂಧಿ ಅವರ ಪಕ್ಕದ್ದು. ಹಾಗಂತಲೇ ಮುಂದೇನು ಮಾಡಬೇಕು ಎನ್ನುವಂತೆ ಅವರು ಇಂದಿರಾ ಕಡೆ ನೋಡಿ ದ್ದಾರೆ. ಆ ಕ್ಷಣದಲ್ಲಿ ಪ್ರಧಾನಿ ಇಂದಿರಾ ಮತ್ತು ಆ ಯುವ ಸಂಸದರ ಕಣ್ಣುಗಳ ಪರಸ್ಪರ ಸಂಧಿಸಿವೆ. ಹೀಗೆ ಪರಸ್ಪರ ಒಬ್ಬರನ್ನೊಬ್ಬರು ನೋಡುತ್ತಿದ್ದಂತೆಯೇ ಒಂದು ವಿಸ್ಮಯ ಸಂಭವಿಸಿದೆ. ಅದೆಂದರೆ ಇಂದಿರಾ ತಕ್ಷಣವೇ ಆ ಯುವ ಸಂಸದರನ್ನು ತಮ್ಮ ಬಳಿ ಬರುವಂತೆ ಸೂಚಿಸಿದ್ದಾರೆ. ಸ್ವತಃ ಪ್ರಧಾನಿಯೇ ತಮ್ಮ ಬಳಿ ಬರುವಂತೆ ಸೂಚಿಸಿದಾಗ ಸಂಸದ ಬೆರಗಾಗಿದ್ದಾರಾದರೂ ಅದೇ ಕಾಲಕ್ಕೆ ಪುಳಕಿತರಾಗಿದ್ದಾರೆ. ಹೀಗಾಗಿ ಅದೇ ಭಾವದಲ್ಲಿ ಇಂದಿರಾ ಹತ್ತಿರ ಹೋದಾಗ ಅವರು ತಮ್ಮ ಪಕ್ಕದ ಕುರ್ಚಿಯಲ್ಲಿ ಕೂರುವಂತೆ ಸೂಚಿಸಿದ್ದಾರೆ. ಹೀಗೆ ತಮ್ಮ ಪಕ್ಕ ಕುಳಿತ ಸಂಸದರ ಮುಂದೆ, ತಮ್ಮ ಮುಂದಿದ್ದ ಕಾರ್ಯಸೂಚಿಯನ್ನು ತಳ್ಳಿದ ಇಂದಿರಾ ಸಭೆಯಲ್ಲಿ ಅದನ್ನು ಓದುವಂತೆ, ಸಭೆಯ ನಡಾವಳಿಗಳನ್ನು ನೋಡಿಕೊಳ್ಳಲು ಸೂಚಿಸಿದ್ದಾರೆ.

ದೇಶದ ಪ್ರಧಾನಿ ತಮಗೆ ನೀಡಿದ ಈ ಜವಾಬ್ದಾರಿಯನ್ನು ಆ ಸಂಸದರು ಎಷ್ಟು ಚೆನ್ನಾಗಿ ನಿರ್ವಹಿಸಿದರೆಂದರೆ, ಅವರ ಅಸ್ಖಲಿತ ಭಾಷೆ ಇಂದಿರಾ ಸೇರಿದಂತೆ ಇಡೀ ಸಭೆಯನ್ನು ಮಂತ್ರಮುಗ್ಧಗೊಳಿಸಿದೆ. ಹಾಗಂತಲೇ ಸಭೆ ಮುಗಿದ ನಂತರ ಆ ಯುವ ಸಂಸದರನ್ನು ಮೆಚ್ಚುಗೆಯ ಕಣ್ಣು ಗಳಿಂದ ನೋಡಿದ ಇಂದಿರಾ ತಮ್ಮ ಕೈಲಿದ್ದ ಒಂದು ಚೀಟಿಯನ್ನು ಕೊಟ್ಟಿದ್ದಾರೆ. ನೋಡಿದರೆ ಅದರಲ್ಲಿ ‘ಕಮ್ ಅಂಡ್ ಮೀಟ್ ಮಿ’ ಅಂತ ಆಹ್ವಾನ. ಹೀಗೆ ತಮ್ಮನ್ನು ಭೇಟಿ ಮಾಡಲು ಖುದ್ದು ಪ್ರಧಾನಿಯೇ ಆಹ್ವಾನ ನೀಡಿದ್ದಾರೆಂದರೆ ಸುಮ್ಮನಿರಲು ಸಾಧ್ಯವೇ? ಹೀಗಾಗಿ ಆ ಸಂಸದರು ನಿಗದಿತ ಸಮಯಕ್ಕೆ ಇಂದಿರಾ ಅವರ ಚೇಂಬರಿಗೆ ಹೋಗಿ ಭೇಟಿ ಮಾಡಿದ್ದಾರೆ.

ಅಷ್ಟೊತ್ತಿಗಾಗಲೇ ಗಂಟಲು ಬೇನೆಯಿಂದ ಸ್ವಲ್ಪ ರಿಲೀಫ್ ಆಗಿದ್ದ ಇಂದಿರಾ ಯುವ ಸಂಸದರ ಪೂರ್ವಾಪರವನ್ನು ವಿಚಾರಿಸಿದ್ದಾರೆ. ಆಗ ಆ ಸಂಸದರು : ಮೇಡಂ, ನನ್ನ ಹೆಸರು ಎಸ್. ಎಂ. ಕೃಷ್ಣ. ಕರ್ನಾಟಕದ ಮಂಡ್ಯ ಲೋಕ ಸಭಾ ಕ್ಷೇತ್ರದಿಂದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಪ್ರತಿನಿಽಯಾಗಿ ಸಂಸತ್ತಿಗೆ ಅಯ್ಕೆ ಯಾಗಿದ್ದೇನೆ ಅಂತ ವಿವರಿಸಿದ್ದಾರೆ. ಆಗ ತುಂಬ ವಿಶ್ವಾಸದಿಂದ ಮಾತನಾಡಿದ ಇಂದಿರಾ ಗಾಂಽ ಅವರು, ನೀವು ಪ್ರಜಾ ಸೋಷಿಯಲಿಸ್ಟ್ ಪಾರ್ಟಿ ಯವರು ಏಕೆ ಹೋರಾಡುತ್ತಿದ್ದೀರೋ? ಅದನ್ನು ಜಾರಿಗೊಳಿಸಲೆಂದೇ ನಮ್ಮ ಪಕ್ಷ, ಸರ್ಕಾರ ಹೋರಾಡುತ್ತಿದೆ. ಹೀಗಾಗಿ ನೀವೆಲ್ಲ ಪ್ರತ್ಯೇಕವಾಗಿರುವ ಬದಲು ಕಾಂಗ್ರೆಸ್ ಪಕ್ಷಕ್ಕೇ ಬನ್ನಿ ಅಂತ ಅಹ್ವಾನ ನೀಡಿದ್ದಾರೆ. ಹೀಗೆ ಪ್ರಧಾನಿ ನೀಡಿದ ಆಹ್ವಾನದ ಬಗ್ಗೆ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ವಿವರಿಸಿದ್ದಾರಾದರೂ, ಸಭೆ ಅದನ್ನು ಒಪ್ಪಿಲ್ಲ.

ಹೀಗಾಗಿ ತಮ್ಮ ಪಕ್ಷದ ನಿಲುವನ್ನು ಕೃಷ್ಣ ಅವರು ಇಂದಿರಾಗೆ ಹೇಳಿದರೆ, ಯಾರೂ ಬರದಿದ್ದರೆ ನೀವಾದರೂ ಬನ್ನಿ. ನೀವು ಬೆಳೆಯುವ ದಾರಿ ದೊಡ್ಡದಿದೆ ಎಂದರಂತೆ. ಇಂದಿರಾಗಾಂಧಿ ಅವರ ಈ ವಿಶ್ವಾಸಪೂರ್ವಕ ಆಹ್ವಾನವನ್ನು ತಿರಸ್ಕರಿಸಲು ಕೃಷ್ಣ ಅವರಿಗೆ ಸಾಧ್ಯವಾಗಲೇ ಇಲ್ಲ. ಹೀಗಾಗಿ ಒಂದು ದಿನ ಅವರು ಕಾಂಗ್ರೆಸ್ ಹಡಗು ಹತ್ತಿದರು. ಇಂದಿರಾ ಹೇಳಿದಂತೆ ತಮ್ಮ ಬದುಕಿನಲ್ಲಿ ಬಹು ದೊಡ್ಡ ಹಾದಿಯನ್ನು ಕ್ರಮಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

3 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

9 mins ago

ಮಳವಳ್ಳಿ: ಸಿಡಿ ಹಬ್ಬಕ್ಕೆ ಸಿಂಗಾರಗೊಂಡ ಪಟ್ಣಣ

ಮಾಗನೂರು ಶಿವಕುಮಾರ್ ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ  ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ…

13 mins ago

ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ದುಪ್ಪಟ್ಟು ಹಣ ವಸೂಲಿ..!

ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್ ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು…

19 mins ago

ವಿಶ್ವದರ್ಜೆ ಫುಟ್‌ಪಾತ್ ನಿರ್ಮಾಣಕ್ಕೆ ಪ್ಲಾನ್!

ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…

23 mins ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

10 hours ago