Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ಓದುಗರ ಪತ್ರ: ಜಿಲ್ಲಾಧಿಕಾರಿಗಳ ನಡೆ ಶ್ಲಾಘನೀಯ

ಹೆಚ್.ಡಿ.ಕೋಟೆ ಪುರಸಭೆ ಸದಸ್ಯರ ಮನೆ ಮುಂಭಾಗದಲ್ಲಿ ನಡೆದ ರಸ್ತೆ ಕಾಮಗಾರಿಯೇ ಕಳಪೆಯಿಂದ ಕೂಡಿದ್ದು, ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಪರಿಶೀಲನೆ ನಡೆಸಿ ಇಂಜಿನಿಯರನ್ನು ಅಮಾನತ್ತುಗೊಳಿಸಿರುವುದಾಗಿ ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ. ಇದು ಜಿಲ್ಲಾಧಿಕಾರಿಗಳ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಇಂತಹ ಕೆಲಸಗಳಿಂದ ಅವರು ಸಾರ್ವಜನಿಕರ ವಿಶ್ವಾಸ ಗಳಿಸುವ ಜತೆಗೆ ಇತರೆ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದಂತಾಗಿದೆ. ಬಹುತೇಕ ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಗೆ ಒಳಪಡುವ ರಸ್ತೆ, ಚರಂಡಿ ಹಾಗೂ ಇನ್ನಿತರ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು, ಇದರಿಂದ ಬೇಸತ್ತ ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ. ಮುಂದಿನ ದಿನಗಳಲ್ಲಿಯೂ ಕಾಮಗಾರಿಗಳು ನಡೆಯುವ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಇದೇ ರೀತಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ.
ಬಿ.ಎಸ್.ಸುನಿಲ್ ಕುಮಾರ್, ಬನ್ನೂರು, ತಿ.ನರಸೀಪುರ ತಾ.

Tags: