ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಈ ಯೋಜನೆ ಗಳು ಎಂದು ಸಮರ್ಥಿಸಿಕೊಂಡಿದ್ದಾರೆ. ಇದಲ್ಲದೆ, ಹಲವಾರು ಅಭಿವೃದ್ಧಿ ಕಾರ್ಯ ಗಳನ್ನೂ ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಸ್ಥರಾಗಿ ಅತ್ಯಂತ ಜವಾಬ್ದಾರಿಯುತವಾಗಿಯೇ ನಡೆದುಕೊಳ್ಳುತ್ತಿದ್ದಾರೆ.
ಜನರ ಸಮಸ್ಯೆಗಳ ತುರ್ತು ಪರಿಹಾರಕ್ಕಾಗಿ ಪ್ರಜಾಸೇವಾ ಎಂಬ ಹೊಸ ಇಲಾಖೆಯನ್ನು ಆರಂಭಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ರಾಜ್ಯದ ಎಲ್ಲಾ ಪಂಚಾಯಿತಿ, ವಾರ್ಡ್ ಗಳಲ್ಲಿ ಭಾರತ ಜೋಡೋ ಯುವ ಸಂಘ ಸ್ಥಾಪನೆ, ಇವುಗಳಿಗೆ ತಲಾ ೧೦ ಲಕ್ಷ ರೂ. ಘೋಷಣೆ, ರಾಜ್ಯ ದೆಲ್ಲೆಡೆ ‘ಬಿ’ ಯಿಂದ ‘ಎ’ಖಾತಾ ಪರಿವರ್ತನೆ ಭರವಸೆ, ಖಾಸಗಿ ವಲಯದ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ, ೭೨ ಸಾವಿರ ಸರ್ಕಾರಿ ಹುದ್ದೆಗಳಿಗೆ ೬ ತಿಂಗಳಲ್ಲಿ ನೇಮಕಾತಿ ಇತ್ಯಾದಿ ಘೋಷಣೆಗಳು ಅವರ ಜನಪರ ಆಡಳಿತದ ಮುನ್ಸೂಚನೆ ನೀಡಿವೆ.
ಆದರೆ, ಈ ಶತದಿನದ ಶಿವಕುಮಾರ್ ಅವರ ಆಡಳಿತದಲ್ಲಿ ಹಲವು ಸಂಕಷ್ಟಗಳೂ ಎದುರಾಗಿವೆ. ಸಚಿವರಾದ ಕೆಲವೇ ದಿನಗಳಲ್ಲಿ ಬಿ.ನಾಗೇಂದ್ರ ಅವರು ಈ ಮೊದಲೇ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪಿಯಾಗಿದ್ದು, ಪ್ರತಿಪಕ್ಷಗಳ ಒತ್ತಡದಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಕರಣ ಶಿವಕುಮಾರ್ ಅವರ ಕಾರ್ಯ ವೈಖರಿ ಕುರಿತು ಚರ್ಚೆಗೆ ಗ್ರಾಸ ಒದಗಿಸಿತು. ಇದಲ್ಲದೆ, ರಾಜ್ಯಾದ್ಯಂತ ಉದ್ಯಾನಗಳ ಅಭಿವೃದ್ಧಿಗಾಗಿ ರೂಪಿಸಿದ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದರೂ, ಸಾರ್ವಜನಿಕರಿಂದ ತೀವ್ರ ವಿರೋಧ ಎದುರಾದ ಹಿನ್ನೆಲೆಯಲ್ಲಿ ಅದನ್ನು ವಾಪಸ್ ಪಡೆಯಲಾಯಿತು. ರಾಜ್ಯದ ಪ್ರಗತಿಗೆ ಸಂಬಂಧಿಸಿದಂತೆ ಶಿವಕುಮಾರ್ ಅವರ ದೂರದೃಷ್ಟಿ ಉತ್ತಮವಾಗಿಯೇ ಇದೆ. ಆದರೆ, ಯೋಜನೆಗಳನ್ನು ಜಾರಿಗೊಳಿಸುವ ಹಾದಿಯಲ್ಲಿ ಎಚ್ಚರಿಕೆ ಅಗತ್ಯ ಇದೆ.
ಶಿವಕುಮಾರ್ ಅವರು ಮುಖ್ಯಮಂತ್ರಿ ಗಾದಿಗೆ ಏರಲು ಅನುಸರಿಸಿದ ಸಂಯಮ, ಮಹಾಮೌನ, ಮೃದುಮಾತಿನ ಧೋರಣೆಗಳು ಸಾರ್ವಜನಿಕ ವಲಯಲದಲ್ಲಿ ಅಚ್ಚರಿ ಮೂಡಿಸಿದ್ದವು. ಮುಖ್ಯಮಂತ್ರಿ ಸ್ಥಾನದತ್ತ ಅವರು ಇಟ್ಟಿದ್ದ ಚಿತ್ತ ಒಂದು ರೀತಿಯಲ್ಲಿ ತಪಸ್ಸಿನಂತಿತ್ತು. ಇದೀಗ ಅವರ ಆಡಳಿತದಲ್ಲಿ ಕೂಡ ಜನತೆ ಇಂತಹ ಸೂಕ್ಷ ನಡೆಯನ್ನು ನಿರೀಕ್ಷಿಸುತ್ತಿದ್ದಾರೆ. ಆದರೆ, ಈ ನೂರು ದಿನಗಳಲ್ಲೇ ಎಲ್ಲ ಬಗೆಯ ಅಭಿವೃದ್ಧಿ ಕಾರ್ಯಗಳೂ ಸಾಕಾರಗೊಳ್ಳಬೇಕು ಎಂದರೆ ಅದು ಅತಿಯಾದ ನಿರೀಕ್ಷೆಯಾಗುತ್ತದೆ. ಶಿವಕುಮಾರ್ ಅವರಿಗೆ ರಾಜಕೀಯ ವೈರಿಗಳನ್ನು ಸಮರ್ಥವಾಗಿ ಎದುರಿಸುವ ಚಾಕಚಕ್ಯತೆ ಇದೆ. ಅದನ್ನು ಅವರು ಹಲವಾರು ಸಂದರ್ಭಗಳಲ್ಲಿ ಸಾಬೀತುಪಡಿಸಿದ್ದಾರೆ ಎಂಬುದು ಗಮನಾರ್ಹ.
ಶಿವಕುಮಾರ್ ಅವರ ವಿರುದ್ಧ ಹಿಂದೆ ಭ್ರಷ್ಟಾಚಾರದ ಆರೋಪಗಳು ಕೇಳಿಬಂದವು. ಅವರು ಸೆರೆಮನೆ ವಾಸವನ್ನೂ ಅನುಭವಿಸಿ ಬಂದರು. ಆದರೆ ಯಾವತ್ತೂ ಅವರು ಕೈಗೊಂಡ ನಿರ್ಧಾರಗಳಿಂದ ಹಿಂದೆ ಸರಿಯಲಿಲ್ಲ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ನಿಷ್ಠೆಯಿಂದ ನಡೆದುಕೊಂಡರು. ಮುಖ್ಯಮಂತ್ರಿ ಸ್ಥಾನ ನೀಡುವುದು ವಿಳಂಬವಾದರೂ ವರಿಷ್ಠರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಿಲ್ಲ. ಎಲ್ಲವನ್ನೂ ಕಾಲವೇ ಹೇಳುತ್ತದೆ ಎಂಬಂತೆ ಸಾವಧಾನಚಿತ್ತದಿಂದ ವರ್ತಿಸಿದರು. ಬಹುಶಃ ಈಗ ಮುಖ್ಯಮಂತ್ರಿಯಾಗಿರುವ ಜನರು ಅವರಿಂದ ಅಂತಹ ದಿಟ್ಟ ಹಾಗೂ ಜನಪರ ನಿಲುವು ಹಾಗೂ ನಿರ್ಧಾರಗಳನ್ನು ನಿರೀಕ್ಷಿಸುತ್ತಿದ್ದಾರೆ.
” ಶಿವಕುಮಾರ್ ಅವರು ಮುಖ್ಯಮಂತ್ರಿ ಗಾದಿಗೆ ಏರಲು ಅನುಸರಿಸಿದ ಸಂಯಮ, ಮಹಾಮೌನ, ಮೃದುಮಾತಿನ ಧೋರಣೆಗಳು ಸಾರ್ವಜನಿಕ ವಲಯಲದಲ್ಲಿ ಅಚ್ಚರಿ ಮೂಡಿಸಿದ್ದವು. ಮುಖ್ಯಮಂತ್ರಿ ಸ್ಥಾನದತ್ತ ಅವರ ಇಟ್ಟಿದ್ದ ಚಿತ್ತದಲ್ಲಿ ಒಂದು ರೀತಿಯಲ್ಲಿ ತಪಸ್ಸಿನಂತಿತ್ತು. ಇದೀಗ ಅವರ ಆಡಳಿತದಲ್ಲಿ ಕೂಡ ಜನತೆ ಇಂತಹ ಸೂಕ್ಷ ನಡೆಯನ್ನು ನಿರೀಕ್ಷಿಸುತ್ತಿದ್ದಾರೆ.”
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…