Andolana originals

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ ಗಾರೆ ಕೆಲಸಗಾರ ಅಂಕಯ್ಯ ಹಾಗೂ ಲಕ್ಷ್ಮೀ ದಂಪತಿ ಪುತ್ರಿಯಾಗಿರುವ ಚೌಡಮ್ಮ ಈ ಸಾಧನೆ ಮಾಡಿದ್ದಾರೆ. ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಆಕೆ ನಿರೂಪಿಸಿದ್ದಾರೆ. ನಗರದ ಅಗ್ರಹಾರದಲ್ಲಿನ ನಟರಾಜ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಚೌಡಮ್ಮ ೬೦೦ಕ್ಕೆ ೫೭೦ ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.

ಚೌಡಮ್ಮ ಅವರ ತಂದೆ ಅಂಕಯ್ಯ ಅವರು ಗಾರೆ ಕೆಲಸದ ಸಂಪಾದನೆಯ ಹಣದಿಂದ ಮಗಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಗ್ರಾಮಿಣ ಭಾಗದ ಬಡ ಹುಡುಗಿಯಾದ ಚೌಡಮ್ಮಗೆ ಕಡಿಮೆ ಶುಲ್ಕದಲ್ಲಿ ನಟರಾಜ ಕಾಲೇಜಿನ ಆಡಳಿತ ಮಂಡಳಿ ಪ್ರವೇಶಾತಿ ನೀಡಿ ಮಾನವೀಯತೆ ಮೆರೆದಿದೆ. ಕಾಲೇಜಿನ ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದೊಂದಿಗೆ ವಿದ್ಯಾಭ್ಯಾಸ ಮುಂದುವರಿಸಿದ ಚೌಡಮ್ಮ, ಆತ್ಮ ವಿಶ್ವಾಸದಿಂದಲೇ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ಅಂತರ್ಜಾಲದ ಮೂಲಕ ತನ್ನ -ಲಿತಾಂಶವನ್ನು ವೀಕ್ಷಿಸಿದ ಚೌಡಮ್ಮ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಯಾಗಿರುವುದನ್ನು ಕಂಡು ಖುಷಿಯಾಗಿದ್ದಾರೆ.

ಪ್ರತಿದಿನ ಕಾಲೇಜಿಗೆ ಬರುವ ಮುನ್ನ ಆಕೆ ತನ್ನ ಅಣ್ಣ ನಡೆಸುತ್ತಿದ್ದ ಪಾನೀಪುರಿ ತಯಾರಿಕೆಗೆ ಬೇಕಾದ ಸಾಮಗ್ರಿಗಳನ್ನು ಸಿದ್ಧಗೊಳಿಸಿಕೊಟ್ಟು ಬರುತ್ತಿದ್ದರು. ಸಂಜೆ ಕೂಡ ಅಣ್ಣನಿಗೆ ಸಹಕಾರ ನೀಡುತ್ತಿದ್ದರು. ಕೆಲಸವೆಲ್ಲಾ ಮುಗಿದ ನಂತರ ಓದುತ್ತಿದ್ದ ಆಕೆ ಮಲಗುತ್ತಿದ್ದುದು ರಾತ್ರಿ ೧೨ ಗಂಟೆಗೆ, ಮತ್ತೆ ಮುಂಜಾನೆ ಬೇಗ ಎದ್ದು ಓದುತ್ತಿದ್ದುದನ್ನು ಹೆಮ್ಮೆಯಿಂದಲೇ ಹಂಚಿಕೊಳ್ಳುತ್ತಾರೆ.

ತಮ್ಮ ಮಕ್ಕಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕೆಂದು ಬಯಸುವ ಪೋಷಕರು, ಮಕ್ಕಳು ಕೇಳಿದಾಗ ಹಣ, ದ್ವಿಚಕ್ರ ವಾಹನ ಮುಂತಾದ ಎಲ್ಲ ಸೌಲಭ್ಯಗಳನ್ನು ಒದಗಿಸಿದರೂ ಕಠಿಣ ಶ್ರಮದ ಕೊರತೆಯಿಂದ ವಿದ್ಯಾಭ್ಯಾಸದಲ್ಲಿ ವಿಫಲವಾಗುವ ವಿದ್ಯಾರ್ಥಿಗಳಿಗೆ ಚೌಡಮ್ಮ ಮಾದರಿ ಎನಿಸಿದ್ದಾರೆ. ಮುಂದೆ ಉನ್ನತ ವ್ಯಾಸಂಗ ಮಾಡುವ ಆಸಕ್ತಿ ಇದೆ. ಆದರೆ, ಕಾಲೇಜು ಶುಲ್ಕವನ್ನು ಕಟ್ಟುವ ಶಕ್ತಿ ನಮ್ಮ ಕುಟುಂಬಕ್ಕಿಲ್ಲ. ಬ್ಯಾಂಕ್‌ನಲ್ಲಿ ಸಾಲ ಪಡೆಯಲು ನಮ್ಮ ಬಳಿ ಯಾವುದೇ ಆಸ್ತಿ ಇಲ್ಲ. ಹೀಗಾಗಿ ಪದವಿ ವ್ಯಾಸಂಗಕ್ಕೆ ಓದನ್ನು ಸೀಮಿತಗೊಳಿಸಲು ನಿರ್ಧರಿಸಿದ್ದೇನೆ ಎಂದು ಚೌಡಮ್ಮ ಹೇಳುತ್ತಾರೆ.

ಆಂದೋಲನ ಡೆಸ್ಕ್

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

7 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

47 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago