Andolana originals

ಪುರಸಭೆ ವರಿಷ್ಠರ ಚುನಾವಣೆಗೆ ಫೆ.೧೯ಕ್ಕೆ ಮುಹೂರ್ತ

ಪಿ.ಪಟ್ಟಣ: ಅಧಿಕಾರ ಹಿಡಿಯಲು ಜಾ.ದಳ ಕಾತರ; ಕಾಂಗ್ರೆಸ್ ಕಾರ್ಯತಂತ್ರ 

ನವೀನ್‌ಕುಮಾರ್ ಪಿರಿಯಾಪಟ್ಟಣ

ಪಿರಿಯಾಪಟ್ಟಣ: ಪುರಸಭೆ ಸದಸ್ಯರು ಬಹಳ ದಿನಗಳಿಂದ ಕಾಯುತ್ತಿದ್ದ ಪುರಸಭೆ ಅಧ್ಯಕ್ಷ,  ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಫೆ.೧೯ರ ಬುಧವಾರ ನಿಗದಿಯಾಗಿದೆ.

೨೦೨೪ರ ಮೇ ೯ರಂದು  ಈ ಹಿಂದಿನ ಅಧ್ಯಕ್ಷ ಕೆ.ಮಹೇಶ್ ಅವರ ಅಧಿಕಾರಾವಧಿ ಮುಕ್ತಾಯಗೊಂಡ ನಂತರ ಕಳೆದ ಹಲವು ತಿಂಗಳುಗಳಿಂದ ಚುನಾವಣೆ ಬಾಕಿ ಉಳಿದಿತ್ತು. ಈಗ ೮ ತಿಂಗಳುಗಳ ನಂತರ ಜನಪ್ರತಿನಿಧಿಗಳಿಗೆ ಅಧಿಕಾರ ಸಿಗುತ್ತಿದೆ.

೨೦೨೪ರ ಆಗಸ್ಟ್ ೫ರಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ, ಅಧ್ಯಕ್ಷ ಸ್ಥಾನವನ್ನು ಪ್ರವರ್ಗ ಎ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲುಗೊಳಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಮೀಸಲಾತಿ ಪುನರಾವರ್ತನೆಯಾಗಿದೆ ಎಂದು ಪ್ರಶ್ನಿಸಿ ಕಾಂಗ್ರೆಸ್ ಪುರಸಭಾ ಸದಸ್ಯೆ ರತ್ನಮ್ಮ ಪಿ.ಪಿ.  ಮಹದೇವ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಚುನಾವಣೆಗೆ ತಡೆಯಾಜ್ಞೆ ತಂದಿದ್ದರು. ಇದರಿಂದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನನೆಗುದಿಗೆ ಬಿದ್ದಿತ್ತು. ಅಂತಿಮವಾಗಿ ಉಚ್ಚ ನ್ಯಾಯಾಲಯ ಜ.೧೦ರಂದು ಅರ್ಜಿಯನ್ನು ವಜಾಗೊಳಿಸಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಫೆ.೧೯ರಂದು ಚುನಾವಣೆಗೆ ಸಭೆ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ. ಫೆ.೧೯ರ ಬುಧವಾರ ಬೆಳಿಗ್ಗೆ ೧೦ರಿಂದ ೧೨ಗಂಟೆಯವರೆಗೆ ನಾಮಪತ್ರ ಸ್ವೀಕಾರ, ಮಧ್ಯಾಹ್ನ ೧೨ರಿಂದ ೧೨.೩೦ರವರೆಗೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಮಧ್ಯಾಹ್ನ ೨ ಗಂಟೆಯ ನಂತರ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿಯಾದ ತಹಸಿಲ್ದಾರ್ ತಿಳಿಸಿದ್ದಾರೆ.

ಪೈಪೋಟಿ:  ಪಿರಿಯಾಪಟ್ಟಣ ಪುರಸಭೆಯಲ್ಲಿ ಒಟ್ಟು ೨೩ ಸದಸ್ಯರ ಬಲವಿದ್ದು, ಒಬ್ಬ ಶಾಸಕರು ಮತ್ತು ಒಬ್ಬ ಸಂಸದರ ಮತ ಸೇರಿ ಒಟ್ಟು ೨೫ ಮಂದಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.  ಇದರಲ್ಲಿ ೧೪ ಮಂದಿ ಜಾ.ದಳ ಸದಸ್ಯರು, ೮ ಮಂದಿ ಕಾಂಗ್ರೆಸ್ ಸದಸ್ಯರಿದ್ದಾರೆ. ಓರ್ವ   ಪಕ್ಷೇತರ ಸದಸ್ಯರಿದ್ದಾರೆ.

ಜಾ.ದಳದಲ್ಲಿ ಪ್ರವರ್ಗ- ಎನಲ್ಲಿ ರೊಹಿಲ್ಲಾಖಾನಂ, ಪುಷ್ಪ ಸುರೇಶ್, ಪ್ರಕಾಶ್ ಸಿಂಗ್, ನೂರ್‌ಜಾನ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಮಂಜುನಾಥ್‌ಸಿಂಗ್, ಮಹೇಶ್,  ಉಪಾಧ್ಯಕ್ಷರಾಗಿದ್ದ ನಾಗರತ್ನ ಉಮೇಶ್, ಆಶಾ ಚಂದ್ರು ಕೂಡ ಅವಕಾಶ ಬಯಸಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

ಉಪಾಧ್ಯಕ್ಷ ಸ್ಥಾನಕ್ಕೆ ಜಾ.ದಳದಲ್ಲಿ ಭಾರತಿ,  ಸುವರ್ಣ ರವಿ ನಡುವೆ  ಪೈಪೋಟಿ ಎದುರಾಗಿದೆ.  ಕಾಂಗ್ರೆಸ್ ನಿಂದ ಅಬ್ದುಲ್ ಅರ್ಷದ್ ಪ್ರವರ್ಗ-ಎನಲ್ಲಿ ಬರುತ್ತಾರಾದರೂ ಅವರು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದು, ಇತ್ತ ಜಾ.ದಳದಲ್ಲಿಯೂ ಗುರುತಿಸಿಕೊಂಡಿಲ್ಲ.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಚಾಮರಾಜು ಸ್ಪರ್ಧೆಗೆ ಅವಕಾಶ ಇದೆ. ಶಾಸಕ ಕೆ.ವೆಂಕಟೇಶ್ ಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ಪ್ರತಿಷ್ಠೆಯಾಗಿದೆ. ಇತ್ತ ಬಿಜೆಪಿ ಸಂಸದರ ಮತ ಕೂಡ ಮೈತ್ರಿಯ ಭಾಗವಾಗಿರುವುದರಿಂದ ಪೈಪೋಟಿ ಸಾಕಷ್ಟಿದೆ.

” ಜಾ.ದಳದಲ್ಲಿ ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಇದ್ದು ಸದಸ್ಯರ ಅಭಿಪ್ರಾಯ ಸಂಗ್ರಹಿಸಿ, ಪಕ್ಷ ನೀಡುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ಇಲ್ಲಿ ಗುಂಪುಗಾರಿಕೆಗೆ ಅವಕಾಶವಿಲ್ಲ. ಮತ್ತೆ ಅಧಿಕಾರವನ್ನು ನಮ್ಮ ಪಕ್ಷವೇ ಹಿಡಿಯಲಿದೆ.”

-ಕೆ.ಮಹದೇವ್,   ಮಾಜಿ ಶಾಸಕರು, ಪಿರಿಯಾಪಟ್ಟಣ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

10 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

11 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

11 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

12 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

12 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

13 hours ago