Andolana originals

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ

ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ

ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ 

ಮಡಿಕೇರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಜಾಗತಿಕ ಸರಕು ಸರಬರಾಜು ಸರಪಳಿಗೆ ಹೊಡೆತ ಬಿದ್ದಿದ್ದು, ಕಾಫಿ ಕೃಷಿ, ಉದ್ಯಮದ ಮೇಲೆಯೂ ಪರಿಣಾಮ ಬೀರಿದೆ. ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಈ ಎಲ್ಲಾ ಅಂಶಗಳು ಸೇರಿ ಕಾಫಿ ವಲಯದಲ್ಲಿ ಗೊಂದಲದ ವಾತಾವರಣವನ್ನು ನಿರ್ಮಾಣ ಮಾಡಿವೆ.

ಕೊಡಗು ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ಭಾರತದ ಕಾಫಿ ಉದ್ಯಮ ಬಹುಪಾಲು ರಫ್ತಿನ ಮೇಲೆ ಅವಲಂಬಿತವಾಗಿದೆ. ಯುರೋಪ್ ಮತ್ತು ಮಧ್ಯಪ್ರಾಚ್ಯ ದೇಶಗಳು ಪ್ರಮುಖ ಮಾರುಕಟ್ಟೆಗಳಾಗಿದ್ದು, ಈಗಿನ ಪರಿಸ್ಥಿತಿಯಲ್ಲಿ ಸಾಗಣೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿರುವುದರಿಂದ ವ್ಯಾಪಾರ ಚಟುವಟಿಕೆಗಳು ನಿಧಾನಗತಿಯಲ್ಲಿ ಸಾಗಿವೆ. ಹಡಗುಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗದ ಕಾರಣ, ರಫ್ತು ಆದೇಶಗಳು ಮುಂದೂಡಲ್ಪಡುತ್ತಿದ್ದು, ಇದು ಆರ್ಥಿಕ ಚಟುವಟಿಕೆಯ ಮೇಲೂ ಪರಿಣಾಮ ಬೀರಿದೆ.

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡ ಸಮುದ್ರ ಮಾರ್ಗಗಳ ಮೇಲೆ ಕವಿದಿದೆ. ಹಾಗಾಗಿ ಸಮುದ್ರ ಮಾರ್ಗದಲ್ಲಿ ಸಂಚರಿಸುವ ಹಡಗುಗಳಿಗೆ ವಿಮಾ ಕಂಪೆನಿಗಳು ಹೆಚ್ಚುವರಿ ಪ್ರೀಮಿಯಂ ವಿಽಸುತ್ತಿವೆ. ಇದರಿಂದ ಶಿಪ್ಪಿಂಗ್ ಇನ್ಶೂರೆನ್ಸ್ ವೆಚ್ಚ ಏರಿಕೆಯಾಗಿ, ಒಟ್ಟು ರಫ್ತು ವೆಚ್ಚವೂ ಹೆಚ್ಚಾಗಿದೆ. ಈ ಹೆಚ್ಚುವರಿ ವೆಚ್ಚವನ್ನು ಕೆಲವೊಮ್ಮೆ ರಫ್ತುದಾರರು ಹೊತ್ತುಕೊಂಡರೆ, ಕೆಲವೊಮ್ಮೆ ಖರೀದಿದಾರರಿಗೆ ಇದು ಹೊರೆಯಾಗುತ್ತದೆ. ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಉಂಟಾಗುತ್ತಿದೆ.

ರೋಸ್ಟಿಂಗ್ ಘಟಕಗಳು ಶೇ.೯೦ಕ್ಕೂ ಹೆಚ್ಚು ಎಲ್‌ಪಿಜಿ ಮೇಲೆ ಅವಲಂಬಿತವಾಗಿದೆ. ಈಗಾಗಲೇ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿದ್ದು, ರೋಸ್ಟಿಂಗ್ ಘಟಕಗಳು ಸಂಕಷ್ಟಕ್ಕೆ ಸಿಲುಕಿವೆ. ರೋಸ್ಟಿಂಗ್ ಉದ್ಯಮಕ್ಕೆ ಹೊಡೆತ ಬಿದ್ದಿರುವುದರಿಂದ ಮೌಲ್ಯವಽತ ಉತ್ಪನ್ನಗಳ ಉತ್ಪಾದನೆ ಕುಂಠಿತವಾಗಿದ್ದು, ಡೊಮೆಸ್ಟಿಕ್ ಮಾರುಕಟ್ಟೆಗೆ ಕಾಫಿ ಪೂರೈಕೆ ಕಷ್ಟವಾಗುತ್ತಿದೆ. ಭಾರತದಲ್ಲಿ ಬಹುಪಾಲು ಹೋಟೆಲ್‌ಗಳಲ್ಲಿ ಫಿಲ್ಟರ್‌ಕಾಫಿ ಬಳಸುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಕೆ ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಕಾಫಿ ಉತ್ಪಾದನೆ ಕುಸಿತ ಸಾಧ್ಯತೆ..!: 

ರಸಗೊಬ್ಬರದ ವಿಚಾರದಲ್ಲಿಯೂ ಸಂಕಷ್ಟ ಸ್ಥಿತಿ ನಿರ್ಮಾಣವಾಗಿದೆ. ಯುರೋಪ್‌ನಿಂದ ಆಗುವ ಆಮದು ವ್ಯತ್ಯಯಗೊಂಡರೆ, ಮುಂದಿನ ಕಾಫಿ ಹಂಗಾಮಿನಲ್ಲಿ ಉತ್ಪಾದನೆ ಕುಸಿತ ಕಾಣುವ ಸಾಧ್ಯತೆ ಇದೆ. ಈಗಾಗಲೇ ಕೃಷಿ ಉತ್ಪಾದನಾ ವೆಚ್ಚಗಳು ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ರಸಗೊಬ್ಬರದ ಬೆಲೆಯೂ ಏರಿಕೆ ಕಂಡರೆ ಬೆಳೆಗಾರರ ಮೇಲೆ ಮತ್ತಷ್ಟು ಒತ್ತಡವನ್ನು ಉಂಟುಮಾಡಲಿದೆ. ಮಧ್ಯಪ್ರಾಚ್ಯದ ದೇಶಗಳು ಜಾಗತಿಕ ಇಂಧನ ಸರಬರಾಜಿನ ಪ್ರಮುಖ ಕೇಂದ್ರವಾಗಿರುವುದರಿಂದ, ಅಲ್ಲಿ ಉಂಟಾಗುವ ಯಾವುದೇ ಅಸ್ಥಿರತೆಯು ಡೀಸೆಲ್ ಮತ್ತು ಎಲ್‌ಪಿಜಿ ಬೆಲೆ ಹಾಗೂ ಲಭ್ಯತೆಯ ಮೇಲೆ ಪರಿಣಾಮ ಬೀರುತ್ತದೆ. ಕೊಡಗು ಜಿಲ್ಲೆಯಂತಹ ಗುಡ್ಡಗಾಡು ಪ್ರದೇಶದಲ್ಲಿ ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಡೀಸೆಲ್ ಮೇಲೆ ಅವಲಂಬಿತವಾಗಿರುವುದರಿಂದ, ಇಂಧನದ ಅಭಾವ ಉಂಟಾದರೆ ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡುವುದು ದೊಡ್ಡ ಸವಾಲಾಗುತ್ತದೆ.

” ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಕಾಫಿ ಕೃಷಿ ಮೇಲೆಯೂ ಆಗತೊಡಗಿದೆ. ಸದ್ಯ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗಿದೆಯಾದರೂ ಯಾವ ಕ್ಷಣದಲ್ಲಾದರೂ ಏರುಪೇರಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ವಿಮಾ ಹೆಚ್ಚಳ, ಕಂಟೇನರ್ ಅಲಭ್ಯತೆಯ ಸಮಸ್ಯೆಗಳು ಒಂದೆಡೆಯಾದರೆ, ಎಲ್‌ಪಿಜಿ ಅಲಭ್ಯತೆ ರೋಸ್ಟಿಂಗ್ ಉದ್ಯಮದ ಮೇಲೆ ಆಗಿದೆ. ದೇಶಿ ಮಾರುಕಟ್ಟೆಯಲ್ಲೂ ಸಮಸ್ಯೆ ಉಂಟಾಗುತ್ತಿದೆ.”

-ವಿಶ್ವನಾಥ್, ಉಪಾಧ್ಯಕ್ಷರು, ರಾಜ್ಯ ಬೆಳೆಗಾರರ ಒಕ್ಕೂಟ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago