Andolana originals

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ

ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ

ಎಚ್.ಡಿ.ಕೋಟೆ: ಗಿರಿಜನ ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರ ಸ್ಥಾನವಾದ ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪದಿಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮುಜುಗರ ಪಡುವಂತಾಗಿದೆ.

ತಾಲ್ಲೂಕಿನ ಗಡಿ ಭಾಗದ ಜಕ್ಕಹಳ್ಳಿ ಗ್ರಾಮದಲ್ಲಿರುವ ಗಿರಿಜನ ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರು ಬಹಿರಂಗವಾಗಿ ನಡೆಸುತ್ತಿರುವ ಸರಸ ಸಲ್ಲಾಪದಿಂದ ವಿದ್ಯಾರ್ಥಿಗಳು ಮಾತ್ರವಲ್ಲದೆ, ಸಂಬಂಧಪಟ್ಟ ಇಲಾಖೆಯವರೂ ತಲೆ ತಗ್ಗಿಸುವಂತಾಗಿದೆ.

ಈ ಭಾಗದಲ್ಲಿ ಗಿರಿಜನ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಆಶ್ರಮ ಶಾಲೆಗಳನ್ನು ತೆರೆದು ಪ್ರತಿ ವರ್ಷ ಲಕ್ಷಾಂತರ ರೂ. ಅನುದಾನವನ್ನು ಪರಿಶಿಷ್ಟ ಪಂಗಡ ಇಲಾಖೆಗೆ ನೀಡುತ್ತಿದೆ.ಗಿರಿಜನ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರುವ ಸಲುವಾಗಿ ಇಂಥ ಆಶ್ರಮ ಶಾಲೆಗಳನ್ನು ಅವಲಂಬಿಸಿಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ.

ಅನೇಕ ಮೂಲಸೌಕರ್ಯಗಳ ಕೊರತೆ ಮತ್ತು ಆಹಾರ ಪದಾರ್ಥದ ಸಮಸ್ಯೆಗಳು ಎದುರಾದರೂ ಅವುಗಳನ್ನು ಲೆಕ್ಕಿಸದೆ ಆಶ್ರಮ ಶಾಲೆಗಳಲ್ಲಿ ವಾಸ್ತವ್ಯ ಮಾಡಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಹಾಡಹಗಲೇ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇರುವ ಸಂದರ್ಭದಲ್ಲಿ ಇಲ್ಲಿನ ಅಡುಗೆ ಸಿಬ್ಬಂದಿ ಸಿನಿಮಾ ಶೈಲಿಯಲ್ಲಿ ಸರಸ ಸಲ್ಲಾಪ ನಡೆಸುತ್ತಿದ್ದಾರೆ. ಇವರ ಚೆಲ್ಲಾಟ ನೋಡಿದ ಅನೇಕ ವಿದ್ಯಾರ್ಥಿನಿಯರು ತಲೆ ತಗ್ಗಿಸಿಕೊಂಡು ಹೋಗು ವಂತಾಗಿದೆ.

ಆದರೆ, ಶಾಲೆಯ ಜವಾಬ್ದಾರಿ ಹೊತ್ತಿರುವ ವಾರ್ಡನ್ ಮತ್ತು ಮುಖ್ಯ ಶಿಕ್ಷಕರು ಆಶ್ರಮ ಶಾಲೆಗಳಲ್ಲಿ ವಾಸ್ತವ್ಯ ಹೂಡದೇ ಮತ್ತು ಸಮರ್ಪಕವಾಗಿ ಕೆಲಸ ನಿರ್ವಹಿಸದೇ ಇರುವುದರಿಂದ ಇಂತಹ ಪ್ರಕರಣಗಳು ನಡೆಯುತ್ತಿವೆ ಎನ್ನುವುದು ಸಾರ್ವಜ ನಿಕರ ಆರೋಪ.

ಗಡಿ ಭಾಗದ ಆದಿವಾಸಿ ಮತ್ತು ಬಡಜನರು, ರೈತರ ಮಕ್ಕಳು ಶಿಕ್ಷಣ ಪಡೆಯುವುದೇ ಬಹಳಷ್ಟು ಕಷ್ಟ. ಇಂತಹ ಸಂದರ್ಭದಲ್ಲಿ ಆಶ್ರಮ ಶಾಲೆಯಲ್ಲಿ ನಡೆಯುತ್ತಿರುವ ಈ ರೀತಿಯ ಪ್ರಕರಣಗಳಿಂದ ಪೋಷಕರು ತಮ್ಮ ಮಕ್ಕಳನ್ನು ಆಶ್ರಮ ಶಾಲಾ ಕಾಲೇಜುಗಳಿಗೆ ಕಳಿಸಲು ಹಿಂದೇಟು ಹಾಕುವಂತಾಗಿದೆ. ತಾಲ್ಲೂಕಿನ ಪ್ರತಿಯೊಂದು ಆಶ್ರಮ ಶಾಲೆಯಲ್ಲೂ ಒಂದೊಂದು ತರಹದ ಸಮಸ್ಯೆಗಳು ಎದುರಾಗುತ್ತಿರುವುದರಿಂದ ಸಂಬಂಧಪಟ್ಟ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಽಕಾರಿಗಳು ಇತ್ತ ಗಮನಹರಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒತ್ತು ಕೊಡುವ ಜೊತೆಗೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕೆಲಸ ನಿರ್ವಹಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.

” ಆಶ್ರಮ ಶಾಲೆಯಲ್ಲಿ ನಡೆಯುತ್ತಿರುವ ಸಿಬ್ಬಂದಿಯ ಸರಸ ಸಲ್ಲಾಪ ಮತ್ತು ಮೂಲಸೌಕರ್ಯಗಳ ಕೊರತೆ ಬಗ್ಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಆತಂಕ ಎದುರಾಗಿದೆ.”

-ಮನೋಜ್, ಪೋಷಕರು

” ಆಶ್ರಮ ಶಾಲೆಯಲ್ಲಿ ಯಾರೇ ಸರಸ ಸಲ್ಲಾಪ ನಡೆಸಿದರೂ ಅದು ತಪ್ಪು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲು ಶಕ್ತಿಮೀರಿ ಕೆಲಸ ಮಾಡುತ್ತಿದ್ದೇವೆ.”

-ಮಲ್ಲೇಶ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ

 

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

7 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

8 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

8 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

8 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

8 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

13 hours ago