ದೂರ ನಂಜುಂಡಸ್ವಾಮಿ
ರಸ್ತೆ ಅಭಿವೃದ್ಧಿಗೆ ಸಚಿವರೇ ಭೂಮಿಪೂಜೆ ನಡೆಸಿದ್ದರೂ ನಡೆಯದ ಕಾಮಗಾರಿ
ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ಉದ್ಬೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಉದ್ಬೂರು ಗ್ರಾಮದ ಮುಖ್ಯರಸ್ತೆಯಲ್ಲಿ ಡಾಂಬರು ಕಿತ್ತು ಬಂದು ಗುಂಡಿಗಳು ನಿರ್ಮಾಣವಾಗಿ ರಸ್ತೆ ತೀರಾ ಹದಗೆಟ್ಟಿರುವುದರಿಂದ ಸವಾರರು ನಿತ್ಯ ತೊಂದರೆ ಎದುರಿಸುತ್ತಿದ್ದಾರೆ.
ರಸ್ತೆ ಕಾಮಗಾರಿಗೆಂದು ರಾಜ್ಯ ಸರ್ಕಾರದಿಂದ ೧೦ ಕೋಟಿ ರೂ. ಬಿಡುಗಡೆಯಾಗಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಸಹ ನೆರವೇರಿಸಿ ನಾಲ್ಕೂವರೆ ತಿಂಗಳುಗಳು ಕಳೆಯುತ್ತ ಬಂದರೂ ಕಾಮಗಾರಿ ಇನ್ನೂ ಪ್ರಾರಂಭವಾಗಿಲ್ಲ.
ಇದನ್ನು ಓದಿ:ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಮುಹೂರ್ತ ಆಚರಣೆ
ಉದ್ಬೂರಿನ ಕೆರೆ ಸಮೀಪ ಬರುವ ಈ ರಸ್ತೆಯಲ್ಲಿ ದಿನನಿತ್ಯ ಹುಲ್ಲಹಳ್ಳಿ – ಮೈಸೂರು ಮಾರ್ಗವಾಗಿ ಬಿಡುವಿಲ್ಲದೆ ವಾಹನಗಳು ಸಂಚರಿಸುತ್ತಿರುತ್ತವೆ. ರೈತರು, ಕೂಲಿ ಕಾರ್ಮಿಕರು ದಿನನಿತ್ಯದ ಕೆಲಸಕ್ಕಾಗಿ ಇಲ್ಲಿ ಸಂಚರಿಸುವ ವೇಳೆ ಹರಸಾಹಸ ಪಡಬೇಕಾಗಿದೆ. ದ್ವಿಚಕ್ರವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿದೆ. ರಾತ್ರಿ ವೇಳೆಯಲ್ಲಿ ಇಲ್ಲಿ ಗುಂಡಿ ಇರುವುದೇ ಕಾಣಿಸುವುದಿಲ್ಲ. ಈ ರಸ್ತೆಯಲ್ಲಿ ೩ ತಿಂಗಳುಗಳಿಂದ ಹಲವಾರು ಅಪಘಾತಗಳು ಸಂಭವಿಸಿವೆ.
ಕಳೆದ ಏಪ್ರಿಲ್ ೨೩ರಂದು ಶಾಸಕ ಜಿ.ಟಿ.ದೇವೇ ಗೌಡರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಮಾನಂದವಾಡಿ ಮುಖ್ಯರಸ್ತೆ ಉದ್ಬೂರು ಗೇಟ್‌ನಿಂದ ಉದ್ಬೂರು ಗ್ರಾಮದವರೆಗೆ ಜೋಡಿರಸ್ತೆ ನಿರ್ಮಾಣ ಹಾಗೂ ಉದ್ಬೂರು ಗ್ರಾಮದ ಒಳಗಡೆ ಚರಂಡಿ ನಿರ್ಮಾಣ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದು, ಇದಾಗಿ ನಾಲ್ಕೂವರೆ ತಿಂಗಳುಗಳೇ ಕಳೆಯುತ್ತಾ ಬಂದರೂ ಕಾಮಗಾರಿ ಪ್ರಾರಂಭ ವಾಗಿಲ್ಲ. ಲೋಕೋಪಯೋಗಿ ಇಲಾಖೆ ಯವರು ಗುಂಡಿ ಮುಚ್ಚುವ ಕಾರ್ಯಕ್ಕೂ ಮುಂದಾಗಿಲ್ಲ.
ಇದನ್ನು ಓದಿ:ಬಳ್ಳಾರಿ ಜೈಲಿಗೆ ನಟ ದರ್ಶನ್ : ಆದೇಶ ಕಾಯ್ದಿರಿಸಿದ ಕೋರ್ಟ್
ಗ್ರಾಮಸ್ಥರೇ ಆಗಾಗ್ಗೆ ಗುಂಡಿಗೆ ಮಣ್ಣು ಸುರಿಯುತ್ತಿದ್ದಾರೆ. ಈಗ ಸತತವಾಗಿ ಮಳೆ ಬೀಳುತ್ತಿರುವುದರಿಂದ ಉದ್ಬೂರು ಕೆರೆ ಸಮೀಪ ಹಾಗೂ ಇಟ್ಟಿಗೆಗೂಡು ಸಮೀಪ ಗುಂಡಿಗಳಲ್ಲಿ ನೀರು ತುಂಬಿಕೊಂಡು ವಾರಕ್ಕೆ ಇಬ್ಬರಿಂದ ಮೂವರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಸದ್ಯಕ್ಕೆ ಗುಂಡಿಗಳನ್ನಾದರೂ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ರೈತರು, ಕಾರ್ಮಿಕರು, ವಾಹನ ಸವಾರರು ಒತ್ತಾಯಿಸಿದ್ದಾರೆ.
” ಈ ರಸ್ತೆಯಲ್ಲಿ ಸಂಚರಿಸುವಾಗ ಜೀವವನ್ನು ಒಂದು ಕೈಯಲ್ಲಿ ಹಿಡಿದು ಸಂಚರಿಸಬೇಕಾಗಿದೆ. ಇಲ್ಲಿ ದಿನನಿತ್ಯ ಒಂದಲ್ಲ ಒಂದು ಅಪಘಾತ ನಡೆಯುತ್ತಲೇ ಇದೆ. ಭೂಮಿಪೂಜೆ ನಡೆಸಿದ್ದರೂ ಕಾಮಗಾರಿ ಪ್ರಾರಂಭವಾಗದೆ ವಾಹನ ಸವಾರರ ಜೀವಕ್ಕೆ ಸಂಚಕಾರವಾಗಿ ಪರಿಣಮಿಸಿದೆ.”
-ಪ್ರಕಾಶ್, ವಕೀಲರು, ತಳೂರು ಗ್ರಾಮ
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…