Andolana originals

ಬಿಡಾಡಿ ದನಗಳ ಕಾಟ; ಶ್ರೀಸಾಮಾನ್ಯರಿಗೆ ಸಂಕಷ್ಟ

ಮೈಸೂರು: ನಗರದ ಕೆಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಚಿಕ್ಕ ಮಕ್ಕಳು ಭಯದಲ್ಲೇ ಓಡಾಡಿದರೆ, ಎಲ್ಲೆಂದರಲ್ಲಿ ಅಡ್ಡಾಡುವ ಬಿಡಾಡಿ ದನಗಳಿಂದ ವಾಹನ ಸವಾರರು ಮತ್ತು ಪಾದಚಾರಿಗಳ ಪ್ರಾಣಕ್ಕೆ ಕಂಟಕ ಎದುರಾಗುತ್ತಿದೆ.

ಮೈಸೂರು ವಿಶಾಲ ರಸ್ತೆಗಳನ್ನು ಹೊಂದಿರುವ ಸ್ವಚ್ಛನಗರಿ ಎಂಬ ಖ್ಯಾತಿ ಹೊಂದಿದೆ. ಇಲ್ಲಿನ ರಸ್ತೆ ಪಕ್ಕದಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ನೋಡುತ್ತಾ ವಾಹನಗಳಲ್ಲಿ ಹೋಗುವುದೇ ಒಂದು ಸುಂದರ ಅನುಭವ. ಹೀಗೆ ವಾಹನ ಚಾಲನೆ ಮಾಡುತ್ತಲೇ ಕೊಂಚ ಮೈಮರೆತರೆ ಅಪಘಾತ ತಪ್ಪಿದ್ದಲ್ಲ. ಇದಕ್ಕೆ ಬಿಡಾಡಿ ದನಗಳು ಕಾರಣವಾಗಿವೆ. ರಸ್ತೆ ಮಧ್ಯದಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುವುದು, ಮಲಗುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಅನೇಕ ಸಾವು-ನೋವುಗಳು ಕೂಡ ಸಂಭವಿಸಿವೆ. ಎಷ್ಟೋ ಜನ ಬೈಕ್ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

೧೧ ಸಾವಿರ ಹಸುಗಳು: ನಗರದಲ್ಲಿ ಸುಮಾರು ೧೧ ಸಾವಿರ ಹಸುಗಳಿದ್ದು, ಕೆಲವರಿಗೆ ಹಸುಗಳನ್ನು ಸಾಕಲು ಸ್ಥಳವಿಲ್ಲ. ಇನ್ನು ಕೆಲವರಿಗೆ ದಿನವಿಡೀ ಅವುಗಳಿಗೆ ಮೇವು ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹಸುಗಳನ್ನು ಹಾಲು ಕರೆದ ನಂತರ ರಸ್ತೆಗಳಿಗೆ ಬಿಡುತ್ತಾರೆ. ಇದರ ಬಗ್ಗೆ ನಗರಪಾಲಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬಿಡಾಡಿ ದನಗಳ ಹಾವಳಿ: ನಗರದ ಹಣ್ಣು ಹಾಗೂ ತರಕಾರಿ ಮಾರುಕಟ್ಟೆಗಳ ಬಳಿ ಈ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಮುಖ್ಯವಾಗಿ ಹಳ್ಳಿ ಪ್ರದೇಶದಲ್ಲಿ ಗಂಡು ಕರುಗಳನ್ನು ೫೦೦ ರೂಪಾಯಿಗೋ ಅಥವಾ ಸಣ್ಣಪುಟ್ಟ ಹಣಕ್ಕೋ ತಂದು ಈ ಕರುಗಳನ್ನು ಪ್ರಮುಖ ಮಾರುಕಟ್ಟೆ ಹಾಗೂ ಅಂಗಡಿ ಪ್ರದೇಶಗಳಲ್ಲಿ ಬಿಡುತ್ತಾರೆ. ಈ ಕರುಗಳು ಒಂದು ವರ್ಷಕ್ಕೆ ಸುಮಾರು ೨೫ ಸಾವಿರ ರೂಪಾಯಿ ಬೆಲೆ ಬಾಳುತ್ತವೆ. ಅದನ್ನು ಬೇರೆ ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಇದೊಂದು ದಂಧೆಯೂ ಆಗಿದೆ ಎಂಬುದು ಕೆಲವರ ಆರೋಪವಾಗಿದೆ.

ಅಷ್ಟೇ ಅಲ್ಲದೇ, ಎಷ್ಟೋ ಗಂಡು ಕರುಗಳು ರಸ್ತೆಯ ಅಕ್ಕ-ಪಕ್ಕ, ಮಧ್ಯ ಹಾಗೂ ಮಾರುಕಟ್ಟೆ ಗಳಲ್ಲಿ ಜನರ ಮೇಲೆ ದಾಳಿ ಮಾಡಿರುವ ಉದಾಹರಣೆಗಳಿವೆ. ಇದರಿಂದಲೇ ಕಳೆದ ಎರಡು ತಿಂಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ನಗರಪಾಲಿಕೆ ಮಾಜಿ ಸದಸ್ಯ ರಂಗಸ್ವಾಮಿ ತಮ್ಮ ತಿಲಕ್‌ನಗರದ ಉದಾ ಹರಣೆಯನ್ನು ನೀಡುತ್ತಾರೆ.

ಹಸುಗಳನ್ನು ರಸ್ತೆಗೆ ಬಿಡದಂತೆ ಆಯಾ ಹಸುವಿನ ಮಾಲೀಕರಿಗೆ ಪಾಲಿಕೆಯ ಆರೋಗ್ಯ ನಿರೀಕ್ಷಕರ ಮೂಲಕ ಎಚ್ಚರಿಕೆ ನೀಡಲಾಗಿದೆ. ಆದರೂ ರಸ್ತೆಗಳಿಗೆ ಹಸುವನ್ನು ಬಿಡುತ್ತಿರುವ ಮಾಹಿತಿ ಲಭ್ಯವಾಗಿದೆ. ಇದೇ ರೀತಿ ಮುಂದುವರಿದರೆ ಎರಡು ಬಾರಿ ದಂಡ ಹಾಕಲಾಗುತ್ತದೆ. ಮತ್ತೆ ಮುಂದುವರಿದರೆ ಹಸುಗಳನ್ನು ವಶಕ್ಕೆಪಡೆದು ಹರಾಜು ಹಾಕಲಾಗುವುದು ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್‌ ಎಚ್ಚರಿಸಿದ್ದಾರೆ.

” ಮಾಲೀಕರಿಗೆ ಎಷ್ಟು ಹೇಳಿದರೂ ದನಗಳನ್ನು ರಸ್ತೆಯಲ್ಲಿ ಬಿಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಪರಿಶೀಲಿಸಿ ತಕ್ಷಣ ಪಾಲಿಕೆ ತಂಡ ಜಾನುವಾರುಗಳನ್ನು ಸಾಗಿಸಿ ದೊಡ್ಡಿಯಲ್ಲಿ ಬಿಡುತ್ತಾರೆ. ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು.”

-ಡಾ.ವೆಂಕಟೇಶ್, ಆರೋಗ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago