ಕೆ.ಪಿ.ಮದನ್
ದಸರಾ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಮೈಸೂರು: ಬಣ್ಣದ ಬೆಳಕಿನಲ್ಲಿ ಕಾರಂಜಿಯ ರಂಗು, ದೀಪಾಲಂಕಾರದ ಮೆರುಗು, ಇದರ ನಡುವೆ ತರಾಹೇವಾರಿ ಮಳಿಗೆಗಳು ವಸ್ತು ಪ್ರದರ್ಶನ ಆವರಣಕ್ಕೆ ಜನರನ್ನು ಕೈಬೀಸಿ ಕರೆಯುತ್ತಿದ್ದವು. ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಬೇಕಿದ್ದ ದಸರಾ ವಸ್ತು ಪ್ರದರ್ಶನದ ಆವರಣ ಜನರಿಂದ ಕಿಕ್ಕಿರಿದು ತುಂಬಿತ್ತು. ಸಿಎಂ ಸಿದ್ದರಾಮಯ್ಯ ಅವರು ವಸ್ತುಪ್ರದರ್ಶನದ ಆವರಣಕ್ಕೆ ಆಗಮಿಸುತ್ತಿದಂತೆ ವಿವಿಧ ಕಲಾ ತಂಡಗಳ ಮೂಲಕ ಸ್ವಾಗತಿಸಲಾಯಿತು.
ಭಾರತೀಯ ನೌಕಪಡೆಯ ಐಎನ್‌ಎಸ್ ಕದಂಬ ಸೇನಾ ಸಿಬ್ಬಂದಿ ಬ್ಯಾಂಡ್ ನುಡಿಸುವ ಮೂಲಕ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಲ್ಲಿಸಿದರು. ನಂತರ ವಸ್ತುಪ್ರದರ್ಶನದ ಒಳ ಆವರಣ ಪ್ರವೇಶಿಸಿದ ಸಿಎಂ ೧೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ೪೨೫ ಅಡಿ ಉದ್ದ ಹಾಗೂ ೪೫ ಅಡಿ ಅಗಲದ ಬೃಹತ್ ಸಂಗೀತ ಕಾರಂಜಿಗೆ ಚಾಲನೆ ನೀಡಿದರು. ನಂತರ ಬೇಲೂರು-ಹಳೆಬೀಡು ಶೈಲಿಯಲ್ಲಿ ನಿರ್ಮಾಣ ಮಾಡಿರುವ ಮಳಿಗೆ ಇದರೊಂದಿಗೆ ಸ್ಥಾಪಿಸಿರುವ ೧೫೩ ಮಳಿಗೆಗಳನ್ನು ಮುಖ್ಯಮಂತ್ರಿಗಳು ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಮುಖ್ಯ ಮಂತ್ರಿಗಳು ಸಚಿವರು ಹಾಗೂ ರಾಜಕೀಯ ಗಣ್ಯರೊಂದಿಗೆ ಬ್ಯಾಟರಿ ಚಾಲಿತ ವಾಹನದಲ್ಲಿ ಕುಳಿತು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ.ಪಾಟೀಲ್, ಶಿವರಾಜ್ ತಂಗಡಗಿ, ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ಸಂಸದ ರಾದ ಸುನಿಲ್ ಬೋಸ್, ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಇನ್ನಿತರರು ಹಾಜರಿದ್ದರು. ಮೊದಲ ದಿನವೇ ಸಾವಿರಾರು ಮಂದಿ ವಸ್ತು ಪ್ರದರ್ಶನವನ್ನು ಕಣ್ತುಂಬಿಕೊಂಡರು.
ಒಳ ಆವರಣದಲ್ಲಿ ವಿಶೇಷ ಆಕರ್ಷಣೆ:
ಮೈಸೂರು: ಈ ಬಾರಿಯ ವಸ್ತುಪ್ರದರ್ಶನದಲ್ಲಿ ೧೫೩ ವಾಣಿಜ್ಯ ಮಳಿಗೆಗಳು, ೪೦ ಆಹಾರ ಮಳಿಗೆಗಳು ಹಾಗೂ ೪೫ ವಿವಿಧ ರೀತಿಯ ಅಮ್ಯೂಸ್‌ಮೆಂಟ್ ಆಟಿಕೆಗಳು. ದಸರಾ ವಸ್ತುಪ್ರದರ್ಶನದಲ್ಲಿ ಮೊದಲ ಬಾರಿಗೆ ಭಾರತೀಯ ವಾಯು ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪಿಸಿರುವ ಮಳಿಗೆಗಳು ಪ್ರವಾಸಿಗರನ್ನು ಸೆಳೆಯುತ್ತಿದೆ. ಅಲ್ಲದೇ ವಸ್ತುಪ್ರದರ್ಶನದ ಒಳ ಆವರಣದಲ್ಲಿ ವೈಫೈ ಆಳವಡಿಸಲಾಗಿದೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…