Andolana originals

ತರಾಹೇವಾರಿ ಮಳಿಗೆಗಳ ಮಿಳಿತ; ಕಾರಂಜಿಯ ಸೆಳೆತ

ಕೆ.ಪಿ.ಮದನ್

ದಸರಾ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 

ಮೈಸೂರು: ಬಣ್ಣದ ಬೆಳಕಿನಲ್ಲಿ ಕಾರಂಜಿಯ ರಂಗು, ದೀಪಾಲಂಕಾರದ ಮೆರುಗು, ಇದರ ನಡುವೆ ತರಾಹೇವಾರಿ ಮಳಿಗೆಗಳು ವಸ್ತು ಪ್ರದರ್ಶನ ಆವರಣಕ್ಕೆ ಜನರನ್ನು ಕೈಬೀಸಿ ಕರೆಯುತ್ತಿದ್ದವು. ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಬೇಕಿದ್ದ ದಸರಾ ವಸ್ತು ಪ್ರದರ್ಶನದ ಆವರಣ ಜನರಿಂದ ಕಿಕ್ಕಿರಿದು ತುಂಬಿತ್ತು. ಸಿಎಂ ಸಿದ್ದರಾಮಯ್ಯ ಅವರು ವಸ್ತುಪ್ರದರ್ಶನದ ಆವರಣಕ್ಕೆ ಆಗಮಿಸುತ್ತಿದಂತೆ ವಿವಿಧ ಕಲಾ ತಂಡಗಳ ಮೂಲಕ ಸ್ವಾಗತಿಸಲಾಯಿತು.

ಭಾರತೀಯ ನೌಕಪಡೆಯ ಐಎನ್‌ಎಸ್ ಕದಂಬ ಸೇನಾ ಸಿಬ್ಬಂದಿ ಬ್ಯಾಂಡ್ ನುಡಿಸುವ ಮೂಲಕ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಲ್ಲಿಸಿದರು. ನಂತರ ವಸ್ತುಪ್ರದರ್ಶನದ ಒಳ ಆವರಣ ಪ್ರವೇಶಿಸಿದ ಸಿಎಂ ೧೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ೪೨೫ ಅಡಿ ಉದ್ದ ಹಾಗೂ ೪೫ ಅಡಿ ಅಗಲದ ಬೃಹತ್ ಸಂಗೀತ ಕಾರಂಜಿಗೆ ಚಾಲನೆ ನೀಡಿದರು. ನಂತರ ಬೇಲೂರು-ಹಳೆಬೀಡು ಶೈಲಿಯಲ್ಲಿ ನಿರ್ಮಾಣ ಮಾಡಿರುವ ಮಳಿಗೆ ಇದರೊಂದಿಗೆ ಸ್ಥಾಪಿಸಿರುವ ೧೫೩ ಮಳಿಗೆಗಳನ್ನು ಮುಖ್ಯಮಂತ್ರಿಗಳು ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಮುಖ್ಯ ಮಂತ್ರಿಗಳು ಸಚಿವರು ಹಾಗೂ ರಾಜಕೀಯ ಗಣ್ಯರೊಂದಿಗೆ ಬ್ಯಾಟರಿ ಚಾಲಿತ ವಾಹನದಲ್ಲಿ ಕುಳಿತು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ.ಪಾಟೀಲ್, ಶಿವರಾಜ್ ತಂಗಡಗಿ, ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ಸಂಸದ ರಾದ ಸುನಿಲ್ ಬೋಸ್, ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಇನ್ನಿತರರು ಹಾಜರಿದ್ದರು. ಮೊದಲ ದಿನವೇ ಸಾವಿರಾರು ಮಂದಿ ವಸ್ತು ಪ್ರದರ್ಶನವನ್ನು ಕಣ್ತುಂಬಿಕೊಂಡರು.

ಒಳ ಆವರಣದಲ್ಲಿ ವಿಶೇಷ ಆಕರ್ಷಣೆ: 

ಮೈಸೂರು: ಈ ಬಾರಿಯ ವಸ್ತುಪ್ರದರ್ಶನದಲ್ಲಿ ೧೫೩ ವಾಣಿಜ್ಯ ಮಳಿಗೆಗಳು, ೪೦ ಆಹಾರ ಮಳಿಗೆಗಳು ಹಾಗೂ ೪೫ ವಿವಿಧ ರೀತಿಯ ಅಮ್ಯೂಸ್‌ಮೆಂಟ್ ಆಟಿಕೆಗಳು. ದಸರಾ ವಸ್ತುಪ್ರದರ್ಶನದಲ್ಲಿ ಮೊದಲ ಬಾರಿಗೆ ಭಾರತೀಯ ವಾಯು ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪಿಸಿರುವ ಮಳಿಗೆಗಳು ಪ್ರವಾಸಿಗರನ್ನು ಸೆಳೆಯುತ್ತಿದೆ. ಅಲ್ಲದೇ ವಸ್ತುಪ್ರದರ್ಶನದ ಒಳ ಆವರಣದಲ್ಲಿ ವೈಫೈ ಆಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

6 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

6 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

6 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

6 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

6 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

7 hours ago