Andolana originals

ಕೈಕೊಟ್ಟ ಮುಂಗಾರು; ಆಗಸದತ್ತ ಮುಖ ಮಾಡಿದ ರೈತರು

ದೂರ ನಂಜುಂಡಸ್ವಾಮಿ

ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಬೆಳೆ ಒಣಗುತ್ತಿರುವ ಹಿನ್ನೆಲೆಯಲ್ಲಿ ಅನ್ನದಾತರು ಕಂಗಾಲು

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಸರಿಯಾದ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಕಾರಣ ರೈತರು ಬೆಳೆ ಬೆಳೆಯಲಾಗದೆ ಹಾಗೂ ಬೆಳೆದ ಬೆಳೆಯೂ ಒಣಗುತ್ತಿರುವುದರಿಂದ ಆತಂಕದಿಂದ ಆಗಸದತ್ತ ಮುಖ ಮಾಡಿದ್ದಾರೆ.

ಜಯಪುರ ಹೋಬಳಿ ವ್ಯಾಪ್ತಿಯ ದೂರ, ಮುರುಡಗಳ್ಳಿ, ಉದ್ಬೂರು, ದೊಡ್ಡಕಾಟೂರು, ತಳೂರು, ಮಾರ್ಬಳ್ಳಿ, ಮಾರ್ಬಳ್ಳಿಹುಂಡಿ, ಕೆಲ್ಲಹಳ್ಳಿ, ಟಿ.ಕಾಟೂರು, ಅರಸಿನಕೆರೆ, ಹಾರೋ ಹಳ್ಳಿ, ಗುಜ್ಜೇಗೌಡನಪುರ, ಮಂಡನಹಳ್ಳಿ, ಮದ್ದೂರು, ಕಲ್ಲಹಳ್ಳಿ ಮುಂತಾದ ಗ್ರಾಮಗಳ ಬಹುತೇಕ ರೈತರು ಮಳೆಯನ್ನೇ ನಂಬಿ ಕೃಷಿ ಮಾಡುತ್ತಿದ್ದಾರೆ.

ಅಲ್ಲದೇ ವಿವಿಧ ಗ್ರಾಮಗಳಲ್ಲಿ ರೈತರು ಧಾನ್ಯಗಳಾದಹೆಸರು, ಅಲಸಂದೆ, ಉದ್ದು, ಅವರೆ ಕಾಯಿ ಹಾಗೂ ಕೆಲವು ತರಕಾರಿಗಳನ್ನು ಬೆಳೆದಿದ್ದರು. ಹೂ ಬಿಡುವ ಹಂತದಲ್ಲಿದ್ದ ಬೆಳೆಗೆ ಮಳೆ ಕೈಕೊಟ್ಟ ಕಾರಣ ಶೇ.೨೫ರಷ್ಟು ಬೆಳೆ ಕೈ ಸೇರುತ್ತದೆ ಎಂಬ ಭರವಸೆಯೂ ರೈತರಲ್ಲಿ ಕಾಣುತ್ತಿಲ್ಲ. ರೈತರು ಒಂದು ಎಕರೆಗೆ ಕನಿಷ್ಠ ರೂ. ಹತ್ತು ಸಾವಿರದಿಂದ ಗರಿಷ್ಟ ಮೂವತ್ತು ಸಾವಿರ ರೂ.ವರೆಗೆ ಖರ್ಚು ಮಾಡಿದ್ದಾರೆ. ಕಳೆದ ವರ್ಷ ಉತ್ತಮವಾಗಿ ಮಳೆ ಬಿದ್ದರೂ ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆತಿರಲಿಲ್ಲ. ಕಳೆದ ಐದಾರು ವರ್ಷಗಳಿಂದ ರೈತರಿಗೆ ಬಿತ್ತನೆಗೆಂದು ಮಾಡಿದ ಖರ್ಚು ಕೂಡ ದೊರಕುತ್ತಿಲ್ಲ.

ಹೋಬಳಿ ವ್ಯಾಪ್ತಿಯಲ್ಲಿ ಕೆರೆಕಟ್ಟೆಗಳ ನೀರು ದಿನ ಕಳೆದಂತೆ ಬರಿದಾಗುತ್ತಿದೆ. ಅಂತರ್ಜಲ ಮಟ್ಟ ಕುಸಿತಗೊಂಡು ಬೋರ್‌ವೆಲ್ಗಳಲ್ಲಿಯೂ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಹೋಬಳಿ ಕೇಂದ್ರಗಳಲ್ಲಿ ದನ-ಕರುಗಳಿಗೆ ಮೇವು ಕೇಂದ್ರಗಳನ್ನು ತೆರೆಯಬೇಕೆಂದು ಹಾಗೂ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕೆಂದು ಈ ಭಾಗದ ರೈತರು ಒತ್ತಾಯಿಸಿದ್ದಾರೆ.

” ಈ ಬಾರಿ ಸಕಾಲಕ್ಕೆ ಮಳೆಯಾಗದೆ ಮಳೆ ಕೊರತೆಯಾದರೂ ರೈತರು ವಾರ್ಷಿಕ ಗುರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಧಾನ್ಯಗಳನ್ನು ಬಿತ್ತನೆ ಮಾಡಿದ್ದರು. ಆದರೆ ಮಳೆ ಕಡಿಮೆಯಾದ್ದರಿಂದ ಇಳುವರಿ ಪ್ರಮಾಣದಲ್ಲಿ ಕುಂಠಿತವಾಗಬಹುದು.”

-ಅರುಣಾ, ರೈತ ಸಂಪರ್ಕ ಅಧಿಕಾರಿ, ಜಯಪುರ

” ಹಾರೋಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಸುಮಾರು ನೂರಾರು ಎಕರೆಯಷ್ಟು ಕುಂಬಳಕಾಯಿ ಬಿತ್ತನೆ ಮಾಡಿ ಹೂ ಮತ್ತು ಕಾಯಿ ಬಿಡುವ ಸಂದರ್ಭದಲ್ಲಿ ಮಳೆ ಕೈಕೊಟ್ಟ ಕಾರಣ ಬಿಟ್ಟ ಕಾಯಿ ದಪ್ಪ ಆಗದೆ ಒಣಗುತ್ತಿವೆ. ಸರ್ಕಾರ ರೈತರಿಗೆ ಪರಿಹಾರ ನೀಡಬೇಕು.”

-ಹೆಚ್.ಎನ್.ಚಂದ್ರ, ರೈತ, ಹಾರೋಹಳ್ಳಿ

 

 

ಆಂದೋಲನ ಡೆಸ್ಕ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

5 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

14 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago