Andolana originals

ಕುಸಿದ ಕಬಿನಿ ಉಪನಾಲೆ ದುರಸ್ತಿ ಕಾರ್ಯ ಶುರು

೨ ದಿನದಲ್ಲಿ ನಾಲೆಗೆ ನೀರು: ಇಂಜಿನಿಯರ್ ದರ್ಶನ್

ನಂಜನಗೂಡು: ಕಬಿನಿ ಬಲದಂಡೆ ನಾಲೆಯ ಉಪನಾಲೆ ಹುಲ್ಲಹಳ್ಳಿ ನಾಲೆಗೆ ಕುಸಿದು ಬಿದ್ದು, ಎರಡೂ ನಾಲೆಗಳಲ್ಲಿ ನೀರಿಲ್ಲದ ಸುದ್ದಿ ಮಂಗಳವಾರ ‘ಆಂದೋಲನ’ ದಿನಪತ್ರಿಕೆ ಯಲ್ಲಿ ಬಿತ್ತರವಾಗಿದ್ದನ್ನು ಗಮಿಸಿದ ಅಧಿಕಾರಿಗಳು, ಮಂಗಳವಾರ ಬೆಳಿಗ್ಗೆಯಿಂದಲೇ ದುರಸ್ತಿ ಕೆಲಸ ಆರಂಭಿಸಿದ್ದಾರೆ.

ಮಂಗಳವಾರ ಕೊರೆಹುಂಡಿ ಸಮೀಪದಲ್ಲಿ ನಾಲೆ ಕುಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಸುತ್ತಿರುವ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಾದ ಹಾಲಪ್ಪ ಹಾಗೂ ದರ್ಶನ್ ಪತ್ರಿಕೆಯೊಂದಿಗೆ ಮಾತನಾಡಿ, ಈ ಕಿರುನಾಲೆ ಶಿಥಿಲವಾಗಿದ್ದನ್ನು ಗಮನಿಸಿ ೨ ತಿಂಗಳ ಹಿಂದೆ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದು ನಿಜ. ಆದರೆ ಮಳೆಯಿಂದಾಗಿ ಹೆಚ್ಚಿನ ನೀರು ಹರಿದ ಪರಿಣಾಮ ನಾಲೆ ಕುಸಿದಿದೆ

ಇನ್ನೆರಡು ದಿನಗಳಲ್ಲಿ ಹುಲ್ಲಹಳ್ಳಿ ನಾಲೆಯಲ್ಲಿ ನೀರು ಹರಿಸಲಾಗುವುದು ಎಂದರು. ಈಗ ತಾತ್ಕಾಲಿಕವಾಗಿ ಕಬ್ಬಿಣದ ಬೃಹತ್ ಗಾರ್ಡ್ ಬಳಸಿ ಕಿರುನಾಲೆಯಲ್ಲಿ ನೀರು ಹರಿಸಲು ಕ್ರಮ ಜುರುಗಿಸಲು ಸಿದ್ಧತೆ ನಡೆದಿದೆ. ಹದಿನೈದು ದಿನಗಳಲ್ಲಿ ಕಿರುನಾಲೆಯಲ್ಲಿ ನೀರು ಹರಿಸಲಾಗುತ್ತದೆ. ಈ ನಾಲೆಯ  ದುರಸ್ತಿಗಾಗಿ ೧ ಕೋಟಿ ೯೦ ಲಕ್ಷ ರೂ. ವೆಚ್ಚದ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳಿಸಲಾಗಿದೆ. ಅದು ಮಂಜೂರಾಗಿ ಬರುವವರಿಗೆ ನೀರು ಹರಿಸಲು ಈಗ ತಾತ್ಕಾಲಿಕ ವ್ಯವಸ್ಥೆ ಮಾಡಲಾಗುವುದು ಎಂದರು.

” ಹುಲ್ಲಹಳ್ಳಿ ನಾಲೆಯಲ್ಲಿ ಬಿದ್ದ ಕಿರುನಾಲೆಯ ಮಣ್ಣು ಕಬ್ಬಿಣ ಸೇರಿದಂತೆ ಇನ್ನಿತರ ಅವಶೇಷಗಳನ್ನು ೨ ದಿನಗಳಲ್ಲಿ ಹೊರ ಸಾಗಿಸಿ ಶುಕ್ರವಾರದೊಳಗಾಗಿ ನಾಲೆಯಲ್ಲಿ ನೀರು ಹರಿಸಲಾಗುವುದು. ಇದರಿಂದ ಬಿಳಿಗರೆ ಹೋಬಳಿಯ ಹುಲ್ಲಹಳ್ಳಿ ನಾಲೆಯ ೭,೨೦೦ ಎಕರೆ ಪ್ರದೇಶದ ಅಚ್ಚುಕಟ್ಟುದಾರರ ನೀರಿನ ಬವಣೆ ನಿವಾರಣೆಯಾಗಲಿದೆ.”

-ದರ್ಶನ್, ಇಂಜಿನಿಯರ್ , ಕಾವೇರಿ ನೀರಾವರಿ ನಿಗಮ

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

8 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago