ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಡಿಪೋವರೆಗಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ.
ಸಾರ್ವಜನಿಕರಿಂದ ದೂರು ಬಂದಾಗ ಮಹಾನಗರ ಪಾಲಿಕೆಯವರು ಗುಂಡಿಗಳನ್ನು ಕಾಟಾಚಾರಕ್ಕೆ ಮುಚ್ಚುತ್ತಾರೆ, ಆದರೆ ಒಂದು ತಿಂಗಳೊಳಗೆ ಮತ್ತೆ ಗುಂಡಿಗಳು ನಿರ್ಮಾಣವಾಗುತ್ತಿವೆ, ಇದರಿಂದಾಗಿ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.
ಈ ರಸ್ತೆಯ ಫುಟ್‌ಪಾತ್ ಅನ್ನು ತರಕಾರಿ ಮತ್ತು ಹಣ್ಣು ಮಾರುವವರು ಆಕ್ರಮಿಸಿ ಕೊಂಡಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹೆಚ್ಚಿನ ಅನಾಹುತಗಳು ಸಂಭವಿಸುವ ಮುನ್ನ ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಹಾಗೂ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…