Andolana originals

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ 

ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಸಹಾಯವಾಣಿಗೆ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮಕ್ಕಳ ಅಸುರಕ್ಷತೆ ಹೆಚ್ಚುತ್ತಿರುವ ಆತಂಕಕಾರಿ ಚಿತ್ರಣ ಹೊರಬಿದ್ದಿದೆ. ಸಹಾಯವಾಣಿ ಘಟಕವು ಸಾಕಷ್ಟು ಪ್ರಕರಣಗಳನ್ನು ವಿಲೇವಾರಿ ಮಾಡಿರುವುದು ಸ್ವಲ್ಪ ಸಮಾಧಾನಕರ ಸಂಗತಿ.

ಕೇಂದ್ರ ಸರ್ಕಾರದ ಶೇ.೧೦೦ರಷ್ಟು ಆರ್ಥಿಕ ನೆರವಿ ನೊಂದಿಗೆ ರಾಜ್ಯ ಸರ್ಕಾರವು ೨೦೨೩ರ ಸೆಪ್ಟೆಂಬರ್‌ನಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲೂ ಮಕ್ಕಳ ಸಹಾಯವಾಣಿ ಘಟಕ ಆರಂಭಿಸಿತು. ಮೈಸೂರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಘಟಕಕ್ಕೆ ಆರಂಭಿಕ ವರ್ಷದಲ್ಲಿ ಕಡಿಮೆ ಪ್ರಮಾಣದಲ್ಲಿ ಕರೆಗಳು ಬಂದಿದ್ದರೂ, ಬಳಿಕ ದೂರುಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿವೆ. ಕಳೆದ ಮೂರು ವರ್ಷಗಳಲ್ಲಿ ಸಹಾಯವಾಣಿಗೆ ಒಟ್ಟು ೨,೪೭೧ ಕರೆಗಳು ಬಂದಿದ್ದು, ಈ ಪೈಕಿ ೨,೩೨೧ ಕರೆಗಳಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಸಮಸ್ಯೆಗಳನ್ನು ಪರಿಹರಿಸಿದ್ದಾರೆ.

ಬಾಲ್ಯವಿವಾಹಗಳೇ ಹೆಚ್ಚು: ಸಹಾಯವಾಣಿಗೆ ಬಂದಿರುವ ಕರೆಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಪಟ್ಟಿದ್ದವೇ ಹೆಚ್ಚು ಎನ್ನುವುದು ಕಳವಳಕ್ಕೆ ಕಾರಣವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ೬೯೧ ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಶೇ.೯೮ರಷ್ಟು ಪ್ರಕರಣಗಳಲ್ಲಿ ಬಾಲಕಿಯರೇ ಅಪ್ರಾಪ್ತ ವಯಸ್ಸಿನಲ್ಲಿ ವಿವಾಹದ ಬಂಧನಕ್ಕೆ ಒಳಗಾಗಿರುವುದು ಆತಂಕ ಮೂಡಿಸಿದೆ.

ಹೆಣ್ಣುಮಕ್ಕಳಿಗೆ ೧೮ ವರ್ಷ ಹಾಗೂ ಗಂಡುಮಕ್ಕಳಿಗೆ ೨೧ ವರ್ಷ ಪೂರ್ಣಗೊಳ್ಳುವ ಮೊದಲು ವಿವಾಹವಾಡುವುದು ಕಾನೂನುಬಾಹಿರವಾಗಿದ್ದರೂ, ಗ್ರಾಮೀಣ ಭಾಗಗಳಲ್ಲಿ ಈ ಪದ್ಧತಿ ಸಂಪೂರ್ಣವಾಗಿ ನಿಂತಿಲ್ಲ.

ಭಿಕ್ಷಾಟನೆ, ನಾಪತ್ತೆ ಪ್ರಕರಣಗಳಲ್ಲೂ ಹೆಚ್ಚಳ: ಮಕ್ಕಳ ಸಹಾಯವಾಣಿಯ ಮೂಲಕ ಕಳೆದ ಮೂರು ವರ್ಷಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ೧೬೮ ಮಕ್ಕಳನ್ನು ರಕ್ಷಿಸಲಾಗಿದೆ. ಇದೇ ಅವಽಯಲ್ಲಿ ನಾಪತ್ತೆಯಾಗಿದ್ದ ೧೧೪ ಮಕ್ಕಳನ್ನು ಪತ್ತೆ ಮಾಡಿ ಪಾಲಕರ ವಶಕ್ಕೆ ಒಪ್ಪಿಸಲಾಗಿದೆ. ೨೦೨೫-೨೬ನೇ ಸಾಲಿನಲ್ಲಿ ಮಾತ್ರ ೧೧೮ ಭಿಕ್ಷಾಟನೆ ಪ್ರಕರಣಗಳು ಹಾಗೂ ೬೮ ಮಕ್ಕಳ ಪತ್ತೆ ಪ್ರಕರಣಗಳು ದಾಖಲಾಗಿವೆ.

ಕರೆ ಬಂದ ತಕ್ಷಣ ರಕ್ಷಣಾ ಕಾರ್ಯ: ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಕ್ಕಳು ೧೦೯೮ ಸಹಾಯವಾಣಿಗೆ ಕರೆ ಮಾಡಬಹುದು. ಇದು ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸುತ್ತದೆ. ಮಾಹಿತಿ ಬಂದ ತಕ್ಷಣ ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯಿತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಾರೆ. ರಕ್ಷಿಸಲ್ಪಟ್ಟ ಮಕ್ಕಳಿಗೆ ಆಶ್ರಯ, ಪುನರ್ವಸತಿ ಹಾಗೂ ಅಗತ್ಯ ಸಲಹಾ ಸೇವೆಗಳನ್ನೂ ಒದಗಿಸಲಾಗುತ್ತಿದೆ. ಪಾಲನೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗಾಗಿ ವಸತಿ ಸೌಲಭ್ಯಗಳನ್ನೂ ಕಲ್ಪಿಸಲಾಗುತ್ತಿದೆ.

” ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಯ ಕುರಿತು ಜಾಗೃತಿ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಹೀಗಾಗಿ ಮಕ್ಕಳ ಸಹಾಯವಾಣಿಗೆ ಹೆಚ್ಚಿನ ಕರೆಗಳು ಬರುತ್ತಿವೆ. ಸರ್ಕಾರ ಸುತ್ತೋಲೆಯ ಪ್ರಕಾರ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು, ಕಟ್ಟಡಗಳಲ್ಲಿ ಮಕ್ಕಳ ಸಹಾಯವಾಣಿಯ ಸಂಖ್ಯೆ ಹಾಕಲಾಗಿದೆ. ಇದು ಮಕ್ಕಳಿಗೆ ತಲುಪಿದೆ. ಇದರಿಂದ ಹೆಚ್ಚಿನ ಕರೆಗಳು ಬರುತ್ತಿದ್ದು, ೨೪ ಗಂಟೆಯೊಳಗೆ ಕರೆಗಳಿಗೆ ಸ್ಪಂದಿಸುವ ಕೆಲಸವಾಗುತ್ತಿದೆ.”

– ಎನ್.ಟಿ.ಯೋಗೇಶ್, ಮಕ್ಕಳ ರಕ್ಷಣಾಧಿಕಾರಿ, ಮೈಸೂರು ಜಿಲ್ಲೆ 

” ರಜೆ ಅವಧಿಯಲ್ಲಿ ಬಾಲಕಾರ್ಮಿಕತೆ ಸವಾಲು ಪರೀಕ್ಷೆಗಳು ಮುಗಿದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಪ್ರಾಪ್ತರನ್ನು ಕೆಲಸಕ್ಕೆ ಬಳಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಬಡ ಕುಟುಂಬಗಳ ಮಕ್ಕಳು ಹೆತ್ತವರಿಗೆ ನೆರವಾಗಲು ಕೆಲಸ ಮಾಡುತ್ತಿರುವುದೂ ಉಂಟು. ೧೪ ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗದಲ್ಲಿ ತೊಡಗಿಸುವುದು ಹಾಗೂ ೧೪ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ಯಮಗಳಲ್ಲಿ ದುಡಿಸಿಕೊಳ್ಳುವುದು ಕಾನೂನುಬಾಹಿರ. ಆದರೂ, ಪಾಲಕರ ಅರಿವಿನ ಕೊರತೆ ಮತ್ತು ಬಡತನದ ಕಾರಣದಿಂದ ಬಾಲಕಾರ್ಮಿಕ ವಿರೋಧಿ ಕಾನೂನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದು ಕಷ್ಟಸಾಧ್ಯವಾಗಿದೆ”

ಮಕ್ಕಳ ರಕ್ಷಣೆಗೆ ವಿವಿಧ ಕ್ರಮ: ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಸುರಕ್ಷತೆಗಾಗಿ ಶಿಕ್ಷಣ, ಪೊಲೀಸ್, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ ಸೇರಿದಂತೆ ಹಲವು ಇಲಾಖೆಗಳ ಸಮನ್ವಯದಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನಗೊಳಿಸಲಾಗಿದೆ. ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್‌ಗಳು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಕಡ್ಡಾಯಗೊಳಿಸಲಾಗಿದೆ. ದಾಖಲಾಗುವ ದೂರುಗಳನ್ನು ಮಕ್ಕಳ ಸುರಕ್ಷತಾ ಸಮಿತಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕ ಮಾಡುವಾಗ ಪೊಲೀಸ್ ಪರಿಶೀಲನಾ ವರದಿ ಕಡ್ಡಾಯಗೊಳಿಸಲಾಗಿದೆ.

 

 

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

13 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

13 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

14 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

14 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

14 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago