Andolana originals

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ…

ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಏರುಗತಿಯಲ್ಲಿ ಸಾಗುತ್ತಿದೆ!

ಪ್ರಸ್ತುತ ಹನೂರು ತಾಲ್ಲೂಕಿನ ೧೭ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ೪೫ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಮುಂಬರುವ ತಿಂಗಳುಗಳಲ್ಲಿ ಜಿಲ್ಲೆಯ ೫೫ಗ್ರಾಮ ಪಂಚಾಯಿತಿಗಳ ೭೭ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಚಾ.ನಗರ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ಪಾಲಕ ಇಂಜಿನಿಯರ್ ಬುಧವಾರ ಮಾಹಿತಿ ನೀಡಿದ್ದಾರೆ.

ಏ.೨ರ ಗುರುವಾರ ನಡೆಯಲಿರುವ ಹವಾಮಾನ ಅವಲೋಕನ ಸಮಿತಿ ಸಭೆಗೆ ನೀಡಿರುವ ಮಾಹಿತಿ ಇದಾಗಿದೆ! ಸದ್ಯ ೫ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ ಗುತ್ತಿಗೆ ಪಡೆದು ನೀರು ಒದಗಿಸಲಾಗುತ್ತಿದ್ದು, ೧೫ ಗ್ರಾಮಗಳಲ್ಲಿ ಟ್ಯಾಂಕರ್ ಮುಖೇನ ನೀರು ಪೂರೈಸಲಾಗುತ್ತಿದೆ.ಈ ಎಲ್ಲವೂ ಹನೂರು ತಾಲ್ಲೂಕಿನ ಗ್ರಾಮಗಳು ಎಂಬುದು ಗಮನಾರ್ಹ. ದೊಡ್ಡ ಆಲತ್ತೂರು,ಹೊಸ ದೊಡ್ಡಿ,ಮಾಮರ ದೊಡ್ಡಿ,ಗೊಲ್ಲರದಿಂಬ, ಸೊಪ್ಪಿನ ಗುಡ್ಡೆಗೆ ಖಾಸಗಿ ಕೊಳವೆ ಬಾವಿಗಳ ಸಹಾಯದಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.ಅಂತರ್ಜಲ ಮಟ್ಟ ಕುಸಿತದ ಕಾರಣ ಸರ್ಕಾರಿ ಕೊಳವೆ ಬಾವಿಗಳಲ್ಲಿ ಅಗತ್ಯ ಇರುವಷ್ಟು ನೀರು ಸಿಗದ ಹಿನ್ನೆಲೆಯಲ್ಲಿ ಖಾಸಗಿ ಬೋರ್‌ವೆಲ್‌ಗಳ ಮೊರೆ ಹೋಗಲಾಗಿದೆ. ಪೀಟರ್ಸ್ ಕಾಲೋನಿ, ಕೌದಳ್ಳಿ ನಾಯಕರ ಬೀದಿ, ಗೋಡಸ್ಟ್ ನಗರ, ಕರಟುಕೋಯಿಲ್,ಏರಿಕಾಡು, ಹುಣಸೆ ಮರದ ದೊಡ್ಡಿ, ದೊರೆಸ್ವಾಮಿಮೇಡು, ಸಂದನಪಾಳ್ಯ, ಹುತ್ತೂರು, ಸೊಪ್ಪಿನ ದೊಡ್ಡಿ, ಕರಿಯಪ್ಪನದೊಡ್ಡಿ, ಗೂಳ್ಯದಬಯಲು, ಮಂದೆ ಬಯಲು, ಮಸಿಯಬೋವಿ ದೊಡ್ಡಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ತಿಳಿಸಿದ್ದಾರೆ.

ಚಾ.ನಗರದ ೭ವಾರ್ಡುಗಳಲ್ಲಿ ಟ್ಯಾಂಕರ್ ನೀರು ಪೂರೈಕೆ!: ಚಾಮರಾಜನಗರ ನಗರಸಭೆಯ ೭ ವಾರ್ಡ್‌ಗಳಲ್ಲಿ ಅಂದರೆ ೧,೨,೩,೪,೨೯,೩೦,೩೧ ಸಂಖ್ಯೆಯ ವಾರ್ಡ್‌ಗಳಲ್ಲಿನ ಆಯ್ದ ಬೀದಿಗಳಲ್ಲಿ ನೀರಿನ ಸಮಸ್ಯೆ ಇದೆ.ಹೀಗಾಗಿ ಮೂರು ಟ್ಯಾಂಕರ್‌ಗಳ ಮೂಲಕ ದಿನಕ್ಕೆ ೫ ಬಾರಿ ಇಷ್ಟೂ ವಾರ್ಡ್‌ಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್ ಅವರು ಬುಧವಾರ ಈ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಕೊಳ್ಳೇಗಾಲ, ಹನೂರು, ಯಳಂದೂರು, ಗುಂಡ್ಲುಪೇಟೆ ಪಟ್ಟಣದ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿಲ್ಲ. ಅಂತರ್ಜಲ ಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರು ಸ್ಥಗಿತವಾಗಿರುವುದು, ನೀರಿನ ಮಟ್ಟ ಕಡಿಮೆ ಆಗಿರುವುದು ಈ ಸಮಸ್ಯೆಗೆ ಕಾರಣ. ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗೆ ನದಿ ಮೂಲದಿಂದ ನೀರು ಒದಗಿಸಲಾಗುತ್ತಿದ್ದು ಕೆಲವೊಂದು ಕಡೆಗೆ ಈ ವ್ಯವಸ್ಥೆ ಇಲ್ಲದಿರುವುದು,ಇದ್ದರೂ ತಾಂತ್ರಿಕ ಸಮಸ್ಯೆ ಇರುವುದು ನೀರಿನ ಸಮಸ್ಯೆ ಕಾಣಿಸಿಕೊಳ್ಳಲು ಕಾರಣ ಎಂದು ಅಧಿಕಾರಿಯೊಬ್ಬರು ತಿಳಿಸಿದರು

” ಪೂರ್ವ ಮುಂಗಾರು ಮಳೆ ಆಶಾದಾಯಕವಾಗಿ ಬಿದ್ದರೆ ಅಂತರ್ಜಲ ಮಟ್ಟ ಸುಧಾರಿಸಿ ನೀರಿನ ಸಮಸ್ಯೆ ತಗ್ಗಲಿದ್ದು ಎಲ್ಲೆಲ್ಲಿ ಕುಡಿಯುವ ನೀರು ಪೂರೈಕೆ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು ಎಂಬುದರ ಕುರಿತಾಗಿಯೂ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.”

 

 

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

9 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

10 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

11 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

11 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

11 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

14 hours ago