Andolana originals

ಸಿಎಂ ತವರಲ್ಲಿ ಹೊಸ ಅಧಿಕಾರಿಗಳ ಕಾರ್ಯಭಾರ

ಕೆ.ಬಿ.ರಮೇಶನಾಯಕ

ಮೈಸೂರು: ಲೋಕಸಭಾ ಚುನಾವಣೆಯ ನಂತರ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಮೇಜರ್ ಸರ್ಜರಿ ಮಾಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆಯಲ್ಲಿ ಹೊಸ ಅಧಿಕಾರಿಗಳ ತಂಡ ಕಾರ್ಯಭಾರ ಶುರು ಮಾಡಿದೆ.

ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೀಡಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಆಯುಕ್ತರನ್ನೂ ಬದಲಿಸುವ ಮೂಲಕ ಆಡಳಿತ ಯಂತ್ರಕ್ಕೆ ದೊಡ್ಡ ಮಟ್ಟದಲ್ಲಿ ಬದಲಾವಣೆ ತಂದು ಚುರುಕು ಮುಟ್ಟಿಸಿದೆ.

ಯಾವುದೇ ಕ್ಷಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ನಗರಪಾಲಿಕೆ, ನಗರ ಸಹಾಯಕ ಪೊಲೀಸ್ ಆಯುಕ್ತರು ಮತ್ತಿತರ ಅಧಿಕಾರಿ ಗಳನ್ನೂ ವರ್ಗಾಯಿಸುವ ಕುರಿತು ಚರ್ಚೆ ನಡೆಯುತ್ತಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯ ಹೊತ್ತಿಗೆ ಆಡಳಿತ ಯಂತ್ರ ಮತ್ತಷ್ಟು ವೇಗ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು
ಹೇಳಲಾಗಿದೆ.

ರಾಜ್ಯದ ರಾಜ್ಯಧಾನಿ ಬೆಂಗಳೂರಿನನಂತರ ಮೈಸೂರು ರಾಜಕೀಯ ಮತ್ತು ಆಡಳಿತಾತ್ಮಕವಾಗಿ ಗಮನ ಸೆಳೆದಿರುವ ಜಿಲ್ಲೆಯಾಗಿದ್ದು, ಮುಡಾದಲ್ಲಿ ನಡೆದಿರುವ ಭೂ ಹಂಚಿಕೆ ಹಗರಣ ಬೆಳಕಿಗೆ ಬಂದ ಮೇಲೆ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸದ್ದು ಮಾಡಿದೆ.

ಶೇ.50:50 ನಿವೇಶನ ಹಂಚಿಕೆ ಪ್ರಕರಣದಲ್ಲಿ ಕಾನೂನು ಬಾಹಿರ ತೀರ್ಮಾನ ಮಾಡಿರುವ ಕುರಿತು ರಾಜಕೀಯ ಪಕ್ಷಗಳ ನಡುವೆ ಕೆಸರೆರಚಾಟ ಶುರುವಾಗುತ್ತಿದ್ದಂತೆ ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಕಾರ್ಯ ದರ್ಶಿ ಜಿ.ಡಿ.ಶೇಖರ್ ಅವರನ್ನು ವರ್ಗಾಯಿಸಿ, ಮುಡಾ ಆಯುಕ್ತರನ್ನಾಗಿ ನಗರಾಭಿವೃದ್ಧಿ ಇಲಾಖೆ ಉಪ ಕಾರ್ಯ ದರ್ಶಿಯಾಗಿದ್ದ ಎ.ಎನ್.ರಘುನಂದನ್, ಕಾರ್ಯದರ್ಶಿ ಸ್ಥಾನಕ್ಕೆ ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ನಿಗಮ ನಿಯಮಿತದ ಪ್ರಧಾನ ವ್ಯವಸ್ಥಾಪಕರಾಗಿದ್ದ ವಿ.ಕೆ.ಪ್ರಸನ್ನಕುಮಾರ್ ಅವರನ್ನು ನೇಮಕ ಮಾಡಲಾಯಿತು. ಇದೀಗ ಮುಡಾದಲ್ಲಿ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯು ತ್ತಿರುವ ಕಾರಣ ಈ ಅಧಿಕಾರಿಗಳು ಕಚೇರಿಯಲ್ಲೇ ಮೊಕ್ಕಾಂ ಹೂಡಿ ಅಗತ್ಯ ದಾಖಲೆಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದಾರೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೀಮಾ ಲಾಟ್ಕರ್ ಅವರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ, ಹಾಲಿ ಆಯುಕ್ತರಾಗಿದ್ದ ಬಿ.ರಮೇಶ್ ಅವರನ್ನು ದಾವಣಗೆರೆ ಕೇಂದ್ರ ವಲಯ ಐಜಿಪಿಯನ್ನಾಗಿ ನಿಯೋಜಿಸಲಾಗಿದೆ. ಈ ಮೊದಲೇ ಮೈಸೂರು ನಗರದ ಸಂಚಾರ ವಿಭಾಗದ ಎಸಿಪಿ, ಕೆ.ಆರ್. ವಿಭಾಗದ ಎಸಿಪಿ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದ ಎನ್. ವಿಷ್ಣುವರ್ಧನ್ ಅವರನ್ನು ಮೈಸೂರು ಎಸ್‌ಪಿ ಜಾಗಕ್ಕೆ ನಿಯೋಜಿಸುವ ಮೂಲಕ ಮೇಜರ್ ಸರ್ಜರಿ ಮಾಡಲಾಗಿದೆ.

ಜಿಪಂ ಸಿಇಒ ಕೆ.ಎಂ.ಗಾಯತ್ರಿ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಲೋಕ ಸಭಾ ಚುನಾವಣೆಗೂ ಮುನ್ನವೇ ವರ್ಗಾವಣೆ ಮಾಡುವ ಮಾತು ಕೇಳಿ ಬಂದಿತ್ತಾದರೂ ಕೋರಿಕೆ ಮೇರೆಗೆ ಮುಂದುವರಿಸ ಲಾಗಿತ್ತು. ಆದರೆ, ವರ್ಗಾವಣೆ ಸಾಧ್ಯತೆ ದಟ್ಟವಾಗಿದೆ ಎಂದು ರಾಜಧಾನಿ ಮೂಲಗಳಿಂದ ಗೊತ್ತಾಗಿದೆ.

ನಗರ ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷ ಗಳಿಂದ ಉಳಿದಿರುವ ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನು ವರ್ಗಾ ವಣೆ ಮಾಡಲು ಶಾಸಕರ ಅಭಿಪ್ರಾಯ ಕೇಳಿದ್ದು, ಅನೇಕರು ತಮಗೆ ಅನುಕೂಲಕರವಾದ ಠಾಣೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ಬರಲು ಪ್ರಭಾವಿಗಳು ಶಿಫಾರಸ್ಸು ಮಾಡಿಸುತ್ತಿದ್ದಾರೆ ಎನ್ನಲಾಗಿದೆ.

ನಾಗರಿಕ ಹಕ್ಕು ಜಾರಿ ನಿರ್ದೆಶನಾಲಯದ ಎಸ್‌ ಪಿ ಬಿ.ಟಿ.ಕವಿತಾ ಅವರನ್ನು ಚಾಮರಾಜನಗರಕ್ಕೆ ವರ್ಗಾ ಯಿಸಿದ್ದರಿಂದ ಸ್ಥಾನ ತೆರವಾದರೆ, ಕರ್ನಾಟಕ ರಾಜ್ಯ ಬುಡಕಟ್ಟು ಅಧ್ಯಯನ ಸಂಸ್ಥೆ ನಿರ್ದೇಶಕ ಬಿ.ಶ್ರೀನಿವಾಸ್ ಅವರನ್ನು ವರ್ಗಾಯಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಜಕುಮಾರ್ ಅವರಿಗೆ ಪ್ರಭಾರ ಅಧಿಕಾರ ವಹಿಸಿರುವುದರಿಂದ ಸರ್ಕಾರ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳನ್ನು ನೇಮಕ ಮಾಡಬೇಕಿದೆ.

ಜಿ.ಲಕ್ಷ್ಮೀಕಾಂತ್ ರೆಡ್ಡಿ ನೇಮಕದಲ್ಲಿ ಸಿಎಂ ಒಲವು: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳನ್ನಾಗಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಿಸಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಲವಿತ್ತು ಎಂದು ಮೂಲಗಳು ಹೇಳಿವೆ. ಕೆ.ದಯಾನಂದ ಅಥವಾ ಪಂಜಾಬ್, ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿಗಳನ್ನು ನೇಮಿಸುವ ಕುರಿತು ಸಲಹೆ ಬಂದಿತ್ತು. ಆದರೆ, ನಗರಪಾಲಿಕೆಯಲ್ಲಿ ಉತ್ತಮ ಕೆಲಸ ಮಾಡಿದ ಬಗ್ಗೆ ಸಿಎಂಗೆ ಮಾಹಿತಿ ಹೋಗಿದ್ದರಿಂದಾಗಿ ಡಿಸಿಯಾಗಿ ನಿಯೋಜನೆಗೊಳ್ಳಲು ಕಾರಣವಾಯಿತು ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago