Andolana originals

ಕೊಡಗಿನಲ್ಲೇ ಕ್ರೀಡಾ ಮೈದಾನಗಳದ್ದೇ ಕೊರತೆ

ಕ್ರೀಡೆಗೆ ಮೂಲ ಸೌಕರ್ಯಗಳಿಲ್ಲ ; ಸುಸಜ್ಜಿತ ಕ್ರೀಡಾಂಗಣಕ್ಕೆ ಬೇಡಿಕೆ 

ಮಡಿಕೇರಿ: ಕೊಡಗಿನಲ್ಲಿ ಕ್ರೀಡಾ ಮೈದಾನಗಳ ಕೊರತೆ ಕಾಡುತ್ತಿದ್ದು, ಸುಸಜ್ಜಿತ ಕ್ರೀಡಾಂಗಣಕ್ಕೆ ಕ್ರೀಡಾಪಟುಗಳಿಂದ ಬೇಡಿಕೆ ವ್ಯಕ್ತವಾಗಿದೆ. ಕ್ರೀಡಾ ಜಿಯಾಗಿ ಗುರುತಿಸಿಕೊಂಡಿರುವ ಕೊಡಗಿನಲ್ಲಿ ಕ್ರೀಡೆಗಳಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿರುವುದರಿಂದ ಇಲ್ಲಿನ ಪ್ರತಿಭೆಗಳು ಅವಕಾಶ ವಂಚಿತರಾಗಿ, ಕಮರಿ ಹೋಗುತ್ತಿವೆ.

ಬೆರಳೆಣಿಕೆಯಷ್ಟು ಸುಸಜ್ಜಿತ ಕ್ರೀಡಾಂಗಣಗಳನ್ನು ಹೊರತುಪಡಿಸಿದರೆ ಸ್ಥಳೀಯವಾಗಿ ಕಚ್ಚಾ ಮೈದಾನಗಳೇ ಸ್ಥಳೀಯ ಕ್ರೀಡಾಪಟುಗಳ ಅಭ್ಯಾಸದ ಅಂಗಣಗಳಾಗಿವೆ. ಇಂತಹ ಪರಿಸ್ಥಿತಿಯಲ್ಲಿ ವಿ.ಬಾಡಗ ಗ್ರಾಮದಲ್ಲಿ ಉತ್ತಮ ದರ್ಜೆಯ ಕ್ರೀಡಾಂಗಣ ಮತ್ತು ಕ್ರೀಡಾ ತರಬೇತಿ ಕೇಂದ್ರ ನಿರ್ಮಾಣದ ಪ್ರಸ್ತಾಪ ಕ್ರೀಡಾ ಪ್ರೇಮಿಗಳಲ್ಲಿ ನಿರೀಕ್ಷೆ ಗರಿಗೆದರುವಂತೆ ಮಾಡಿದೆ.

ಭೌಗೋಳಿಕವಾಗಿ ವಿಶಿಷ್ಟ ಜಿಯಾಗಿರುವ ಕೊಡಗಿನಿಂದ ಕ್ರೀಡಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ಸಿಕ್ಕಿದೆ. ಸೀಮಿತ ಸವಲತ್ತುಗಳ ನಡುವೆಯೇ ಇಲ್ಲಿನ ಕ್ರೀಡಾ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲೂ ಮಿಂಚುತ್ತಿವೆ. ಹಾಗಾಗಿ ಮತ್ತಷ್ಟು ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲು ಕ್ರೀಡೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸ ಬೇಕೆಂದು ಹಿಂದಿನಿಂದಲೂ ಕ್ರೀಡಾಭಿಮಾನಿಗಳು ಸರ್ಕಾರದ ಮುಂದೆ ಬೇಡಿಕೆ ಇಡುತ್ತಾ ಬಂದಿದ್ದರೂ ನಿರೀಕ್ಷಿತ ಪ್ರತಿಕ್ರಿಯೆ ಸಿಗದಿರುವ ಬಗ್ಗೆ ಅಸಮಾಧಾನವಿದೆ.

ಇದನ್ನು ಓದಿ: ವನ್ಯಜೀವಿಗಳ ಹಾವಳಿ ತಡೆಗೆ ಹೊಸ ಪ್ರಯೋಗ

ಕೊಡಗಿನ ಜಿ ಕೇಂದ್ರ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆ ಸೇರಿದಂತೆ ಕೆಲವು ಕಡೆಗಳಲ್ಲಿ ಮಾತ್ರ ಹಾಕಿ ಕೇಂದ್ರೀಕೃತವಾಗಿ ಬೆರಳೆಣಿಕೆಯಷ್ಟು ಸುಸಜ್ಜಿತ ಕ್ರೀಡಾಂಗಣಗಳು ಇವೆ. ಉಳಿದ ಭಾಗಗಳಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಕಚ್ಚಾ ಮೈದಾನಗಳೇ ಗತಿ. ಮತ್ತೆ ಕೆಲವು ಊರಿನಲ್ಲಿ ಈ ಸೌಲಭ್ಯವೂ ಇಲ್ಲ. ಇದೀಗ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂಥರ್‌ಗೌಡಕ್ರೀಡಾ ಕ್ಷೇತ್ರದ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದು, ಜಿಲ್ಲೆಯಲ್ಲಿ ಕ್ರೀಡೆಗೆ ಮೂಲಸೌಕರ್ಯ ಹೆಚ್ಚಳಕ್ಕೆ ಆದ್ಯತೆ ಕೊಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಅಧಿಕಾರ ಸ್ಚೀಕರಿಸಿರುವ ಸ್ವತಃ ಕರಾಟೆ ಪಟುವೂ ಆಗಿರುವ ಸಿ.ಎಸ್.ಅರುಣ್ ಮಾಚಯ್ಯ ಕೂಡ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯೋನ್ಮುಖವಾಗಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಈ ಸಂಬಂಧ ಚರ್ಚೆಯನ್ನೂ ನಡೆಸಿದ್ದಾರೆ. ಸುಸಜ್ಜಿತ ಕ್ರೀಡಾಂಗಣ ಮತ್ತು ವಿವಿಧ ಕ್ರೀಡೆಗಳ ತರಬೇತಿ ಕೇಂದ್ರ ನಿರ್ಮಾಣಕ್ಕಾಗಿ ವಿರಾಜಪೇಟೆ ತಾಲ್ಲೂಕಿನ ವಿ.ಬಾಡಗ ಗ್ರಾಮದಲ್ಲಿ ೧೧.೫ ಎಕರೆ ಜಾಗ ಗುರುತಿಸಲಾಗಿದ್ದು, ಕ್ರೀಡಾಂಗಣ ನಿರ್ಮಾಣ ಪೂರ್ವಭಾವಿ ಕೆಲಸಗಳು ಶುರುವಾಗಿವೆ. ಈ ಕ್ರೀಡಾಂಗಣ ಜಿಯ ಎ ಕ್ರೀಡಾಪಟುಗಳ ಬಳಕೆಗೆ ಯೋಗ್ಯವಾಗುವಂತೆ ರೂಪಿಸುವ ನಿಟ್ಟಿನಲ್ಲಿ ನೀಲನಕ್ಷೆ ಸಿದ್ಧಪಡಿಸಿಕೊಳ್ಳಲಾಗಿದೆ. ಹೊರಾಂಗಣ ಆಟಕ್ಕೆ ಅವಕಾಶ ಕೊಡುವುದರ ಜತೆಗೆ ಒಳಾಂಗಣ ಆಟಗಳಿಗೂ ಸಮಾನ ಪ್ರಾಮುಖ್ಯತೆ ಕೊಟ್ಟು ಕ್ರೀಡಾಂಗಣ ನಿರ್ಮಿಸುವ ಉದ್ದೇಶ ಇರುವುದಾಗಿ ಸಿ.ಎಸ್.ಅರುಣ್ ಮಾಚಯ್ಯ ಮಾಹಿತಿ ನೀಡಿದ್ದಾರೆ.

ಹಾಕಿ ಆಟದ ರೀತಿ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಶೂಟಿಂಗ್ ಹೆಚ್ಚು ಪ್ರವರ್ಧಮಾನಕ್ಕೆ ಬರುತ್ತಿದೆ. ಆದರೆ, ಶೂಟಿಂಗ್ ಅಭ್ಯಾಸಕ್ಕೆ ಸಾರ್ವಜನಿಕ ಬಳಕೆಗೆ ಜಿಯಲ್ಲಿ ಎಲ್ಲೂ ಕ್ರೀಡಾಂಗಣ ಇಲ್ಲ. ಈ ಕೊರತೆ ನೀಗಿಸುವ ನಿಟ್ಟಿನಲ್ಲಿ ಬಿ. ಶೆಟ್ಟಿಗೇರಿ ಬಾಡಗ ಗ್ರಾಮದ ಉದ್ದೇಶಿತ ಕ್ರೀಡಾಂಗಣದಲ್ಲಿ ಶೂಟಿಂಗ್ ರೇಂಜ ನಿರ್ಮಿಸುವ ಬಗ್ಗೆ ಚರ್ಚೆ ನಡೆದಿದೆ.

ಇದರ ಜತೆಗೆ ಆರ್ಚರಿ ಕ್ರೀಡೆಯ ಅಭ್ಯಾಸಕ್ಕೂ ಇಲ್ಲಿ ಅವಕಾಶ ಮಾಡಿಕೊಡುವ ಚಿಂತನೆ ಇದ್ದು ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಈ ಸಂಬಂಧ ಸಲಹೆ ನೀಡಿರುವುದಾಗಿ ಸಿ.ಎಸ್. ಅರುಣ್ ಮಾಚಯ್ಯ ತಿಳಿಸಿದ್ದಾರೆ

” ಕೊಡಗು ಕ್ರೀಡೆಯ ತವರೂರು. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕರ್ನಾಟಕ ಕ್ರೀಡಾ ನೀತಿ ರಚಿಸಿದ್ದು ನಾನು. ಕ್ರೀಡಾಪಟುಗಳು ಬೆಳೆಯಲು ಪ್ರಾಥಮಿಕ ಶಾಲಾ ಹಂತದಲ್ಲಿ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರ ಕೆಲಸ ಮಾಡುತ್ತಿದೆ. ಮಡಿಕೇರಿ ಜಿ ಕ್ರೀಡಾಂಗಣಕ್ಕೆ ಸಿಂಥೆಟಿಕ್ ಟರ್ಫ್ ಅಳವಡಿಸಲು ಶಾಸಕ ಡಾ.ಮಂಥರ್ ಗೌಡ ಸಲ್ಲಿಸಿರುವ ಪ್ರಸ್ತಾವನೆಗೆ ಈ ವರ್ಷ ಅಂಗೀಕಾರ ಸಿಗಲಿದೆ. ವಿ.ಬಾಡಗ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣ ಮತ್ತು ವಿವಿಧ ಕ್ರೀಡೆಗಳ ತರಬೇತಿ ಕೇಂದ್ರವನ್ನು ಮಾದರಿಯಾಗಿ ನಿರ್ಮಿಸುವ ನಿಟ್ಟಿನಲ್ಲಿ ಸೂಕ್ತ ಸಲಹೆಗಳನ್ನು ನೀಡಲಾಗಿದೆ.”

ಸಿ.ಎಸ್.ಅರುಣ್ ಮಾಚಯ್ಯ, ಉಪಾಧ್ಯಕ್ಷ, ಕ್ರೀಡಾ ಪ್ರಾಧಿಕಾರ

ಪುನೀತ್ ಮಡಿಕೇರಿ

ಆಂದೋಲನ ಡೆಸ್ಕ್

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

29 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

3 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago