Andolana originals

ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಬೇಸಿಗೆ ಆರಂಭವಾಗಿದ್ದು ಬಿಸಿಲಿನ ತಾಪ ಏರುತ್ತಿದೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಕಾಡುವ ಸಾಧ್ಯತೆ ಇರುತ್ತದೆ. ಆದರೆ, ಕಳೆದ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಸಾಕಷ್ಟು ಸುರಿದಿದ್ದರಿಂದ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ.

ರೈತರ ಬಳಿಯೇ ೩೮ ವಾರಗಳ ಕಾಲ (ನವೆಂಬರ್‌ನಿಂದ ಜೂನ್ ತನಕ) ಜಾನುವಾರುಗಳಿಗೆ ಬೇಕಾಗುವಷ್ಟು ಮೇವು ದಾಸ್ತಾನಿದೆ. ಬಿಳಿಜೋಳ ಮತ್ತು ಮುಸುಕಿನ ಜೋಳದ ಒಣ ಕಡ್ಡಿ, ನೆಲಗಡಲೆ ಹಾಗೂ ಹುರುಳಿಯ ಒಣ ಸೊಪ್ಪು, ಭತ್ತ, ರಾಗಿ ಹುಲ್ಲು, ದ್ವಿದಳ ಧಾನ್ಯಗಳ ಹೊಟ್ಟನ್ನು ರೈತರು ಸಂಗ್ರಹ ಮಾಡಿ ಬಣವೆ ಮಾಡಿಕೊಂಡಿದ್ದಾರೆ.

ಇದಲ್ಲದೆ ಕೃಷಿ ಪಂಪ್‌ಸೆಟ್ ಜಮೀನುಗಳ ಬದುಗಳಲ್ಲಿಯೂ ನೆಫಿಯರ್, ಆಫ್ರಿಕನ್ ಟಾಲ್‌ನಂತಹ ಇತರೆ ಹಸಿರು ಮೇವು ಬೆಳೆಯಲಾಗುತ್ತಿದೆ. ಪಶುಪಾಲನೆ ಇಲಾಖೆಯು ಮೇವು ಬೆಳೆಯಲು ನೀರಾವರಿ ಇರುವ ರೈತರಿಗೆ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಿದೆ.

ಜಿಲ್ಲೆಯಲ್ಲಿ ೨೦ನೇ ಜಾನುವಾರು ಗಣತಿ ಪ್ರಕಾರ ಒಟ್ಟು ೨,೫೯,೨೭೯ ದನ, ಕರು, ಎಮ್ಮೆಗಳಿವೆ. ಒಟ್ಟು ೨,೭೮,೧೯೯ ಕುರಿ, ಮೇಕೆಗಳು ಇವೆ. ಈ ಎಲ್ಲಾ ರಾಸುಗಳಿಗೆ ಜಿಲ್ಲೆಯಲ್ಲಿ ಒಟ್ಟು ೩೮ ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದೆ.

ಈಗಾಗಲೇ ಜಿಲ್ಲಾದ್ಯಂತ ಇರುವ ೮೪ ಪಶು ಚಿಕಿತ್ಸಾಲಯಗಳ ಮೂಲಕ ೫ ಕೆ. ಜಿ. ತೂಕದ ೩ ಸಾವಿರ ಮೇವಿನ ಬೀಜದ ಕಿಟ್‌ಗಳನ್ನು ರೈತರಿಗೆ ವಿತರಿಸಲಾಗಿದೆ ಎಂದು ಪಶುಪಾಲನೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯಗಳು ಹಾಗೂ ಮಲೆ ಮಹದೇಶ್ವರ ಬೆಟ್ಟ, ಕಾವೇರಿ ವನ್ಯಜೀವಿ ಧಾಮಗಳಿವೆ. ಇವುಗಳ ಅಂಚಿನಲ್ಲಿ ಇರುವ ಗ್ರಾಮಗಳಲ್ಲಿ ಜಾನುವಾರುಗಳನ್ನು ಸಾಕುವವರು ಮೇಯಲು ಕಾಡಂಚಿಗೆ ಬಿಡುತ್ತಾರೆ. ಹಾಗಾಗಿ ಈ ಹಿಂಡು ದನಗಳ ಮಾಲೀಕರು ಮೇವು ಸಂಗ್ರಹ ಮಾಡಿಲ್ಲ. ಆದರೆ, ಕಾಡಂಚಿನ ಬರಡು ಭೂಮಿಯಲ್ಲಿ ಒಣ ಮೇವು ಲಭ್ಯವಿದೆ.

ಮೇವು ಸಂರಕ್ಷಿಸಲು ಸೂಚನೆ
ಜಿಲ್ಲೆಯ ರೈತರು ತಮ್ಮ ಜಮೀನು, ಮನೆಗಳ ಬಳಿ, ಹಿತ್ತಿಲುಗಳಲ್ಲಿ ಬಣವೆಗಳ ಮೂಲಕ ಸಂಗ್ರಹಿಸಿರುವ ಭತ್ತ, ಮುಸು ಕಿನ ಜೋಳ, ಬಿಳಿಜೋಳ, ರಾಗಿ, ಕಡಲೆ ಕಾಯಿ, ಅವರೆ, ಉದ್ದು, ಅಲಸಂದೆ, ತೊಗರಿ, ಹೆಸರು ಬೇಳೆ, ಕಡಲೆಕಾಳು, ಹುರುಳಿ ಮುಂತಾದ ಬೆಳೆಗಳ ಹುಲ್ಲುಗ ಳನ್ನು ಸಂರಕ್ಷಿಸಿಕೊಳ್ಳಬೇಕು. ರೈತರು ಮೇವನ್ನು ಸುಡದೆ ಹಾಗೂ ಮಳೆ ನೀರಿ ನಿಂದ ಕೊಳೆತು ಹೋಗದಂತೆ ಎಚ್ಚರ ವಹಿಸಬೇಕು. ಪಂಪ್‌ಸೆಟ್ ನೀರಾವರಿ ಹೊಂದಿರುವ ರೈತರು ಪಶುಪಾಲನೆ ಇಲಾಖೆ ನೀಡಿರುವ ಮೇವಿನ ಬೀಜವನ್ನು ಬಿತ್ತನೆ ಮಾಡಿ ಹಸಿರು ಮೇವು ಬೆಳೆದುಕೊಳ್ಳಬೇಕು. ಬೇಸಿಗೆ ಸಮಯದಲ್ಲಿ ಜಾನುವಾರುಗಳಿಗೆ ಹಸಿರು ಮೇವು ಮತ್ತು ಕುಡಿಯುವ ನೀರು ಪೂರೈಸಬೇಕು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

45 mins ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

1 hour ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

1 hour ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

2 hours ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

6 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

6 hours ago