Andolana originals

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ

ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ !

ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ ನಿರ್ವಹಣೆ ಕೊರತೆಯಿಂದ ಅನೈತಿಕ ಚಟುವಟಿಕೆಗಳ ಗೂಡಾಗಿದೆ.

ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ರಾಮಕೃಷ್ಣ ನಗರ ಎ ಮತ್ತು ಬಿ ಬ್ಲಾಕ್‌ನಲ್ಲಿ ವಿಶ್ವಮಾನವ ಜೋಡಿ ರಸ್ತೆಗೆ ಹೊಂದಿಕೊಂಡಿರುವ ನಂದನವನ ಉದ್ಯಾನವನ ಪುಂಡರ ತಾಣವಾಗಿ ಪರಿವರ್ತನೆ ಆಗಿದೆ.

ನಿರ್ವಹಣೆ ಕೊರತೆಯಿಂದ ಕಸ, ಗಿಡಗಂಟಿಗಳಿಂದ ಕೂಡಿದ್ದು, ಕೆಲವೊಮ್ಮೆ ವಿಷ ಜಂತುಗಳವಾಸ ಸ್ಥಾನವಾಗಿದೆ. ಉದ್ಯಾನದ ಪಕ್ಕದ ರಸ್ತೆಯಲ್ಲಿ ಉಪ ನೋಂದಣಾಧಿಕಾರಿ ಕಚೇರಿ ಆರಂಭವಾದಾ ಗಿನಿಂದ ಅಲ್ಲಿಗೆ ಬರುವ ಜನರು ಪಾರ್ಕ್ ಪಕ್ಕ ರಸ್ತೆ ಉದ್ದಕ್ಕೂ ಕಾರುಗಳನ್ನು ನಿಲ್ಲಿಸುವುದರಿಂದ ಅದನ್ನೇತಡೆಗೋಡೆಯಂತೆ ಮಾಡಿಕೊಂಡು ಕೆಲವರು ಅ ಮೂತ್ರ ವಿಸರ್ಜನೆ ಮಾಡುತ್ತಾರೆ. ಸಂಜೆ ವೇಳೆ ಕೆಲವರು ಧೂಮಪಾನ, ಮದ್ಯಪಾನ ಮಾಡುತ್ತಾ ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಬಗ್ಗೆ ಪ್ರಶ್ನಿಸಿದವರನ್ನೇ ಬೆದರಿಸುವ ಘಟನೆಗಳೂ ನಡೆದಿವೆ. ಇದರಿಂದಾಗಿ ಉದ್ಯಾನ ವನದ ಅಕ್ಕ-ಪಕ್ಕದ ಮನೆಯವರಿಗೆ ತಲೆನೋವಾಗಿ ಪರಿಣಮಿಸಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಅವ್ಯವಸ್ಥೆಯ ಗೂಡಾಗಿರುವ ಉದ್ಯಾನವನವನ್ನು ಸ್ವಚ್ಛಗೊಳಿಸಿ, ಸಾರ್ವಜನಿಕರ ಅನುಕೂಲಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂಬುದು ಸ್ಥಳೀಯರ ಮನವಿಯಾಗಿದೆ.

” ಈ ಉದ್ಯಾನದಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಇಲ್ಲಿಗೆ ಕಸ ಹಾಕುವವರು ಒಂದೆಡೆಯಾದರೆ, ಕೆಲವರು ಮದ್ಯಪಾನ ಮಾಡಿ ಖಾಲಿ ಬಾಟಲಿಗಳನ್ನು ಇ ಎಸೆದು ಹೋಗುತ್ತಿದ್ದಾರೆ. ಆರಂಭದಲ್ಲಿ ಉತ್ತಮವಾಗಿದ್ದ ಈ ಬಡಾವಣೆ ಇದೀಗ ಹದಗೆಡುತ್ತಿದೆ.”

ಲಕ್ಷ್ಮಣ್ ಗೌಡ

” ಸುತ್ತಮುತ್ತಲಿನ ಪಾರ್ಕ್‌ಗಳು ಅಭಿವೃದ್ಧಿ ಆಗಿವೆ. ಆದರೆ, ಈ ಉದ್ಯಾನವನ ಮಾತ್ರ ಅಭಿವೃದ್ಧಿ ಆಗಿಲ್ಲ. ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ರಸ್ತೆಯಲ್ಲಿ ಮಹಿಳೆಯರು ಓಡಾಡಲು ಆಗುತ್ತಿಲ್ಲ. ಕೆಲವರು ಬೇರೆ ಬೇರೆ ಕಡೆಯಿಂದ ಬಂದು ಇಲ್ಲಿ ಕಸ ಹಾಕುತ್ತಾರೆ. ಅಧಿಕಾರಿಗಳು ಕೂಡಲೇ ಈ ಉದ್ಯಾನವನವನ್ನು ಸ್ವಚ್ಛಗೊಳಿಸಬೇಕು.”

ಶಶಿಕಲಾ, ಸ್ಥಳೀಯ ನಿವಾಸಿ

” ಉದ್ಯಾನವನ ಮೊದಲು ಚೆನ್ನಾಗಿತ್ತು. ಈಗ ಸರಿಯಾಗಿ ನಿರ್ವಹಣೆಯಿಲ್ಲದೆ ಹಾಳಾಗಿದೆ. ಸಬ್ ರಿಜಿಸ್ಟ್ರಾರ್ ಆಫೀಸ್‌ಗೆ ಬರುವ ಕೆಲವರು ನಮ್ಮ ಮನೆಗಳ ಮುಂದೆ ಕಾರುಗಳನ್ನು ಪಾರ್ಕ್ ಮಾಡುತ್ತಾರೆ. ಬಹಳಷ್ಟು ಜನರು ವಾಹನಗಳಲ್ಲಿ ಕೂತು ಮದ್ಯಪಾನ ಮಾಡುತ್ತಾರೆ. ಉದ್ಯಾನವನ ಕುಡುಕರ ತಾಣವಾಗಿದೆ. ಹಗಲಿನ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ ಆಗಿದೆ.”

ಬಸವಣ್ಣ, ಸ್ಥಳೀಯ ನಿವಾಸಿ

” ಈ ಉದ್ಯಾನದ ಅವ್ಯವಸ್ಥೆ ಕುರಿತು ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಗಮನಕ್ಕೆ ತಂದರೂ ಅವರು ಗಮನ ಹರಿಸುತ್ತಿಲ್ಲ. ಸಬ್ ರಿಜಿಸ್ಟ್ರಾರ್ ಆಫೀಸ್ ಇಲ್ಲಿಗೆ ಸ್ಥಳಾಂತರವಾದಾಗಿನಿಂದ ಇಲ್ಲಿಗೆ ಬರುವ ಜನ ರು ಉದ್ಯಾನವನವನ್ನು ಬಯಲು ಶೌಚಾಲಯ ಮಾಡಿಕೊಂಡಿದ್ದಾರೆ. ಜೊತೆಗೆ ರಾತ್ರಿಯಾದರೆ ಅನೈತಿಕ ಚಟುವಟಿಕೆಗಳ ತಾಣವಾಗುತ್ತದೆ.

ಸತೀಶ್, ಸ್ಥಳೀಯ ನಿವಾಸಿ

” ಅನೇಕ ಬಾರಿ ಪಾರ್ಕ್ ಅವ್ಯವಸ್ಥೆ ಸರಿಪಡಿಸಲು ಮನವಿ ಮಾಡಿದರೂ ಪಾಲಿಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸ್ಥಳೀಯರೇ ಸೇರಿ ಬಹಳಷ್ಟು ಬಾರಿ ಪಾರ್ಕ್ ಅನ್ನು ಸ್ವಚ್ಛಗೊಳಿಸಿದ್ದೇವೆ. ಉದ್ಯಾನವನ ಬೆಳಕಿನ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಪಾರ್ಕ್ ಸುತ್ತಲೂ ಕಾರುಗಳು ನಿಂತಿರುತ್ತವೆ. ಯಾವಾಗ ಏನಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ.”

ಡಾ.ರವೀಶ್, ಸ್ಥಳೀಯ ನಿವಾಸಿ

” ಉದ್ಯಾನವನದ ಎದುರೇ ನಮ್ಮ ಮನೆಯಿದೆ. ಆರಂಭದಲ್ಲಿ ಪಾರ್ಕ್ ಸುತ್ತಲೂ ಫೆನ್ಸಿಂಗ್ ಹಾಕಿಸಿದ್ದೇ ಕೊನೆ. ನಂತರ ಯಾವುದೇ ನಿರ್ವಹಣೆ ಮಾಡುತ್ತಿಲ್ಲ. ಗಿಡಗಂಟಿ ಗಳು ಬೆಳೆದು ಹಾವು, ಚೇಳುಗಳ ಗೂಡಾಗಿದೆ. ರಾತ್ರಿ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಉದ್ಯಾನವನ ಸ್ವಚ್ಛತೆಗೆ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.”

 ಶಿವಣ್ಣ, ಸ್ಥಳೀಯ ನಿವಾಸಿ

 

 

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

51 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

6 hours ago