ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಹಾರಂಗಿ ಜಲಾಶಯ, ಹೇಮಾವತಿ ಜಲಾಶಯ, ಕಬಿನಿ ಜಲಾಶಯ ಹಾಗೂ ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣವಾಗಿ ತುಂಬಿದ್ದರೂ ಸರ್ಕಾರ ಇನ್ನೂ ಕೆರೆ ಕಟ್ಟೆಗಳನ್ನು ತುಂಬಿಸದೇ ಇರುವುದು ಸರಿಯಾದ ಕ್ರಮವಲ್ಲ.
ರೈತರ ಅತಿ ಮುಖ್ಯವಾದ ಬೇಡಿಕೆ ಎಂದರೆ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದು, ಇದರಿಂದ ಅಂತರ್ಜಲ ಹೆಚ್ಚಾಗಿ ಬಾವಿ ಮತ್ತು ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ರೈತರಿಗೆ, ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಅನುಕೂಲವಾಗುತ್ತದೆ. ಕೆರೆಗಳ ಹೂಳನ್ನು ಬೇಸಿಗೆ ಕಾಲದಲ್ಲಿ ತೆಗೆಸುವುದು ಉತ್ತಮ. ಮಳೆಗಾಲದಲ್ಲಿ ಕೆರೆಗಳ ಹೂಳನ್ನು ತೆಗೆಸಲು ಪ್ರಾರಂಭಿಸಿದರೆ ಹೊಳೆಯಲ್ಲಿ ಹುಣಸೆ ಹಣ್ಣನ್ನು ತೊಳೆದ ಹಾಗೆ ಆಗುತ್ತದೆ. ಆದಷ್ಟು ಬೇಗ ನೀರಾವರಿ ಇಲಾಖೆಯು ಕೆರೆ ಕಟ್ಟೆಗಳಿಗೆ ನೀರನ್ನು ತುಂಬಿಸಲು ಮುಂದಾಗಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





