ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ ಪ್ರದರ್ಶನ-೨೦೨೬ರ ಜಿಲ್ಲಾಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ‘ಮಧುರ ವಸ್ತ್ರೋತ್ಸವ’ ಜ.೨೩ರಂದು ಬೆಳಿಗ್ಗೆ ೧೦ಗಂಟೆಗೆ ತೋಟಗಾರಿಕೆ ಇಲಾಖೆಯ ಕಚೇರಿ ಆವರಣದಲ್ಲಿ ನಡೆಯಲಿದೆ.
ಕೇಂದ್ರ ಸಚಿವ ಎಚ್.ಡಿ .ಕುಮಾರಸ್ವಾಮಿ ಉಪಸ್ಥಿತರಿರುವರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ ಮಂಜು, ಕೆ.ಎಂ. ಉದಯ್, ರಮೇಶ್ ಬಾಬು, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಕೆ.ವಿವೇಕಾನಂದ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್. ಆತ್ಮಾನಂದ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ, ಮುಡಾ ಅಧ್ಯಕ್ಷ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ, ಕೈಮಗ್ಗ ಅಭಿ ವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರ ಕುಮಾರ್, ಸಹಕಾರ ಕೈಮಗ್ಗ ನೇಕಾರ ಮಹಾಮಂಡಳ ಅಧ್ಯಕ್ಷ ಬಿ.ಜೆ.ಗಣೇಶ್ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜವಳಿ ಅಭಿವೃದ್ಧಿ ಆಯುಕ್ತರಾದ ಕೆ. ಜ್ಯೋತಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ.ಸಿಇಒ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ಅಧಿಕ್ಷಕರಾದ ವಿ.ಜೆ. ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕ ಬಿ.ಆರ್. ಯೋಗೇಶ್ ಭಾಗವಹಿಸಲಿದ್ದಾರೆ.
ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ:
ಮಂಡ್ಯ: ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ೨೦೨೬ರ ಅಂಗವಾಗಿ ಉತ್ಪಾದನೋತ್ತರ ಕೃಷಿ ರೈತರ ಸಬಲೀಕರಣ ಸಮಾರಂಭವನ್ನು ಜ.೨೩ ರಂದು ೧೦.೩೦ಕ್ಕೆ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ .ಕುಮಾರಸ್ವಾಮಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ




