Andolana originals

ಇಂದು ಸೋಮವಾರಪೇಟೆ ತಾಲ್ಲೂಕು ಬಂದ್

ಲಕ್ಷ್ಮಿಕಾಂತ್ ಕೊಮಾರಪ್ಪ

ಸಿ ಮತ್ತು ಡಿ ಭೂಮಿ ವಿವಾದ ಬಗೆಹರಿಸಲು ಒಕ್ಕೊರಲ ಒತ್ತಾಯ; ಕಾಂಗ್ರೆಸ್ ಪಕ್ಷ ಸೇರಿದಂತೆ ಸಂಘ ಸಂಸ್ಥೆಗಳಿಂದ ಬಂದ್‌ಗೆ ಬೆಂಬಲ 

ಸೋಮವಾರಪೇಟೆ: ಮನೆ, ತೋಟ, ಗದ್ದೆಗಳಿರುವ ಜಾಗವನ್ನು ಸಿ ಮತ್ತು ಡಿ ಜಾಗವೆಂದು ಘೋಷಿಸಿ ರೈತರ ಬದುಕನ್ನು ಬೀದಿಗೆ ತರುವ ಕಾರ್ಯಕ್ಕೆ ಸರ್ಕಾರ ಹಾಗೂ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿ ರೈತರ ಅಳಿವು-ಉಳಿವಿನ ಹೋರಾಟದ ಭಾಗವಾಗಿ ಆ.೧೨ರ ಮಂಗಳವಾರ ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ರೈತ ಹೋರಾಟ ಸಮಿತಿ ಕರೆ ನೀಡಿದೆ.

ಈ ಹಿಂದೆ ಸೋಮವಾರಪೇಟೆ ಹಾಗೂ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಹೋರಾಟ ನಡೆಸಿ ಮುಖ್ಯಮಂತ್ರಿ, ಸಚಿವರು ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯ ಉನ್ನತ ಮಟ್ಟದ ಅಽಕಾರಿಗಳನ್ನು ಭೇಟಿಯಾಗಿ ಸಮಸ್ಯೆಯ ಗಂಭೀರತೆಯನ್ನು ವಿವರಿಸಲಾಗಿತ್ತು. ಆದರೆ, ಇಂದಿಗೂ ಸರ್ಕಾರದಿಂದ ಯಾವುದೇ ಸ್ಪಂದನೆ ದೊರಕದಿರುವುದರಿಂದ ರೈತರು ನಿರ್ಣಾಯಕ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ.

ರೈತ ಹೋರಾಟ ಸಮಿತಿಯು ರೈತರ ಅಳಿವು-ಉಳಿವಿನ ಹೋರಾಟಕ್ಕೆ ಕರೆ ನೀಡಿರುವುದರಿಂದ ಬಹುತೇಕ ಗ್ರಾಮ ಸಮಿತಿಗಳು, ಮುನ್ನೆಲೆಯಲ್ಲಿರುವ ಸಂಘ ಸಂಸ್ಥೆಗಳು ಬಂದ್ಗೆ ಬೆಂಬಲ ಘೋಷಿಸಿವೆ. ಸರ್ಕಾರಿ ಬಸ್‌ಗಳು, ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದ್ದು, ಈಗಾಗಲೇ ರೈತ ಹೋರಾಟ ಸಮಿತಿಯ ಪ್ರಮುಖರು ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಖಾಸಗಿ ಬಸ್ ಮಾಲೀಕರ ಸಂಘಕ್ಕೂ ಮನವಿ ಮಾಡಿದ್ದಾರೆ.

ಸೋಮವಾರಪೇಟೆ ಪಟ್ಟಣದೊಂದಿಗೆ ಮಾದಾಪುರ, ಕೊಡ್ಲಿಪೇಟೆ, ಶನಿವಾರಸಂತೆ, ಶಾಂತಳ್ಳಿ, ಆಲೂರು ಸಿದ್ದಾಪುರ ಭಾಗಗಳಲ್ಲೂ ಸಂಪೂರ್ಣ ಬಂದ್ ಆಗಲಿದೆ. ವರ್ತಕರ ಸಂಘವು ಈಗಾಗಲೇ ಬೆಂಬಲ ಘೋಷಿಸಿದ್ದು, ರೈತರ ಹೋರಾಟಕ್ಕೆ ಎಲ್ಲಾ ಗ್ರಾಮ, ಪಟ್ಟಣದ ಮಂದಿಯೂ ಕೈಜೋಡಿಸುತ್ತಿದ್ದಾರೆ ಎಂದು ರೈತ ಹೋರಾಟ ಸಮಿತಿ ತಿಳಿಸಿದೆ. ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಒತ್ತಾಯಿಸಿ ರೈತ ಹೋರಾಟ ಸಮಿತಿ ಕರೆ ನೀಡಿರುವ ಬಂದ್‌ಗೆ ಸೋಮವಾರಪೇಟೆ ವರ್ತಕರ ಸಂಘ, ಸೋಮವಾರಪೇಟೆ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ, ಕೂತಿ, ಶಾಂತಳ್ಳಿ, ಹರಗ, ಚೌಡ್ಲು ಗ್ರಾಮಾಭಿವೃದ್ಧಿ ಸಮಿತಿ ಬೆಂಬಲ ಘೋಷಿಸಿವೆ. ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಸಹಕಾರ ನೀಡಲಿದೆ.

ಜೈ ಜವಾನ್ ಮಾಜಿ ಸೈನಿಕರ ಸಂಘ ಬೆಂಬಲ ಸೂಚಿಸಿದೆ. ಕೊಡಗು ಜಿಲ್ಲಾ ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್‌ನ ತಾಲ್ಲೂಕು ಘಟಕ ಬೆಂಬಲ ಸೂಚಿಸಿದ್ದು, ತಾಲ್ಲೂಕಿನ ಎಲ್ಲಾ ಡ್ರೈವಿಂಗ್ ಸ್ಕೂಲ್‌ಗಳು ಕಾರ್ಯನಿರ್ವಹಿಸದೆ ಬಂದ್‌ನಲ್ಲಿ ಪಾಲ್ಗೊಳ್ಳಲಿವೆ. ತಾಲ್ಲೂಕು ಸವಿತಾ ಸಮಾಜ ಬೆಂಬಲ ನೀಡಿದ್ದು, ರೈತರ ಹೋರಾಟದಲ್ಲಿ ಸದಸ್ಯರು ಭಾಗಿಯಾಗಲಿದ್ದಾರೆ.

ಆಟೋ ಚಾಲಕರು ಮತ್ತು ಮಾಲೀಕರ ಸಂಘ ಕೂಡ ಬೆಂಬಲ ಘೋಷಿಸಿದೆ. ಆರೋಗ್ಯ ಸಂಬಂಽತ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಸಾರ್ವಜನಿಕರ ಸೇವೆಗೆ ಆಟೋಗಳು ಸಂಚರಿಸಲಿದ್ದು, ಉಳಿದಂತೆ ಆಟೋಗಳು ಸಂಚಾರವನ್ನು ಸ್ಥಗಿತಗೊಳಿಸಲಿವೆ.

ಏನಿರುತ್ತೆ? ಏನಿರಲ್ಲ?:  ಸೋಮವಾರಪೇಟೆ ಸಂಪೂರ್ಣ ಬಂದ್ ಆಗಲಿದ್ದು, ಖಾಸಗಿ ಬಸ್, ಆಟೋ ಸಂಚಾರ ಸ್ಥಗಿತಗೊಳಿಸಲಿವೆ. ನಗರದ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಡಲಿವೆ. ಮೆಡಿಕಲ್ಸ್ಟೋರ್, ಆಸ್ಪತ್ರೆಗಳು, ಹಾಲಿನ ಡೇರಿ, ತಾಲ್ಲೂಕು ಕಚೇರಿ, ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿಬಸ್ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

” ಬಂದ್ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದೇವೆ. ಶಾಸಕರು ಮಂಗಳವಾರ ನಡೆಯುವ ವಿಧಾನಸಭಾ ಅಧಿವೇಶನದಲ್ಲಿಯೂ ಬಂದ್ ವಿಚಾರ ಪ್ರಸ್ತಾಪಿಸಿ ಸದನದ ಗಮನ ಸೆಳೆಯಬೇಕು. ಬಂದ್ ಮೂಲಕ ರೈತರ ಸಮಸ್ಯೆಯನ್ನು ಸರ್ಕಾರಕ್ಕೆ ಶಾಸಕರ ಮುಖಾಂತರ ತಲುಪಿಸಲಾಗುತ್ತಿದೆ.”

-ಕೆ.ಬಿ.ಸುರೇಶ್, ಅಧ್ಯಕ್ಷರು, ರೈತ ಹೋರಾಟ ಸಮಿತಿ, ಸೋಮವಾರಪೇಟೆ

” ರೈತರ ಸಮಸ್ಯೆಗಳ ಇತ್ಯರ್ಥಕ್ಕೆ ಒತ್ತಾಯಿಸಿ ರೈತ ಹೋರಾಟ ಸಮಿತಿ ಕರೆ ನೀಡಿರುವ ಬಂದ್‌ಗೆ ಸೋಮವಾರಪೇಟೆ ವರ್ತಕರ ಸಂಘ ಸಂಪೂರ್ಣ ಬೆಂಬಲ ನೀಡಿದೆ. ಸ್ಥಳೀಯ ವರ್ತಕರು ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ರೈತರ ಹೋರಾಟಕ್ಕೆ ಕೈಜೋಡಿಸಲಿದ್ದಾರೆ.”

-ಬಿ.ಕೆ.ಧನುರಾಜ್, ಅಧ್ಯಕ್ಷರು, ಸೋಮವಾರಪೇಟೆ ಚೇಂಬರ್ ಅಫ್ ಕಾಮರ್ಸ್,

“‌ ರೈತ ಹೋರಾಟ ಸಮಿತಿ ಕರೆ ನೀಡಿರುವ ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ಆಟೋ ಚಾಲಕರು ಮತ್ತು ಮಾಲೀಕರ ಸಂಘ ಬೆಂಬಲ ಘೋಷಿಸಿದೆ. ಆರೋಗ್ಯ ಸಂಬಂಧಿತ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಸಾರ್ವಜನಿ ಕರ ಸೇವೆಗೆ ಆಟೋಗಳು ಸಂಚರಿಸಲಿದ್ದು, ಉಳಿದಂತೆ ಆಟೋ ಚಾಲಕರು ಸಂಚಾರ ಸ್ಥಗಿತಗೊಳಿಸಿ ರೈತರ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ.”

-ಉಮೇಶ್, ಅಧ್ಯಕ್ಷರು, ಆಟೋ ಚಾಲಕರ ಸಂಘ ಸೋಮವಾರಪೇಟೆ

” ರೈತ ನೆಲೆಗೆ ಸಂಕಟ ತಂದೊಡ್ಡಿರುವ ಸಿ ಮತ್ತು  ಡಿ ಭೂಮಿ ವಿವಾದ ಬಗೆಹರಿಯಬೇಕು. ಆ ನಿಟ್ಟಿನಲ್ಲಿ ರೈತ ಪರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯು ಸಂಪೂರ್ಣ ಬೆಂಬಲ ನೀಡಲಿದೆ.ಸರ್ವ ಸದಸ್ಯರು ಬಂದ್‌ನಲ್ಲಿ ಭಾಗವಹಿಸಲಿದ್ದಾರೆ.”

-ಕೆ.ಎನ್.ದೀಪಕ್, ಜಿಲ್ಲಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ 

ಆಂದೋಲನ ಡೆಸ್ಕ್

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

15 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

28 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

45 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

1 hour ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago