Andolana originals

ರೈಲು ನಿಲ್ದಾಣದಲ್ಲಿ ಶೌಚಾಲಯ ಬಂದ್

ಎಸ್.ಎಸ್.ಭಟ್

ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ 

ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು… ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಸಹಸ್ರಾರು ಮಂದಿ ರೈಲ್ವೆ ಪ್ರಯಾಣಿಕರು ಈಗ ಶೌಚಾಲಯ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.

ಈ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡು ಶೌಚಾಲಯಗಳಿದ್ದು, ಅವುಗಳು ಸಾರ್ವಜನಿಕರಿಗೆ ಪ್ರಯೋಜನವಿಲ್ಲದಂತಾಗಿದೆ. ಆವರಣದ ಬಲ ಭಾಗದಲ್ಲಿ ೩ ವರ್ಷಗಳ ಹಿಂದೆ ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಾಣ ಮಾಡಲಾಗಿದ್ದು, ಅದಿನ್ನೂ ಲೋಕಾರ್ಪಣೆಯಾಗದೆ ಬೀಗ ಹಾಕಿದ ಸ್ಥಿತಿಯಲ್ಲಿ ನಿರುಪಯುಕ್ತವಾಗಿದೆ.

ಎಡಭಾಗದಲ್ಲಿ ಈವರೆಗೆ ಪ್ರಯಾಣಿಕರು ಹಣ ನೀಡಿ ಬಳಕೆ ಮಾಡುತ್ತಿದ್ದ ಶೌಚಾಲಯಕ್ಕೆ ಕಳೆದ ೧೫ ದಿನಗಳಿಂದ ಬೀಗ ಹಾಕಲಾಗಿದ್ದು, ಪ್ರಯಾಣಿಕರ ಗೋಳು ಕೇಳುವವರ‍್ಯಾರು ಎಂಬಂತಾಗಿದೆ. ಪ್ರತಿನಿತ್ಯ ೧,೫೦೦ಕ್ಕೂ ಹೆಚ್ಚು ಜನರು, ಶನಿವಾರ, ಭಾನುವಾರ ಹಾಗೂ ಸೋಮವಾರ ೫,೦೦೦ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲ್ವೆ ನಿಲ್ದಾಣಕ್ಕೆ ಬರುತ್ತಾರೆ.

ಇದಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಿಯಾಯಿತಿ ಪಾಸ್ನೊಂದಿಗೆ ಈ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಆರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದೂ ಅವರಿಗೆ ಶೌಚಾಲಯ ಸೌಲಭ್ಯವಿಲ್ಲದಿರುವುದು ನಮ್ಮ ವ್ಯವಸ್ಥೆಯ ಕಳಂಕವಾಗಿದೆ. ಸ್ವಚ್ಛ ಭಾರತ ಅಭಿಯಾನ ಪ್ರಧಾನಿ ಮೋದಿಯವರ ಕನಸಾಗಿದೆ. ಆದರೆ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಈಗ ಇರುವ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಕೇಂದ್ರದ ಕನಸಿಗೆ ಅದೇ ಸರ್ಕಾರದ ಇಲಾಖೆ ಕೊಳ್ಳಿ ಇಟ್ಟಂತಾಗಿದೆ ಎಂದು ಜನ ಆಡಿಕೊಳ್ಳುವಂತಾಗಿದೆ

” ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದು, ಶೌಚಾಲಯಕ್ಕೆ ಗುತ್ತಿಗೆದಾರರೇ ಬೀಗ ಹಾಕಿದ್ದಾರೆ. ಈ ವಿಷಯವನ್ನು ನಾವು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ.”

-ಲಕ್ಷ್ಮಣ, ನಂಜನಗೂಡು ರೈಲ್ವೆ ನಿಲ್ದಾಣದ ಅಧಿಕಾರಿ

” ಗಂಡಸರಾದರೆ ಬಯಲಲ್ಲೇ ಶೌಚ ಮುಗಿಸುತ್ತಾರೆ. ಆದರೆ ನಾವು ಮಹಿಳೆಯರು ಏನು ಮಾಡಬೇಕು? ಸಂಸದ ಸುನಿಲ್ ಬೋಸ್, ರೈಲ್ವೆ ಸಚಿವ ವಿ. ಸೊಮಣ್ಣನವರೇ ಇತ್ತ ಗಮನ ಹರಿಸಿ ಶೌಚಾಲಯದ ಬಾಗಿಲು ತೆರೆಸಬೇಕು.”

-ನಾಗಮ್ಮ, ಹೆಡತಲೆ

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

20 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

20 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago