Categories: Andolana originals

ನಾಳೆ ಕೋಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಮಂಜು ಕೋಟೆ

ಅಂಬೇಡ್ಕರ್ ಪ್ರತಿಮೆ ಅನಾವರಣ; ಅಂಬೇಡ್ಕರ್ ಜಯಂತಿಯಲ್ಲಿ ಭಾಗಿ; ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ 

ಎಚ್.ಡಿ.ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ.ಕೋಟೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸುತ್ತಿದ್ದು,  ಮುಖ್ಯಮಂತ್ರಿಗಳಾದ ನಂತರ ೪ನೇ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.

ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಮುಂಭಾಗದಲ್ಲಿ ಸರ್ಕಾರದ ಅನುದಾನದಲ್ಲಿ ೫೦ ಲಕ್ಷ ರೂ. ವೆಚ್ಚದಲ್ಲಿ ಪಂಚಲೋಹದ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣ ಮಾಡಲಿದ್ದು, ೧.೭೫ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು -ಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ.

ಬೆಳಿಗ್ಗೆ ೧೧ಕ್ಕೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ಸಂಸದರಾದ ಸುನಿಲ್ ಬೋಸ್, ಶಾಸಕರಾದ ಅನಿಲ್ ಚಿಕ್ಕಮಾದು, ಮುಂತಾದವರು ಭಾಗವಹಿಸುವರು.

ಈ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಕೋಟೆ ತಾಲ್ಲೂಕಿಗೆ ಹೆಚ್ಚು ಬಾರಿ ಭೇಟಿ ನೀಡಿ, ಹೆಚ್ಚು ಅನುದಾನ ನೀಡಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶಾಸಕ ಅನಿಲ್ ಚಿಕ್ಕಮಾದು ೧೫ ದಿನಗಳಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ತಯಾರಿ ನಡೆಸಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳಾದ ಲಕ್ಷ್ಮೀಕಾಂತ್ ರೆಡ್ಡಿ, ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್‌ಪಿ ಗೋಪಾಲಕೃಷ್ಣ, ಕೋಟೆ ತಹಸಿಲ್ದಾರ್ ಶ್ರೀನಿವಾಸ್, ಸರಗೂರು ತಹಸಿಲ್ದಾರ್ ಮೋಹನಕುಮಾರಿ, ಇಒ ಧರಣೇಶ್, ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರ್, ಸಮಾಜ ಕಲ್ಯಾಣ ಅಧಿಕಾರಿ ರಾಮಸ್ವಾಮಿ, ನಿರ್ಮಿತಿ ಕೇಂದ್ರದ ಅಧಿಕಾರಿ ಸುಪ್ರೀತ್ ಗೌಡ, ಕಾರ್ಯಕರ್ತರು, ಮುಖಂಡರು, ಆದಿ ಕರ್ನಾಟಕ ಮಹಾಸಭಾದವರ ಜೊತೆ ಸಭೆ ನಡೆಸಿ ಸಕಲ ಸಿದ್ಧತೆಯನ್ನು ನಡೆಸಿದ್ದಾರೆ.

ಸುಮಾರು ೧೫,೦೦೦ ಜನರ ಸಮ್ಮುಖದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಮಾಡಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು, ತತ್ವ, ಸಿದ್ಧಾಂತಗಳನ್ನು ಕ್ಷೇತ್ರದ ಜನತೆಗೆ ಗಣ್ಯರ ಮೂಲಕ ತಿಳಿಸಬೇಕೆಂಬ ಉದ್ದೇಶದಿಂದ ಶಾಸಕರು ಪ್ರತಿ ಗ್ರಾಮದಿಂದಲೂ ಹೆಚ್ಚು ಜನರನ್ನು ಕರೆತರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಕಳೆದ ನವೆಂಬರ್‌ನಲ್ಲಿ ವಾಲ್ಮೀಕಿ ಜಯಂತಿಯನ್ನು ಮುಖ್ಯಮಂತ್ರಿ ಅವರಿಂದಲೇ ಉದ್ಘಾಟನೆ ಮಾಡಿಸಿದ್ದು, ಈಗ ಡಾ.ಅಂಬೇಡ್ಕರ್ ಜಯಂತಿಯನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲು ಶಾಸಕ ಅನಿಲ್ ಚಿಕ್ಕಮಾದು ಮುಂದಾಗಿದ್ದಾರೆ.

” ಮಹನೀಯರ ಜಯಂತಿ ಕಾರ್ಯಕ್ರಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇನ್ನಿತರ ಗಣ್ಯರ ಸಮ್ಮುಖದಲ್ಲಿ ನಮ್ಮ ಕ್ಷೇತ್ರದಲ್ಲಿ ಅರ್ಥಪೂರ್ಣವಾಗಿ ಅದ್ಧೂರಿಯಾಗಿ ನಡೆಯುತ್ತಿರುವುದು ತಾಲ್ಲೂಕಿನ ಸೌಭಾಗ್ಯವಾಗಿದೆ. ಇದರ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನದ ಕಾಮಗಾರಿಗಳಿಗೂ ಚಾಲನೆ ದೊರಕಲಿದೆ. ಜೊತೆಗೆ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುವುದು. ಮುಖ್ಯಮಂತ್ರಿಗಳು ಅನೇಕ ಬಾರಿ ಎಚ್.ಡಿ.ಕೋಟೆಗೆ ಭೇಟಿ ನೀಡುತ್ತಿರುವುದು ಅಭಿವೃದ್ಧಿಗೆ ಪೂರಕವಾಗಿದೆ.”

-ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

6 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

7 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

8 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

8 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

13 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

13 hours ago