Andolana originals

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್

ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಪ್ರವಾಸಿ ತಾಣವಾದ ತಡಿ ಯಂಡಮೋಳ್ ಬೆಟ್ಟದಲ್ಲಿ ನಡೆದಿದೆ.

ಕೇರಳ ರಾಜ್ಯದ ಕೊಚ್ಚಿ ಮೂಲದ ಜಿ.ಎಸ್.ಶರಣ್ಯ (೩೬) ನಾಪತ್ತೆಯಾದವರು. ಕೇರಳದಿಂದ ಕೊಡಗು ಜಿಲ್ಲೆಗೆ ಪ್ರವಾಸಕ್ಕೆಬಂದಿದ್ದ ಶರಣ್ಯ, ಆನ್‌ಲೈನ್‌ನಲ್ಲಿ ಹೋಂ ಸ್ಟೇವೊಂದನ್ನು ಬುಕ್ಕಿಂಗ್ ಮಾಡಿಕೊಂಡು ತಂಗಿದ್ದರು.

ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕಾಗಿ ಅರಣ್ಯ ಇಲಾಖೆ ವೆಬ್‌ಸೈಟ್‌ನಲ್ಲಿ ನೋಂದಾಯಿಸಿ ಕೊಂಡಿದ್ದ ಶರಣ್ಯ, ಗುರುವಾರ ಬೆಳಿಗ್ಗೆ ೮.೧೫ಕ್ಕೆ ಬೆಟ್ಟದ ಬಳಿ ಬಂದಿದ್ದರು. ಅವರ ದಾಖಲೆ ಪರಿಶೀಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಒಬ್ಬರೇ ಟ್ರಕ್ಕಿಂಗ್ ಹೋಗಬಾರದು ಎಂದು ತಿಳಿಸಿ, ಒಂದು ಗುಂಪಿನೊಂದಿಗೆ ಜೊತೆ ಮಾಡಿ ಕಳುಹಿಸಿದ್ದಾರೆ.

ಸಂಜೆ ವೇಳೆಗೆ ಆ ಗುಂಪು ಹಿಂದಿರುಗಿದರೂ ಶರಣ್ಯ ಅವರು ವಾಪಸ್ ಆಗಲಿಲ್ಲ. ಹೀಗಾಗಿ ಅರಣ್ಯ ವೀಕ್ಷಕ ಮಂಜುನಾಥ್ ಬೆಟ್ಟಕ್ಕೆ ತೆರಳಿ ಶರಣ್ಯ ಅವರಿಗಾಗಿ ಹುಡುಕಾಟ ನಡೆಸಿದ್ದು, ಎಲ್ಲಿಯೂ ಪತ್ತೆಯಾಗಲಿಲ್ಲ. ಹಿಂದಿರುಗಿದ ಮಂಜುನಾಥ್, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸಲಾಗುತ್ತಿದೆ.

ಗುರುವಾರ ರಾತ್ರಿಯಿಡೀ ಅರಣ್ಯ ಇಲಾಖೆ ಮತ್ತು ಪೊಲೀಸ್ ತಂಡಗಳು ಸ್ಥಳೀಯರ ನೆರವಿನೊಂದಿಗೆ ಬೆಟ್ಟದಲ್ಲಿ ಹುಡುಕಾಟ ನಡೆಸಿದರೂ ಆಕೆ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರವೂ ಶೋಧ ಮುಂದುವರಿಸಿದ್ದಾರೆ. ಆದರೆ ಸಂಜೆಯವರೆಗೂ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಽಕಾರಿಗಳು ಮಾಹಿತಿ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

1 hour ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

1 hour ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

2 hours ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

2 hours ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

2 hours ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

2 hours ago