Andolana originals

2026ರ ಸ್ವಾಗತಕ್ಕೆ ತಾಣಗಳೆಡೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ ಗೃಹಗಳನ್ನು ಕಾಯ್ದಿರಿಸಿದ್ದು ಡಿ.೩೧ ಮತ್ತು ಜನವರಿ ೧ರ ವಾಸ್ತವ್ಯಕ್ಕಾಗಿ ಬುಕಿಂಗ್ ಮಾಡಿದ್ದಾರೆ.

ಮಲೆ ಮಹದೇಶ್ವರಬೆಟ್ಟ, ಬಿಳಿಗಿರಿರಂಗನಬೆಟ್ಟ, ಬಂಡೀಪುರ, ಕೆ.ಗುಡಿ ವಸತಿಗೃಹಗಳಿಗೆ ಹೊಸ ವರ್ಷದ ಕಾರಣಕ್ಕೆ ಸಹಜವಾಗಿಯೇ ಬೇಡಿಕೆ ಉಂಟಾಗಿದೆ. ಜನತೆ, ನೂತನ ಸಂವತ್ಸರವನ್ನು ಅವರದ್ದೇ ಆದ ರೀತಿಯಲ್ಲಿ ಬರಮಾಡಿಕೊಳ್ಳುತ್ತಾರೆ. ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಪುನಸ್ಕಾರ ನೆರವೇರಿಸಿ ವರ್ಷವಿಡೀ ಒಳ್ಳೆಯದಾಗಲೆಂದು ಪ್ರಾರ್ಥನೆ ಮಾಡುವವರಿದ್ದಾರೆ. ಪಬ್, ಪಾರ್ಟಿ ಹೀಗೆ ಆಯ್ದ ಸ್ಥಳಗಳಿಗೆ ಹೋಗಿ ಮೋಜು ಮಾಡಿ ವರ್ಷದ ಮೊದಲ ದಿನವನ್ನು ಬರಮಾಡಿಕೊಳ್ಳುವವರೂ ಇದ್ದಾರೆ. ಏನೆಲ್ಲಾ ನಿರ್ಬಂಧ, ಎಚ್ಚರಿಕೆ ನಡುವೆಯೂ ೨೦೨೬ಕ್ಕೆ ಕಾಲಿಡುವ ಕ್ಷಣದಲ್ಲಿ ಪಟಾಕಿ, ಬಾಣ ಬಿರುಸುಗಳು ಅಲ್ಲಲ್ಲಿ ಸದ್ದು ಮಾಡುತ್ತವೆ.

ತಾವು ಇರುವೆಡೆಯೇ ಕೇಕ್ ಕತ್ತರಿಸಿ ಮನೆ ಮಂದಿಯೆಲ್ಲಾ  ಪರಸ್ಪರ ಸಿಹಿ ಮೆಲ್ಲುತ್ತಾ ಸಂತೋಷದಿಂದ ಹೊಸ ದಿನ ಬರಮಾಡಿಕೊಳ್ಳುವ ದೊಡ್ಡ ವರ್ಗವೂ ಇದೆ. ಹಾಗೆಯೇ, ವರ್ಷದ ಮೊದಲ ದಿನ ಹೊಸ ಬಟ್ಟೆ ಧರಿಸಿ ಇಡೀ ವರ್ಷ ಹರ್ಷದಿಂದ ಇರಲೆಂದು ಆಶಿಸಿ ಮಲೆಮಹದೇಶ್ವರ ಬೆಟ್ಟ ಅಥವಾ ಇತರ ಧಾರ್ಮಿಕ ಕೇಂದ್ರಗಳಿಗೆ ಹೊಸ ವರ್ಷದ ಮುನ್ನಾ ದಿನವೇ ಹೋಗಿ ಉಳಿದು ದೇವರ ದರ್ಶನ ಪಡೆಯುವವರೂ ಇದ್ದು ಇಂತಹವರು ಕುಟುಂಬ ಸಮೇತರಾಗಿ ಧಾರ್ಮಿಕ ಸ್ಥಳಗಳಿಗೆ ಧಾವಿಸುತ್ತಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮಾತ್ರವಲ್ಲದೇ ರಾಜ್ಯ ಹಾಗೂ ನೆರೆ-ಹೊರೆರಾಜ್ಯಗಳಿಂದಲೂ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟವನ್ನು ಆಯ್ಕೆ ಮಾಡಿಕೊಂಡು ವಸತಿ ಗೃಹಗಳನ್ನು ಕಾಯ್ದಿರಿಸಿದ್ದಾರೆ. ಇನ್ನು, ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟವನ್ನು ಕಣ್ತುಂಬಿಕೊಳ್ಳುವುದೇ ಆನಂದ. ಚಳಿಯ ನಡುವೆ ಮಂಜು ಕವಿದ ವಾತಾವರಣದಲ್ಲಿ ಹೊಸ ವರ್ಷವನ್ನು ಎದುರು ನೋಡುವುದೇ ಉಲ್ಲಾಸ. ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಳಿಗ್ಗೆ ೬ರಿಂದ ಸಂಜೆ ೪.೩೦ರೊಳಗೆ ಮಾತ್ರ ಪ್ರವೇಶಾವಕಾಶ ಇರುವುದರಿಂದ ಅಲ್ಲಿಗೆ ದೊಡ್ಡ ಸಂಖ್ಯೆಯ ಭಕ್ತರು ಹೊಸ ಸಂವತ್ಸರದಂದು ಬರುವ ನಿರೀಕ್ಷೆ ಸಹಜವಾದದ್ದಾಗಿದೆ.

” ಬಂಡೀಪುರದಲ್ಲಿನ ಖಾಸಗಿ ರೆಸಾರ್ಟ್, ಹೋಂಸ್ಟೇಗಳಲ್ಲಿ ರಾತ್ರಿ ೧೦ ಗಂಟೆ ನಂತರ ಫೈರ್ ಕ್ಯಾಂಪ್, ಲೈಟಿಂಗ್ಸ್ ಹಾಗೂ ಅಧಿಕ ಶಬ್ದ ಹೊರಸೂಸುವ ಡಿಜೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸಿ ಕಾಡು ಪ್ರಾಣಿಗಳ ಸಹಜ ಜೀವನಕ್ಕೆ ಅಡ್ಡಿ ಉಂಟು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.”

ಪ್ರಭಾಕರನ್, ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ

” ಹೊಸ ವರ್ಷದ ಹಿನ್ನೆಲೆಯಲ್ಲಿ ೧೫ ದಿನಗಳಿಂದಲೇ ಭಕ್ತಾದಿಗಳು, ಪ್ರವಾಸಿಗರು ಆನ್‌ಲೈನ್‌ನಲ್ಲಿ ೨೫೦ ವಸತಿಗೃಹಗಳನ್ನು ಕಾಯ್ದಿರಿಸಿದ್ದಾರೆ. ಆಫ್ಲೈನ್ ನಲ್ಲಿಯೂ ಕೊಠಡಿಗಳಿಗೆ ಬೇಡಿಕೆ ಹೆಚ್ಚಾಗಿದೆ.”‌

ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ 

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

4 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

5 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

24 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago