Andolana originals

ಹನೂರು ಹೃದಯ ಭಾಗದಲ್ಲಿಯೇ ಟ್ರಾಫಿಕ್ ಕಿರಿಕಿರಿ

ಮಹಾದೇಶ್ ಎಂ.ಗೌಡ

ಸಿಗ್ನಲ್ ಅಳವಡಿಕೆಗೆ ಸಾರ್ವಜನಿಕರ ಒತ್ತಾಯ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ದರ್ಶನಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಹನೂರು ಪಟ್ಟಣದ ನಾಗಪ್ಪ ವೃತ್ತದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಸಿಗ್ನಲ್ ದೀಪಗಳನ್ನು ಅಳವಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕೆಂಬ ಒತ್ತಾಯ ನಾಗರಿಕರಿಂದ ಕೇಳಿಬಂದಿದೆ.

ಕೊಳ್ಳೇಗಾಲದಿಂದ ಹನೂರುದವರೆಗೆ ೧೦೮ ಕೋಟಿ ರೂ. ವೆಚ್ಚದಲ್ಲಿ ಕೆ-ಶಿಪ್ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಎರಡನೇ ಹಂತದಲ್ಲಿಮ ಹನೂರು ಪಟ್ಟಣದಿಂದ ರಾಜ್ಯದ ಗಡಿಯಂಚಿನ ಪ್ರದೇಶವಾದ ಪಾಲಾರ್‌ವರೆಗೆ ರಸ್ತೆ ಅಭಿವೃದ್ಧಿಪಡಿಸಲು ಈಗಾಗಲೇ ಬಜೆಟ್‌ನಲ್ಲಿ ಅನುಮೋದನೆ ದೊರೆತಿದೆ. ಈ ರಸ್ತೆ ಅಭಿವೃದ್ಧಿಯಾದರೆ ಹನೂರು ತಾಲ್ಲೂಕಿನಲ್ಲಿರುವ ಪ್ರವಾಸಿ ತಾಣಗಳು ಮತ್ತಷ್ಟು ಅಭಿವೃದ್ಧಿಯಾಗಲಿದ್ದು ಆದಾಯವೂ ಹೆಚ್ಚಾಗಲಿದೆ.

ಹನೂರು ಪಟ್ಟಣದ ಹೃದಯ ಭಾಗದ ನಾಗಪ್ಪ ವೃತ್ತದಲ್ಲಿ ಕೆ-ಶಿಪ್ ರಸ್ತೆ ಅಭಿವೃದ್ಧಿಪಡಿಸಿದಾಗ ನಿಯಮಾನುಸಾರ ವೃತ್ತ ನಿರ್ಮಾಣ ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ವಿಶೇಷ ದಿನ ಹಾಗೂ ವಾರಾಂತ್ಯದ ದಿನಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹಾಗೂ ಪಟ್ಟಣ ವ್ಯಾಪ್ತಿಯ ಬಡಾವಣೆಗಳಿಗೆ ಸ್ಥಳೀಯ ನಿವಾಸಿಗಳು ತೆರಳಲು ಅನನುಕೂಲ ವಾಗುತ್ತಿರುವುದರಿಂದ ಸಿಗ್ನಲ್ ಲೈಟ್ ಅಳವಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಹನೂರು ಪಟ್ಟಣದ ನಾಗಪ್ಪ ವೃತ್ತದಲ್ಲಿ ಮುನ್ಸೂಚನೆಯ ಯಾವುದೇ ನಾಮಫಲಕಗಳು ಇಲ್ಲದೇ ಇರುವುದರಿಂದ ಆಗಾಗ ಅಪಘಾತ ಗಳು ನಡೆಯುತ್ತಲೇ ಇವೆ. ವಾರದಲ್ಲಿ ಎರಡು-ಮೂರು ಅಪ ಘಾತಗಳಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಿಗ್ನಲ್ ಲೈಟ್ ನಿರ್ಮಾಣ ಮಾಡುವವರೆಗೆ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಿ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಿದೆ.

ಪಟ್ಟಣದ ಖಾಸಗಿ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿರುವುದರಿಂದ ಪ್ರತಿನಿತ್ಯ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಸಂಚಾರ ನಿಯಂತ್ರಿಸಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕಿದೆ. ನಿಗದಿತ ಸ್ಥಳದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ಅಗತ್ಯ ಕ್ರಮ ವಹಿಸಬೇಕಿದೆ ಎಂದು ನಾಗರಿಕರು ಆಗ್ರಹಿಸಿದ್ದಾರೆ. ಪಟ್ಟಣದ ನಾಗಪ್ಪ ವೃತ್ತದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಪ್ರತಿನಿತ್ಯ ಜನಜಂಗುಳಿ, ವಾಹನ ದಟ್ಟಣೆ ಇದ್ದು, ರಸ್ತೆ ಅಗಲೀಕರಣ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

” ಹನೂರು ಪಟ್ಟಣದ ನಾಗಪ್ಪ ವೃತ್ತದಲ್ಲಿ ವೈಜ್ಞಾನಿಕವಾಗಿ ಸರ್ಕಲ್ ನಿರ್ಮಾಣ ಮಾಡದೇ ಇರುವುದರಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಅಪಘಾತಗಳು ನಡೆಯುತ್ತಿವೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ವಾಹನಗಳು ಹೋಗುತ್ತಿರುವುದರಿಂದ ಸಿಗ್ನಲ್ ಲೈಟ್ ಅಳವಡಿಕೆ ಮಾಡಿದರೆ ವಾಹನ ಸವಾರರಿಗೆ ಅನುಕೂಲವಾಗಲಿದೆ, ಅಪಘಾತಕ್ಕೂ ಕಡಿವಾಣ ಬೀಳಲಿದೆ.”

-ಮಲ್ಲಣ್ಣ, ಚಿಂತಕರು

” ಹನೂರು ಪಟ್ಟಣದ ಹೆಚ್.ನಾಗಪ್ಪ ವೃತ್ತದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಕ್ರಮ ವಹಿಸಲಾಗುವುದು.”

-ಮೋಹನ್, ಡಿವೈಎಸ್ಪಿ, ಕೊಳ್ಳೆಗಾಲ ಉಪವಿಭಾಗ 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಡದಹಳ್ಳಿ -ಬ್ಯಾತಹಳ್ಳಿ ರಸ್ತೆ ದುರಸ್ತಿಪಡಿಸಿ

ಮೈಸೂರು ಜೆಪಿ ನಗರ ರಿಂಗ್ ರಸ್ತೆಯ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿಯ ಶ್ರೀನಗರ ಬಡಾವಣೆಗೆ ಹೋಗುವ ರಸ್ತೆಯು ರೈಲ್ವೆ ಕ್ರಾಸಿಂಗ್ ದಾಟಿ…

14 mins ago

ಓದುಗರ ಪತ್ರ: ಇ- ಕೆವೈಸಿ: ಮತ್ತಷ್ಟು ಆಧಾರ್ ಕೇಂದ್ರಗಳನ್ನು ಆರಂಭಿಸಿ

ಪಡಿತರ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರು ಇ- ಕೆವೈಸಿ ಮಾಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಇದಕ್ಕೆ ಆಧಾರ್…

21 mins ago

ಓದುಗರ ಪತ್ರ: ಕೇಂದ್ರ ಸಚಿವರಿಗೆ ಇದು ಬೇಕಾಗಿತ್ತೇ?

ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಸ್ಟಿಂಗ್ ಆಪರೇಷನ್ ( ಮಾರುವೇಷದ ಕಾರ್ಯಾಚರಣೆ) ಬಗ್ಗೆ ಕೇಂದ್ರ ಸಚಿವ…

23 mins ago

ಓದುಗರ ಪತ್ರ: ದಸರಾ ಮುಗಿದರೂ ಹೆಚ್ಚುವರಿ ಬಸ್ ಟಿಕೆಟ್ ದರ ವಸೂಲಿ ನಿಂತಿಲ್ಲ!

ಕಾರ್ಯನಿಮಿತ್ತ ಅ.೨೩ರಂದು ಮುಂಜಾನೆ ೮ ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ತಡೆರಹಿತ ಬಸ್‌ನಲ್ಲಿ ತೆರಳಿದಾಗ ನಿರ್ವಾಹಕ…

25 mins ago

ಎರಡು ವಿಭಿನ್ನ ಧರ್ಮಗಳ ಮುಖಾಮುಖಿ ನಾಗ್ಪುರ ದಸರಾ

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನಶಿಸಿ ಹೋಗುತ್ತಿದ್ದ ಬೌದ್ಧ ಧರ್ಮ ಮರುಹುಟ್ಟು ಪಡೆದ ಪುಣ್ಯಭೂಮಿ ವಿಜಯದಶಮಿ ಬಂತೆಂದರೆ ದೇಶದಾದ್ಯಂತ…

30 mins ago

ಸಾಂಕ್ರಾಮಿಕ ರೋಗಗಳ ಬಗ್ಗೆ ಇರಲಿ ಎಚ್ಚರ

ಎಸ್.ಎ.ಹುಸೇನ್ ಬಿಸಿಲು-ಮಳೆಯ ವಾತಾವರಣದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಳ; ಮುಂಜಾಗ್ರತೆ ವಹಿಸಲು ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿಸಿಲು…

37 mins ago