Andolana originals

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ

ದಾಸೇಗೌಡ

ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ ಬಸ್ ಕೇವಲ 3 ಬಾರಿ ಮಾತ್ರ ಸಂಚರಿಸುವುದರಿಂದ ಮತ್ತು ಸಂಜೆಯ ನಂತರ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ.

ಗ್ರಾಮಕ್ಕೆ ಪ್ರತಿದಿನ ಕೆಎಸ್‌ ಆರ್ ಟಿಸಿ ಬಸ್ಸು ಮೂರು ಬಾರಿ ಬಂದು ಹೋಗುತ್ತದೆ. ಸಂಜೆ 5.30ರ ನಂತರ ಬಸ್ ವ್ಯವಸ್ಥೆ ಇಲ್ಲ. ದುಪ್ಪಟ್ಟು ಹಣ ನೀಡಿ ಆಟೋ, ಇನ್ನಿತರ ವಾಹನಗಳನ್ನು ಅವಲಂಬಿಸಬೇಕಿದೆ ಎನ್ನುವುದು ಗ್ರಾಮಸ್ಥರ ಆರೋಪ.

ಗ್ರಾಮಕ್ಕೆ ಸರಗೂರು ಕಡೆಯಿಂದ ಸೇತುವೆ ನಿರ್ಮಾಣವಾಗಬೇಕು. ಈ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಸಂಬಂಧರಗಿನ ಶಾಸಕರಾಗಲಿ, ಸಂಸದರಾಗಲಿ ಗಮನಹರಿಸಿ ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕುಎನ್ನುವುದು ಗ್ರಾಮಸ್ಥರ ಒತ್ತಾಯವಾಗಿದೆ.

ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ರಾತ್ರಿ ವೇಳೆ ತುರ್ತು ಸಂದರ್ಭಗಳಲ್ಲಿ, ಅನಾರೋಗ್ಯಕ್ಕೀಡಾದರೆ ಮಾಗುಡಿಲು ಗ್ರಾಮದಿಂದ ಸರಗೂರಿಗೆ 12 ರಿಂದ 13ಕಿ.ಮೀ. ಬಳಸಿಕೊಂಡು ಹೋಗಬೇಕಾಗಿದೆ. ಇಲ್ಲಿಂದ ಶಾಲೆ ಮಕ್ಕಳು, ಸಾರ್ವಜನಿಕರು ಸರಗೂರಿಗೆ ನದಿ ದಾಟುವ ಮೂಲಕ ಹೋದರೆ ಕೇವಲ ಒಂದೂವರೆ ಕಿಲೋ ಮೀಟರ್ ಆಗುತ್ತದೆ. ಜತೆಗೆ 30ರಿಂದ 35 ಹಳ್ಳಿಗಳ ಜನರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಸೇತುವೆಯನ್ನು ಆದಷ್ಟು ಬೇಗ ನಿರ್ಮಿಸಬೇಕೆಂಬುದು ಗ್ರಾಮಸ್ಥರ ಆಗ್ರಹ.

ಚಾಮರಾಜನಗರ, ಗುಂಡ್ಲುಪೇಟೆ, ನಂಜನಗೂಡು ಕಡೆಯಿಂದ ಎಸ್.ಬೇಗೂರು ಮಾರ್ಗ ಅಥವಾ ಹುರ, ಹುಲ್ಲಹಳ್ಳಿ ಮಾರ್ಗದಲ್ಲಿ ಧರ್ಮಸ್ಥಳ ಇನ್ನಿತರ ಕಡೆಗೆ ಹೋಗುವ ಕೆಲ ಬಸ್‌ಗಳು ಈ ಮಾರ್ಗದಲ್ಲಿ ಸಂಚರಿಸಿದರೆ ಎಸ್. ಬೇಗೂರು, ಬೀರ್ವಾಳ್, ಸರಗೂರು, ಹೆಚ್.ಡಿ.ಕೋಟೆ, ಹುಣಸೂರು ಮಾರ್ಗ ದಲ್ಲಿ ಪ್ರಯಾಣದ ಅವಧಿ, ಸಮಯ ಉಳಿಯುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಮಾಗಡಿಲು ಗ್ರಾಮಕ್ಕೆ ತನ್ನದೇ ಇತಿಹಾಸವಿದ್ದು, ಇಲ್ಲಿ ಪ್ರಸಿದ್ಧವಾದ ಶ್ರೀ ನೀಲಕಂಠೇಶ್ವರ ದೇವಸ್ಥಾನವಿದೆ. ಇದು 16ನೇ ಶತಮಾನದ ಚಾಲುಕ್ಯರ ಕಾಲದ ದೇವಸ್ಥಾನವಾಗಿದೆ. ಕಪಿಲಾ ನದಿ ಪಶ್ಚಿಮವಾಹಿನಿಯ ತೀರದಲ್ಲಿ ಈ ದೇವಸ್ಥಾನ ಇದೆ. ಇನ್ನಾದರೂ ಈ ಭಾಗಕ್ಕೆ ಆದಷ್ಟು ಬೇಗ ಸೇತುವೆ ನಿರ್ಮಿಸಬೇಕು.
-ರಾಜಣ್ಣ ಶಾಸ್ತ್ರಿ, ಮಾಗುಡಿಲು ನಿವಾಸಿ

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

1 hour ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

6 hours ago