ಎಂ.ನಾರಾಯಣ
ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ ಉಂಟಾಗಿದೆ. ಈ ವಿಚಾರದ ಬಗ್ಗೆ ಪುರಸಭಾ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ದೂರವಾಣಿ ಕರೆ ಮಾಡಿ ತಿಳಿಸಿದರೂ ಪುರಸಭೆ ಸ್ಪಂದಿಸುತ್ತಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.
ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಒಳಚರಂಡಿ ನೀರು ಕಳೆದ ಎರಡು ದಿನಗಳಿಂದ ರಸ್ತೆಯ ಮೇಲೆ ಹರಿಯುತ್ತಿದ್ದು, ಗಬ್ಬುನಾರುತ್ತಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಪುರಸಭೆಗೆ ದೂರವಾಣಿ ಕರೆ ಮಾಡಿ ತಿಳಿಸಿದಾಗ, ಇಂಜಿನಿಯರ್ ಸಿದ್ದಯ್ಯನವರು, ಇದು ನನ್ನ ವ್ಯಾಪ್ತಿಗೆ ಒಳಪಡುವುದಿಲ್ಲ. ಇಂಜಿನಿಯರ್ ಚಂದ್ರಶೇಖರ್ ಅವರ ವ್ಯಾಪ್ತಿಗೆ ಒಳಪಡುತ್ತದೆ. ಅವರಿಗೆ ಕರೆ ಮಾಡಿ ಎಂದು ತಿಳಿಸಿದರು. ಅದರಂತೆ ಅವರಿಗೆ ಅನೇಕ ಬಾರಿ ಕರೆ ಮಾಡಿ ಸಂಬಂಧಪಟ್ಟ ಫೋಟೋಗಳನ್ನು ಕಳಿಸಿದರೂ ಸ್ಪಂದಿಸಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳ ತವರು ಕ್ಷೇತ್ರ ವರುಣದಲ್ಲೇ ಈ ರೀತಿ ಆದರೆ ರಾಜ್ಯದ ಸಾಮಾನ್ಯ ಕ್ಷೇತ್ರದಲ್ಲಿ ಅಧಿಕಾರಿಗಳು ಇನ್ಯಾವ ರೀತಿ ನಡೆದುಕೊಳ್ಳುತ್ತಾರೆ ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ. ಪುರಸಭೆಯ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಉಪ ವಿಭಾಗಾಧಿಕಾರಿರವರನ್ನು ಆಡಳಿತ ಅಧಿಕಾರಿಯಾಗಿ ನೇಮಕ ಮಾಡಿದ್ದು ವಾರಕ್ಕೆ ಒಮ್ಮೆಯಾದರೂ ಪುರಸಭೆಗೆ ಆಗಮಿಸಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದ್ದರೆ ನೌಕರರಿಗೆ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ನಿಷ್ಠೆ ಅರಿವಾಗುತ್ತಿತ್ತು. ಈಗಲಾದರೂ ಆಡಳಿತ ಅಧಿಕಾರಿಗಳು ವಾರಕ್ಕೆ ಒಮ್ಮೆಯಾದರೂ ಭೇಟಿ ನೀಡುವ ಮೂಲಕ ವಾರ್ಡುಗಳ ಸಮಸ್ಯೆಯನ್ನು ಪರಿಶೀಲಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
” ತಿ.ನರಸೀಪುರದ ೧೦ನೇ ವಾರ್ಡಿನ ವಿದ್ಯಾನಗರದಲ್ಲಿನ ರಸ್ತೆಯಲ್ಲಿ ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಕೂಡಲೇ ಪುರಸಭೆ ಗಮನಕ್ಕೆ ತಂದು ಅವ್ಯವಸ್ಥೆಯನ್ನು ಸರಿಪಡಿಸಲಾಗುವುದು.”
-ಆಶಪ್ಪ, ಉಪವಿಭಾಗಾಧಿಕಾರಿ, ಪುರಸಭೆ ಆಡಳಿತಾಧಿಕಾರಿ
” ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಸಂಚರಿಸದಂತಾಗಿದೆ. ಈ ಕುರಿತು ತಿಳಿಸಲು ಪುರಸಭಾ ಕಚೇರಿಗೆ ಭೇಟಿ ನೀಡಿದರೆ ಮುಖ್ಯ ಅಧಿಕಾರಿಗಳ ಕಚೇರಿ ಮುಚ್ಚಿರುತ್ತದೆ. ಸಿಬ್ಬಂದಿಗಳನ್ನು ಕೇಳಿದರೆ ಮೀಟಿಂಗ್‌ಗೆ ಹೋಗಿದ್ದಾರೆ ಎನ್ನುತ್ತಾರೆ. ಆಡಳಿತ ಅಧಿಕಾರಿಗಳು ಕಚೇರಿಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ.”
-ಕೃಷ್ಣ, ವಿದ್ಯಾ ನಗರ ನಿವಾಸಿ
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…
ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…