Andolana originals

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್

ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ

ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿವೆ. ಪಟ್ಟಣದ ಶ್ರೀ ಬಣ್ಣಾರಿ ಅಮ್ಮನ್ ದೇವಾಲಯದ ಸಮೀಪ ಸೋಮವಾರ ಮತ್ತೊಂದು ಅಪಘಾತ ಸಂಭವಿಸಿದ್ದು, ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ (ಪಾಂಡವಪುರ ಸಮೀಪ) ಅಗಲೀಕರಣ ಕಾಮಗಾರಿಯು ಮಂದಿಗತಿಯಲ್ಲಿ ಸಾಗಿದೆ. ಹಲವು ತಿಂಗಳುಗಳಿಂದ ನಡೆಯುತ್ತಿದೆ. ಜಲ್ಲಿ ಪುಡಿ ಹಾಗೂ ಕಲ್ಲುಗಳ ರಾಶಿಯನ್ನು ರಸ್ತೆ ಬದಿಯಲ್ಲಿ ಸುರಿದು ಹಾಗೆಯೇ ಬಿಟ್ಟಿರುವುದು ವಾಹನ ಸವಾರರಿಗೆ ತೀವ್ರ ಅಪಾಯಕಾರಿಯಾಗಿ ಪರಿಣಮಿಸಿದೆ. ರಸ್ತೆ ಅಗಲೀಕರಣ ಕಾಮಗಾರಿಯು ಸಂಪೂರ್ಣ ಮಂದಗತಿಯಲ್ಲಿ ಸಾಗಿದೆ ಅಲ್ಲದೆ, ಯಾವುದೇ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಇರುವುದರಿಂದ ವಾಹನ ಚಾಲನೆ ಮಾಡುವುದು ಕಷ್ಟಕರವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಸೋಮವಾರ ಬೆಳಿಗ್ಗೆ ಹಿರೇಮರಳ್ಳಿ ಗ್ರಾಮದ ತಿಮ್ಮೇಗೌಡ ಅವರ ಪುತ್ರ ರೈತ ವೆಂಕಟೇಶ್ ಎಂಬವರು ನಂಜನಗೂಡಿನಲ್ಲಿ ನಡೆದ ರಥೋತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದು,ಪೂಜೆ ಮುಗಿಸಿಕೊಂಡು ತಮ್ಮ ಅಳಿಯನೊಂದಿಗೆ ಬೈಕ್‌ನಲ್ಲಿ ಊರಿಗೆ ವಾಪಸ್ಸಾಗುತ್ತಿದ್ದ ವೇಳೆ, ಪಾಂಡವಪುರದ ಬಣ್ಣಾರಿಯಮ್ಮ ದೇವಸ್ಥಾನದ ಸಮೀಪ ರಸ್ತೆಯ ಮೇಲೆ ಹರಡಿದ್ದ ಜಲ್ಲಿ ಪುಡಿಯಿಂದಾಗಿ ಬೈಕ್ ನಿಯಂತ್ರಣ ತಪ್ಪಿ ವೆಂಕಟೇಶ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಅವರ ಕೈ ಮೂಳೆ ಮುರಿದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸದರೆ ಚೇತರಿಸಿಕೊಳ್ಳಲು ತಿಂಗಳುಗಳೇ ಬೇಕಾಗುತ್ತದೆ.

ಹೆಲ್ಮೆಟ್ ಧರಿಸಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ರಸ್ತೆಯ ದುಸ್ಥಿತಿ, ಅವ್ಯವಸ್ಥೆ ಇನ್ನಷ್ಟು ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ ಎಂಬ ಆತಂಕ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುವನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಇಂತಹ ನಿರ್ಲಕ್ಷ್ಯದಿಂದ ಯಾರಾದರೂ ಜೀವ ಕಳೆದುಕೊಂಡರೆ ಯಾರು ಹೊಣೆ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕಾಮಗಾರಿ ನಡೆಸುವಾಗ ಕನಿಷ್ಠ ಸುರಕ್ಷತಾ ಕ್ರಮಗಳನ್ನೂ ಪಾಲಿಸದೆ ಸಾರ್ವಜನಿಕರ ಜೀವವನ್ನು ಅಪಾಯಕ್ಕೆ ತಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೂಡ ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ದಿನನಿತ್ಯ ಪ್ರಯಾಣಿಕರು ಸಂಕಷ್ಟ ಅನುಭವಿಸುತಿದ್ದಾರೆ. ರಸ್ತೆಯಲ್ಲಿ ಬೇಕಾಬಿಟಿ ರಾಶಿ ಬಿದ್ದಿರುವ ಜಲ್ಲಿ ಪುಡಿಯನ್ನು ತಕ್ಷಣ ತೆರವುಗೊಳಿಸಬೇಕು, ರಸ್ತೆಯನ್ನು ಸುಧಾರಣೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇಲ್ಲವಾದರೆ ಸಂಬಂಧಪಟ್ಟವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

16 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

16 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

23 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

23 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

23 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

23 hours ago