ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು
ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಕಣದಲ್ಲಿ ಒಕ್ಕಣೆಗೆ ಹಾಕಿದ್ದ ೧೦ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಸಂಪೂರ್ಣವಾಗಿ ಹಾಳಾಗಿದ್ದು, ಅಂದಾಜು ೮ ಲಕ್ಷ ರೂ. ನಷ್ಟವಾಗಿದೆ.
ರೈತರು ರಾಗಿ ಬೆಳೆಯನ್ನು ಕಣದಲ್ಲಿ ಒಕ್ಕಣೆಗೆ ಹಾಕಿದ್ದು, ಅವಳಿ ತಾಲ್ಲೂಕುಗಳ ಕೆಲವೆಡೆ ಕಳೆದ ರಾತ್ರಿ ಇದ್ದಕ್ಕಿದ್ದಂತೆ ಸುರಿದ ಭಾರೀ ಮಳೆಯಿಂದ ಸಂಪೂರ್ಣವಾಗಿ ಹಾನಿಯಾಗಿದೆ.
ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಸಮೀಪದ ಕಾವಲು ಹೊಸೂರು ಗ್ರಾಮದ ರೈತರು ರಾಗಿಯನ್ನು ಕಣದಲ್ಲಿ ಒಕ್ಕಣೆ ಮಾಡಿದ್ದರು. ಅಕಾಲಿಕ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ರೈತರು ರಾಗಿ ಬೆಳೆಯನ್ನು ಮೆದೆ ಹಾಕಿರುತ್ತಾರೆ. ಮಳೆಗಾಲ ನಿಂತ ಮೇಲೆ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಜಮೀನಿನಲ್ಲಿ ಕಣ ಮಾಡಿಕೊಂಡು ರಾಗಿ ಒಕ್ಕಣೆ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ. ಅಕಾಲಿಕ ಮಳೆ ಸುರಿದಿರುವುದು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಅದೇ ರೀತಿ ಕಾವಲು ಹೊಸೂರು ಗ್ರಾಮದ ಹುಚ್ಚೇಗೌಡ, ರಾಮೇಗೌಡ, ಸಣ್ಣಸ್ವಾಮಿ, ಕೆಂಪಮ್ಮ, ಕೃಷ್ಣೇಗೌಡ, ಕುಮಾರ್ ಸೇರಿದಂತೆ ಹಲವು ರೈತ ಕುಟುಂಬಗಳವರು ಸುಮಾರು ೧೦ ಎಕರೆಯಲ್ಲಿ ರಾಗಿ ಬೆಳೆ ಬೆಳೆದು, ರಾಗಿ ಹುಲ್ಲನ್ನು ಕಣದಲ್ಲಿ ಹರಡಿದ್ದರು. ಆದರೆ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆ ಕಣದಲ್ಲಿದ್ದ ರಾಗಿ ಮತ್ತು ಹುಲ್ಲನ್ನು ಕೊಚ್ಚಿಕೊಂಡು ಹೋಗಿದೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.
ಶಾಸಕ ರವಿಶಂಕರ್ ಹಾಗೂ ತಹಸಿಲ್ದಾರ್ ಅವರು ಅಕಾಲಿಕ ಮಳೆಯಿಂದ ನಷ್ಟಕ್ಕೀಡಾದ ರೈತರಿಗೆ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳ ಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಂಪೆರೆದ ಮಳೆ: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಝಳದಿಂದ ಬಸವಳಿದಿದ್ದ ಜನರಿಗೆ ಹಾಗೂ ಭೂಮಿಗೆ ಮಳೆ ತಂಪೆರೆದಿದೆ. ಕೆ.ಆರ್.ನಗರ ತಾಲ್ಲೂಕಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾದರೆ, ಸಾಲಿಗ್ರಾಮ ತಾಲ್ಲೂಕಿನ ವಿವಿಧೆಡೆಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮವಾಗಿ ಮಳೆ ಸುರಿದಿದೆ.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…