Urgent demand to start the cardiology unit soon.
ನವೀನ್ ಡಿಸೋಜ
ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಚರ್ಚೆ; ಸರ್ಕಾರದ ಮಟ್ಟದಲ್ಲಿ ಅಂತಿಮವಾಗಬೇಕಿದೆ ಪ್ರಕ್ರಿಯೆ
ಮಡಿಕೇರಿ: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಉದ್ದೇಶಿತ ಹೃದ್ರೋಗ ಘಟಕ ಶೀಘ್ರ ಆರಂಭಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಹೃದಯಾಘಾತಕ್ಕೆ ಸಂಬಂಧಿಸಿದಂತೆ ಜನರಲ್ಲಿ ಹೆಚ್ಚಿನ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿಯೂ ಆಸ್ಪತ್ರೆಗಳಿಗೆ ಬರುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಮಡಿಕೇರಿಯಲ್ಲಿರುವ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಗೆ ಕೊಡಗು ಜಿಲ್ಲೆ ಜನತೆ ಮಾತ್ರವಲ್ಲದೆ ಹೊರಜಿಲ್ಲೆಯ ನಿವಾಸಿಗಳೂ ಬರುತ್ತಿದ್ದಾರೆ. ಇಂತಹ ಸಂದಭದಲ್ಲಿ ಹೃದ್ರೋಗ ತಪಾಸಣೆ, ಚಿಕಿತ್ಸೆಯ ಅಗತ್ಯತೆ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಕೋಯಿಮ್ಸ್‌ನಲ್ಲಿ ಯೋಜಿತ ಹೃದ್ರೋಗ ಘಟಕವನ್ನು ಶೀಘ್ರ ಆರಂಭಿಸ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ (ಜಿಲ್ಲಾ ಆಸ್ಪತ್ರೆ) ಸೇರಿದಂತೆ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಹೃದ್ರೋಗ ಘಟಕಗಳಿಲ್ಲ. ಒಂದೆರಡು ಖಾಸಗಿ ಆಸ್ಪತ್ರೆಗಳಲ್ಲಿ ನಿಯಮಿತವಾಗಿ ಬೇರೆ ಆಸ್ಪತ್ರೆಗಳ ಹೃದ್ರೋಗತಜ್ಞರು ಲಭ್ಯವಿರುತ್ತಾರಾದರೂ ಇಸಿಜಿ, ಎಕೋ ಸೇವೆ ಹೊರತುಪಡಿಸಿ ಹೆಚ್ಚಿನ ಚಿಕಿತ್ಸಾ ವ್ಯವಸ್ಥೆಯಿಲ್ಲ. ಎಕೋ ಇರುವುದೂ ಕೆಲವು ಖಾಸಗಿ ಸಂಸ್ಥೆಗಳಲ್ಲಿ ಮಾತ್ರ. ಹೀಗಾಗಿ ಹೃದಯಸಂಬಂಧಿ ತೊಂದರೆ ಕಾಣಿಸಿಕೊಂಡರೆ ಮೈಸೂರು, ಮಂಗಳೂರು ಭಾಗದ ಆಸ್ಪತ್ರೆಗಳತ್ತ ತೆರಳುವುದು ಜಿಲ್ಲೆಯ ಜನರಿಗೆ ಅನಿವಾರ್ಯವಾಗಿದೆ.
೨೦೨೪ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಯ ಕೋಯಿಮ್ಸ್‌ನಲ್ಲಿ ಹೃದ್ರೋಗ ಘಟಕ ಆರಂಭಿಸುವುದಾಗಿ ಘೋಷಿಸಿದ್ದರು. ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಘಟಕ ಆರಂಭಿಸುವುದು ಈ ಯೋಜನೆಯಾಗಿದ್ದು, ತಾಂತ್ರಿಕ ಕಾರಣಗಳಿಂದ ಹೃದ್ರೋಗ ಘಟಕ ಇನ್ನೂ ಆರಂಭವಾಗಿಲ್ಲ.
ಸರ್ಕಾರದಿಂದ ಉಪಕರಣಗಳನ್ನು ಅಳವಡಿಸಿ ವೈದ್ಯ ಸೇವೆಯನ್ನು ಖಾಸಗಿಯ ವರಿಂದ ಆರಂಭಿಸುವುದೇ ಅಥವಾ ಮೂಲ ಸೌಕರ್ಯಗಳನ್ನು ಒದಗಿಸಿ ಸಂಪೂರ್ಣವಾಗಿ ಖಾಸಗಿ ಸಂಸ್ಥೆಗಳಿಂದಲೇ ಘಟಕ ಆರಂಭಿಸುವುದೇ ಎಂಬುದರ ಕುರಿತು ಸದ್ಯ ವರದಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ಈ ಬಗ್ಗೆ ಅಂತಿಮ ನಿರ್ಧಾರವಾಗಬೇಕಿದೆ.
ಸದ್ಯ ಖಾಸಗಿ ಸಂಸ್ಥೆಯೊಂದು ಜಿಲ್ಲೆಯಲ್ಲಿ ಯಾವ ರೀತಿಯಲ್ಲಿ ಹೃದ್ರೋಗ ಘಟಕ ಆರಂಭಿಸಬಹುದು. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಏನೆಲ್ಲಾ ಸೌಲಭ್ಯಗಳು ಬೇಕಾಗಲಿವೆ ಎಂಬ ಕುರಿತು ವರದಿ ತಯಾರಿಸಿದೆ. ಮೂರು ಮಾದರಿಗಳಲ್ಲಿ ಘಟಕ ಆರಂಭಿಸುವ ಕುರಿತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ವರದಿ ಸಲ್ಲಿಸಿದೆ. ಇಲ್ಲಿಂದ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಗೆ ವರದಿ ಕಳುಹಿಸಲಾಗಿದ್ದು, ಘಟಕಕ್ಕೆ ಬೇಕಾಗುವ ಉಪಕರಣಗಳು ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಅನುಮೋದನೆ ಸಿಗಬೇಕಾಗಿದೆ. ನಂತರದ ಹಂತದಲ್ಲಿ ಸರ್ಕಾರದಿಂದ ಟೆಂಡರ್ ಕರೆದು ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡ ಬಳಿಕವಷ್ಟೇ ಹೃದ್ರೋಗ ಘಟಕ ಆರಂಭವಾಗಲಿದೆ. ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ ೪ ರಿಂದ ೬ ತಿಂಗಳು ಬೇಕು ಎಂದು ಕೋಯಿಮ್ಸ್ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ತಿಳಿಸಿದ್ದಾರೆ.
ಘಟಕ ಆರಂಭಕ್ಕೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಅನುಮೋದನೆಯೊಂದಿಗೆ ಉಪಕರಣಗಳ ಅಳವಡಿಕೆಗೆ ಅನುದಾನ, ಘಟಕಕ್ಕೆ ಮೂಲಸೌಲಭ್ಯಗಳನ್ನು ಕಲ್ಪಿಸುವುದು, ನಾನಾ ಹಂತಗಳಲ್ಲಿ ಟೆಂಡರ್ ಪ್ರಕ್ರಿಯೆ, ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮತ್ತಿತರ ಪ್ರಕ್ರಿಯೆಗಳು ನಡೆಯಬೇಕಿದೆ. ಹೃದ್ರೋಗ ಘಟಕಕ್ಕೆ ಮೂಲಸೌಲಭ್ಯಗಳನ್ನು ಒದಗಿಸಿದ ಬಳಿಕ ಸರ್ಕಾರದ ಜಯದೇವ ಹೃದ್ರೋಗ ಆಸ್ಪತ್ರೆಯಿಂದಲೇ ಸೇವೆ ನೀಡುವ ನಿಟ್ಟಿನಲ್ಲಿಯೂ ಚಿಂತನೆ ನಡೆದಿದೆ. ಆದರೆ ಜಯದೇವ ಆಸ್ಪತ್ರೆಯಲ್ಲಿ ತಜ್ಞವೈದ್ಯರ ಕೊರತೆಯಿರುವುದು ಇದಕ್ಕೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ. ಹೃದ್ರೋಗ ಘಟಕ ಆರಂಭಕ್ಕೆ ಸಂಬಂಧಪಟ್ಟಂತೆ ತಾಂತ್ರಿಕ ಪ್ರಕ್ರಿಯೆಗಳು ನಡೆಯುತ್ತಿವೆ.
ಗುರುವಾರ ಇದೇ ವಿಚಾರವಾಗಿ ಸಚಿವರನ್ನು ಭೇಟಿಯಾಗಿ ಚರ್ಚಿಸಲಿದ್ದೇವೆ. ಖಾಸಗಿ ಸಂಸ್ಥೆಗೆ ಜವಾಬ್ದಾರಿ ನೀಡಿದರೂ ದೊಡ್ಡಮಟ್ಟದಲ್ಲಿ ಆಸ್ಪತ್ರೆಗಳನ್ನು ಹೊಂದಿರುವ ಸಂಸ್ಥೆಗಳಿಗೇ ನೀಡಬೇಕೆಂಬ ಚಿಂತನೆಯಿದೆ. ಸರ್ಕಾರದ ಮಟ್ಟದಲ್ಲಿ ಕೆಲವೊಂದು ಪ್ರಕ್ರಿಯೆಗಳು ಅಂತಿಮವಾಗಬೇಕಿದೆ.
” ಹೃದ್ರೋಗ ಘಟಕ ಆರಂಭಕ್ಕೆ ಸಂಬಂಧಪಟ್ಟಂತೆತಾಂತ್ರಿಕ ಪ್ರಕ್ರಿಯೆಗಳು ನಡೆಯುತ್ತಿವೆ. ಗುರುವಾರ ಇದೇ ವಿಚಾರವಾಗಿ ಸಚಿವರನ್ನು ಭೇಟಿಯಾಗಿ ಚರ್ಚಿಸಲಿದ್ದೇವೆ. ಖಾಸಗಿ ಸಂಸ್ಥೆಗೆ ಜವಾಬ್ದಾರಿ ನೀಡಿದರೂ ದೊಡ್ಡ ಮಟ್ಟದಲ್ಲಿ ಆಸ್ಪತ್ರೆಗಳನ್ನು ಹೊಂದಿರುವ ಸಂಸ್ಥೆಗಳಿಗೇ ನೀಡಬೇಕೆಂಬ ಚಿಂತನೆಯಿದೆ. ಸರ್ಕಾರದ ಮಟ್ಟದಲ್ಲಿ ಕೆಲವೊಂದು ಪ್ರಕ್ರಿಯೆಗಳು ಅಂತಿಮವಾಗಬೇಕಿದೆ.”
–ಡಾ.ಎ.ಜೆ.ಲೋಕೇಶ್, ಡೀನ್ ಮತ್ತು ನಿರ್ದೇಶಕರು, ಕೋಯಿಮ್ಸ್ ಮಡಿಕೇರಿ
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…