ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ
ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ ಕೂಡ ಸಾರ್ವಜನಿಕರ ಕೆಲಸಗಳು ನಿಗದಿತ ಸಮಯದಲ್ಲಿ ಸರಿಯಾಗಿ ಆಗುತ್ತಿಲ್ಲ. ಜನಸಾಮಾನ್ಯರಿಗೆ ಬೇಕಾದ ಅಗತ್ಯ ದಾಖಲೆಗಳು ಸಕಾಲಕ್ಕೆ ಸಿಗುವುದಿಲ್ಲ ಎಂಬ ಜನರ ಆರೋಪಗಳ ನಡುವೆಯೂ ‘ಸಕಾಲ’ ಯೋಜನೆಯಡಿ ವಿವಿಧ ಪ್ರಕಾರಗಳ ದಾಖಲೆ ಗಳನ್ನು ಕೆಲವೇ ಗಂಟೆಗಳಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡುವ ಮೂಲಕ ತಾಲ್ಲೂಕಿನ ಮಿರ್ಲೆ ನಾಡಕಚೇರಿಯು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಲ್ಲಿಸಬೇಕು. ಹೀಗೆ ಮಾಡಿದಾಗ ಕೆಲಸವನ್ನು ಸಕಾಲದಲ್ಲಿ ಮಾಡಲು ಸಹಕಾರವಾಗುತ್ತದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಕಂದಾಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಂದಾಯ ಇಲಾಖೆಯ ‘ಸಕಾಲ’ದಲ್ಲಿ ಆದಾಯ ಪ್ರಮಾಣ ಪತ್ರ, ವಾಸ ಸ್ಥಳ, ವಂಶವೃಕ್ಷ, ವ್ಯವಸಾಯ ದೃಢೀಕರಣ ಪತ್ರ ಸೇರಿದಂತೆ ಹಲವು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಸಂಬಂಧಿಸಿದ ದಾಖಲಾತಿ ಪಡೆಯಲು ಹಲವು ದಿನಗಳು ಕಳೆದರೂ ಕೂಡ ಅವುಗಳು ದೊರೆಯುತ್ತಿ ರಲಿಲ್ಲ. ಆದರೆ ಇಂದು ‘ಸಕಾಲ’ದಲ್ಲಿ ತಂತ್ರ ಜ್ಞಾನವನ್ನು ಅಳವಡಿಸಿಕೊಂಡು ಸಂಬಂಧ ಪಟ್ಟ ಅರ್ಜಿಯನ್ನು ಒಂದೇ ದಿನದಲ್ಲಿ ವಿಲೇ ವಾರಿ ಮಾಡಿ ಅರ್ಜಿದಾರರಿಗೆ ದಾಖಲಾತಿ ಸಿಗುವಂತೆ ಮಾಡಲು ಕಂದಾಯ ಇಲಾಖೆಯು ಮುಂದಾಗಿದೆ.
ಕಂದಾಯ ಇಲಾಖೆಯಲ್ಲಿ ದಾಖಲಾತಿ ಗಳಿಗಾಗಿ ‘ಸಕಾಲ’ದಲ್ಲಿ ಅರ್ಜಿ ಸಲ್ಲಿಸುವಾಗ ಅರ್ಜಿಯ ಜೊತೆಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ಅರ್ಜಿಯ ಜೊತೆಯಲ್ಲಿ ನೀಡಬೇಕಾಗಿತ್ತು. ಆದರೆ ಈಗ ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳ ಮೂಲ ಪ್ರತಿಗಳನ್ನು ನೀಡಿದರೆ ಅವುಗಳನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವುದರಿಂದ ಅಧಿಕಾರಿಗಳು ಅರ್ಜಿ ಮತ್ತು ಅದರ ಜೊತೆಯಲ್ಲಿನ ದಾಖಲೆಗಳನ್ನು ತಾವು ಇದ್ದ ಸ್ಥಳದಲ್ಲೇ ಪರಿಶೀಲಿಸಿ ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿಯನ್ನು ವರ್ಗಾಯಿಸುವುದರಿಂದ ಈ ಪ್ರಕ್ರಿಯೆಯು ಕೆಲವೇ ಗಂಟೆಗಳಲ್ಲಿ ಪೂರ್ಣಗೊಂಡು ಅರ್ಜಿದಾರರಿಗೆ ಒಂದೇ ದಿನದಲ್ಲಿ ದಾಖಲಾತಿ ಲಭ್ಯವಾಗಲಿದೆ.
ಈ ಹಿಂದೆ ‘ಸಕಾಲ’ದಲ್ಲಿ ಅರ್ಜಿ ಸಲ್ಲಿಸಿದಾಗ ಅರ್ಜಿಗಳು ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ಒಬ್ಬ ಅಧಿಕಾರಿಯಿಂದ ಮತ್ತೊಬ್ಬ ಅಧಿಕಾರಿಗೆ ತಲುಪಿಸುವ ಪದ್ಧತಿ ಇದ್ದುದರಿಂದ ಎಲ್ಲಾ ಅಧಿಕಾರಿಗಳಿಗೂ ಒಂದೇ ದಿನದಲ್ಲಿ ಅರ್ಜಿಯನ್ನು ತಲುಪಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ‘ಸಕಾಲ’ದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒಂದೇ ದಿನದಲ್ಲಿ ಪಡೆಯಬಹುದಾಗಿದೆ. ಅರ್ಜಿಗಳ ಜೊತೆಗೆ ಅದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಅಪ್ಲೋಡ್ ಮಾಡುವುದರಿಂದ ಅಧಿಕಾರಿಗಳು ಅವರು ಇರುವ ಸ್ಥಳದಲ್ಲೇ ಅರ್ಜಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ವರ್ಗಾಯಿಸಲು ಅವಕಾಶವಿದೆ. ಹಾಗಾಗಿ ಒಂದೇ ದಿನದಲ್ಲಿ ಅರ್ಜಿ ವಿಲೇವಾರಿಯಾಗಿ ಸಂಬಂಧ ಪಟ್ಟ ದಾಖಲಾತಿಯು ಅರ್ಜಿದಾರರಿಗೆ ಸಿಗುವಂತಾಗಿದೆ. -ಆರ್. ಎ. ಮಹೇಶ್, ಉಪ ತಹಸಿಲ್ದಾರ್, ಮಿರ್ಲೆ ನಾಡಕಚೇರಿ
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…