Andolana originals

ತಂತ್ರಜ್ಞಾನದ ಬಳಕೆ; ʼಸಕಾಲದಲ್ಲಿʼ ದಾಖಲೆ ಲಭ್ಯ

ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ

ಕೆ.ಟಿ.ಮೋಹನ್‌ ಕುಮಾರ್‌

ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ ಕೂಡ ಸಾರ್ವಜನಿಕರ ಕೆಲಸಗಳು ನಿಗದಿತ ಸಮಯದಲ್ಲಿ ಸರಿಯಾಗಿ ಆಗುತ್ತಿಲ್ಲ. ಜನಸಾಮಾನ್ಯರಿಗೆ ಬೇಕಾದ ಅಗತ್ಯ ದಾಖಲೆಗಳು ಸಕಾಲಕ್ಕೆ ಸಿಗುವುದಿಲ್ಲ ಎಂಬ ಜನರ ಆರೋಪಗಳ ನಡುವೆಯೂ ‘ಸಕಾಲ’ ಯೋಜನೆಯಡಿ ವಿವಿಧ ಪ್ರಕಾರಗಳ ದಾಖಲೆ ಗಳನ್ನು ಕೆಲವೇ ಗಂಟೆಗಳಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡುವ ಮೂಲಕ ತಾಲ್ಲೂಕಿನ ಮಿರ್ಲೆ ನಾಡಕಚೇರಿಯು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಲ್ಲಿಸಬೇಕು. ಹೀಗೆ ಮಾಡಿದಾಗ ಕೆಲಸವನ್ನು ಸಕಾಲದಲ್ಲಿ ಮಾಡಲು ಸಹಕಾರವಾಗುತ್ತದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಕಂದಾಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕಂದಾಯ ಇಲಾಖೆಯ ‘ಸಕಾಲ’ದಲ್ಲಿ ಆದಾಯ ಪ್ರಮಾಣ ಪತ್ರ, ವಾಸ ಸ್ಥಳ, ವಂಶವೃಕ್ಷ, ವ್ಯವಸಾಯ ದೃಢೀಕರಣ ಪತ್ರ ಸೇರಿದಂತೆ ಹಲವು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಸಂಬಂಧಿಸಿದ ದಾಖಲಾತಿ ಪಡೆಯಲು ಹಲವು ದಿನಗಳು ಕಳೆದರೂ ಕೂಡ ಅವುಗಳು ದೊರೆಯುತ್ತಿ ರಲಿಲ್ಲ. ಆದರೆ ಇಂದು ‘ಸಕಾಲ’ದಲ್ಲಿ ತಂತ್ರ ಜ್ಞಾನವನ್ನು ಅಳವಡಿಸಿಕೊಂಡು ಸಂಬಂಧ ಪಟ್ಟ ಅರ್ಜಿಯನ್ನು ಒಂದೇ ದಿನದಲ್ಲಿ ವಿಲೇ ವಾರಿ ಮಾಡಿ ಅರ್ಜಿದಾರರಿಗೆ ದಾಖಲಾತಿ ಸಿಗುವಂತೆ ಮಾಡಲು ಕಂದಾಯ ಇಲಾಖೆಯು ಮುಂದಾಗಿದೆ.

ಕಂದಾಯ ಇಲಾಖೆಯಲ್ಲಿ ದಾಖಲಾತಿ ಗಳಿಗಾಗಿ ‘ಸಕಾಲ’ದಲ್ಲಿ ಅರ್ಜಿ ಸಲ್ಲಿಸುವಾಗ ಅರ್ಜಿಯ ಜೊತೆಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ಅರ್ಜಿಯ ಜೊತೆಯಲ್ಲಿ ನೀಡಬೇಕಾಗಿತ್ತು. ಆದರೆ ಈಗ ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳ ಮೂಲ ಪ್ರತಿಗಳನ್ನು ನೀಡಿದರೆ ಅವುಗಳನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವುದರಿಂದ ಅಧಿಕಾರಿಗಳು ಅರ್ಜಿ ಮತ್ತು ಅದರ ಜೊತೆಯಲ್ಲಿನ ದಾಖಲೆಗಳನ್ನು ತಾವು ಇದ್ದ ಸ್ಥಳದಲ್ಲೇ ಪರಿಶೀಲಿಸಿ ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿಯನ್ನು ವರ್ಗಾಯಿಸುವುದರಿಂದ ಈ ಪ್ರಕ್ರಿಯೆಯು ಕೆಲವೇ ಗಂಟೆಗಳಲ್ಲಿ ಪೂರ್ಣಗೊಂಡು ಅರ್ಜಿದಾರರಿಗೆ ಒಂದೇ ದಿನದಲ್ಲಿ ದಾಖಲಾತಿ ಲಭ್ಯವಾಗಲಿದೆ.

ಈ ಹಿಂದೆ ‘ಸಕಾಲ’ದಲ್ಲಿ ಅರ್ಜಿ ಸಲ್ಲಿಸಿದಾಗ ಅರ್ಜಿಗಳು ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ಒಬ್ಬ ಅಧಿಕಾರಿಯಿಂದ ಮತ್ತೊಬ್ಬ ಅಧಿಕಾರಿಗೆ ತಲುಪಿಸುವ ಪದ್ಧತಿ ಇದ್ದುದರಿಂದ ಎಲ್ಲಾ ಅಧಿಕಾರಿಗಳಿಗೂ ಒಂದೇ ದಿನದಲ್ಲಿ ಅರ್ಜಿಯನ್ನು ತಲುಪಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ‘ಸಕಾಲ’ದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒಂದೇ ದಿನದಲ್ಲಿ ಪಡೆಯಬಹುದಾಗಿದೆ. ಅರ್ಜಿಗಳ ಜೊತೆಗೆ ಅದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಅಪ್ಲೋಡ್ ಮಾಡುವುದರಿಂದ ಅಧಿಕಾರಿಗಳು ಅವರು ಇರುವ ಸ್ಥಳದಲ್ಲೇ ಅರ್ಜಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ವರ್ಗಾಯಿಸಲು ಅವಕಾಶವಿದೆ. ಹಾಗಾಗಿ ಒಂದೇ ದಿನದಲ್ಲಿ ಅರ್ಜಿ ವಿಲೇವಾರಿಯಾಗಿ ಸಂಬಂಧ ಪಟ್ಟ ದಾಖಲಾತಿಯು ಅರ್ಜಿದಾರರಿಗೆ ಸಿಗುವಂತಾಗಿದೆ. -ಆರ್. ಎ. ಮಹೇಶ್, ಉಪ ತಹಸಿಲ್ದಾರ್, ಮಿರ್ಲೆ ನಾಡಕಚೇರಿ

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

7 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago