Andolana originals

‘ಸಾವಿನ ನಂತರವೂ ಜನಮಾನಸದಲ್ಲಿ ಉಳಿದ ವೀರಭದ್ರಪ್ಪ’

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ 

ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು ಕೆಲವೇ ಕೆಲವರು ಮಾಡುತ್ತಾರೆ. ಸಾವಿನ ನಂತರವೂ ಜನಮಾನಸದಲ್ಲಿ ಉಳಿಯುವವರೆ ನಿಜವಾದ ಸಾಧಕರಾಗಿದ್ದು ಅಂತಹವರ ಸಾಲಿನಲ್ಲಿ ದುಗ್ಗಹಟ್ಟಿ ಪಿ. ವೀರಭದ್ರಪ್ಪರವರೂ ಒಬ್ಬರಾಗಿದ್ದಾರೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಶುಕ್ರವಾರ ತಾಲ್ಲೂಕಿನ ದುಗ್ಗಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ದುಗ್ಗಹಟ್ಟಿ ಪಿ.ವೀರಭದ್ರಪ್ಪ ಅವರಿಗೆ ಹಮ್ಮಿಕೊಂಡಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವೀರಭದ್ರಪ್ಪ ಅವರು ತಮ್ಮ ಜೀವಿತಾವಧಿಯ ತುಂಬ ಸಮಾಜ ಸೇವೆಯನ್ನೇ ಮಾಡುತ್ತಾ ಬಂದಿದ್ದರು. ೧೯೬೦ರ ದಶಕದಲ್ಲಿ ಬಿಳಿಗಿರಿ ರಂಗನಬೆಟ್ಟಕ್ಕೆ ರಸ್ತೆ ಮಾಡಿಸಿ ಉಳಿಕೆ ಹಣವನ್ನು ಸರ್ಕಾರಕ್ಕೆ ವಾಪಸ್ ನೀಡಿದ ಅಪರೂಪದ ವ್ಯಕ್ತಿಯಾಗಿದ್ದರು. ಯಾವಾಗಲೂ ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಜಕೀಯದಲ್ಲಿ ಬೆಳೆಯುವ ಎಲ್ಲಾ ಅರ್ಹತೆಗಳಿದ್ದರೂ ಸಮಾಜ ಸೇವೆಯಲ್ಲೇ ತಮ್ಮ ಇಡೀ ಜೀವನ ಸವೆಸಿದ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು.

ಸುತ್ತೂರು ಮಠದ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ ಇವರು ಇಲ್ಲಿನ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಮಾಜಪರ ಕಳಕಳಿ, ಕಾಳಜಿ ಹೊಂದಿದ್ದರು. ಕೆಲಸದಲ್ಲಿ ಪ್ರಾಮಾಣಿಕರಾಗಿದ್ದರು. ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಾಲೆಯನ್ನು ತೆರೆದಿದ್ದರು. ಎಲ್ಲಾ ಜಾತಿ, ಧರ್ಮಗಳ ಜನರನ್ನು ಗೌರವಯುತವಾಗಿ ಕಾಣುವ ಅಪರೂಪದ ವ್ಯಕ್ತಿಯಾಗಿ ಜನಮನ್ನಣೆಯನ್ನು ಗಳಿಸಿದ್ದರು.

ಇವರು ಹಾಕಿಕೊಟ್ಟ ಮಾರ್ಗದಲ್ಲಿ ಇವರ ಕುಟುಂಬದವರು ನಡೆಯಬೇಕು. ಇಂತಹ ವ್ಯಕ್ತಿಗಳ ಮಾರ್ಗದರ್ಶನವನ್ನು ಎಲ್ಲರೂ ಅನುಸರಿಸಬೇಕು ಎಂದು ನುಡಿದರು. ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ, ಜೀವನದ ಸಾರ್ಥಕ್ಯ ಬದುಕಿನಾಚೆ ಇದೆ. ಮರಣವೇ ಮಹಾನವಮಿ. ಶರಣರ ಬದುಕು ಮರಣದಲ್ಲಿ ನೋಡು ಎಂಬಂತೆ ಬದುಕಿದ ಅಪರೂಪದ ವ್ಯಕ್ತಿ ಪಿ.ವೀರಭದ್ರಪ್ಪ ಆಗಿದ್ದರು. ತಮ್ಮ ಸೇವೆಗಳಿಂದ ಮನುಕುಲದ ಕೃತಾರ್ಥ ಮಾಡುವ ಕೆಲಸವನ್ನು ಇವರು ಮಾಡಿದ್ದಾರೆ. ಇವರ ತತ್ವಾದರ್ಶಗಳ ಪಾಲನೆಯನ್ನು ಎಲ್ಲರೂ ಅನುಸರಿಸಬೇಕು. ಮುಂದಿನ ಪೀಳಿಗೆ ಇಂತಹವರ ನೆರಳಿನಲ್ಲಿ ಸಾಗಬೇಕು ಎಂದರು.

ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ವೀರಭದ್ರಪ್ಪರವರಿಗೆ ರಾಜಕೀಯ ದಿಗ್ಗಜರ ಒಡನಾಟವಿತ್ತು. ಸಾಹಿತ್ಯಾಸಕ್ತರೂ ಆಗಿದ್ದರು. ೬೦ರ ದಶಕದಲ್ಲಿ ಕನಕಪುರದಲ್ಲಿ ನಡೆದ ಸಾಹಿತ್ಯ ಸಮ್ಮೇಳನವನ್ನು ಇಲ್ಲಿನ ಮಠದಲ್ಲಿ ಮಾಡಲು ನನಗೆ ಇವರು ನೈತಿಕ ಸ್ಥೈರ್ಯವನ್ನು ತುಂಬಿದ್ದರು. ಸದಾ ಆರೋಗ್ಯಕರ ಸಮಾಜದ ಕಡೆ ಇವರ ಮನಸ್ಸು ತುಡಿಯುತ್ತಿತ್ತು ಎಂದರು.

ಸಾಹಿತಿ ಚಟ್ನಹಳ್ಳಿ ಮಹೇಶ್ ನುಡಿನಮನ ಕಾರ್ಯಕ್ರಮ ನಡೆಸಿಕೊಟ್ಟರು. ವೀರಭದ್ರಪ್ಪ ಅವರ ಪುತ್ರ ವಿ. ಮಲ್ಲಿಕಾರ್ಜುನ ಸ್ವಾಮಿ ಆಶಯ ನುಡಿಗಳನ್ನಾಡಿದರು. ದೇವನೂರು ಮಹಾಂತ ಸ್ವಾಮೀಜಿ ಆಶೀರ್ವಚನ ನೀಡಿದರು. ತೊರವಳ್ಳಿ ಸೋಮಣ್ಣ ನೇತೃತ್ವದ ಗಾನ ಲಹರಿ ಕಲಾ ತಂಡದ ಸದಸ್ಯರು ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ದೇಗುಲ ಮಠದ ಡಾ.ಶ್ರೀ ಚೆನ್ನಬಸವ ಸ್ವಾಮೀಜಿ, ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಾರಾಪುರ ವಿರಕ್ತಮಠದ ಬಸವರಾಜಸ್ವಾಮಿ ಒಡೆಯರ್, ಹತ್ತಾರು ಮಠಗಳ ಶ್ರೀಗಳು, ವಿ.ಗಂಗಾಧರಸ್ವಾಮಿ, ದುಗ್ಗಹಟ್ಟಿ ರಾಜೇಶ್, ವಿಖ್ಯಾತ್, ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

” ಷಡಕ್ಷರ ದೇವರ ಗದ್ದುಗೆಯ ಪುನರುಜ್ಜೀವನ, ಗಂಗವಾಡಿ ವೀರಭದ್ರೇಶ್ವರ ದೇಗುಲದ ಜೀರ್ಣೋದ್ಧಾರ, ಬಿಳಿಗಿರಿರಂಗನ ಬೆಟ್ಟದ ಗಂಗಾಧರೇಶ್ವರ ದೇಗುಲ, ರಂಗನಾಥಸ್ವಾಮಿ ದೇಗುಲ ಸೇರಿದಂತೆ ಅನೇಕ ದೇಗುಲಗಳ ಅಭಿವೃದ್ಧಿಗೆ ವೀರಭದ್ರಪ್ಪನವರು ತಮ್ಮದೇ ಕಾಣಿಕೆಯನ್ನು ನೀಡಿದ್ದಾರೆ.”

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಆಂದೋಲನ ಡೆಸ್ಕ್

Recent Posts

TESLA | ಶೀಘ್ರದಲ್ಲೇ ಬೆಂಗಳೂರಿಗೆ ಟೆಸ್ಲಾ ಶೋ ರೂಂ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…

4 hours ago

ಚಲನಚಿತ್ರ ಪ್ರಮಾಣೀಕರಣದಲ್ಲಿ ಪಾರದರ್ಶಕತೆ ಇರಲಿ : ನಟ ಕಮಲ್ ಹಾಸನ್ ಸಲಹೆ

ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…

4 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಸ್ಚಚ್ಛತಾ ಅಭಿಯಾನ : 410 ಕೆ.ಜಿ ಕಸ ಸಂಗ್ರಹ

ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…

5 hours ago

ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ : ಎಚ್‌ಡಿಕೆ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…

5 hours ago

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…

5 hours ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

6 hours ago