ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ
ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರು ದಿಢೀರ್ ಭೇಟಿ ನೀಡಿ ಎಲ್ಲ ದಾಖಲಾತಿಗಳನ್ನೂ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ರೈತ ಸಂಘಟನೆಯವರು, ಮುಖಂಡರು, ಪ್ರಜ್ಞಾವಂತರು, ಮಾಧ್ಯಮದವರು ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಅಕ್ರಮ ರೆಸಾರ್ಟ್‌ಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಶಾಸಕ ಅನಿಲ್ ಚಿಕ್ಕಮಾದುರವರು ಸಭೆ ನಡೆಸಿ ತಾಲ್ಲೂಕಿನಲ್ಲಿರುವ ಪ್ರತಿಯೊಂದೂ ರೆಸಾರ್ಟ್‌ಗಳ ಸಮಗ್ರ ತನಿಖೆ ನಡೆಸಲು ಸಮಿತಿ ರಚಿಸಿದ್ದಾರೆ.
ಅದರಂತೆ ಪಟ್ಟಣದ ಆಡಳಿತ ಸೌಧದಲ್ಲಿ ಸಮಿತಿಯ ಮುಖ್ಯಸ್ಥರಾದ ಹುಣಸೂರಿನ ಎಸಿ ಕಾವ್ಯರಾಣಿ ಮತ್ತು ತಹಸಿಲ್ದಾರ್ ಶ್ರೀನಿವಾಸ್ ನೇತೃತ್ವದಲ್ಲಿ ನೀರಾವರಿ, ಸರ್ವೆ, ಕಂದಾಯ, ತಾಪಂ, ಪರಿಸರ, ಅರಣ್ಯ ಇಲಾಖೆಗಳ ಅಧಿಕಾರಿಗಳೊಡನೆ ಸುದೀರ್ಘವಾಗಿ ಸಭೆ ನಡೆಸಿ ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿರುವ ೧೩ ರೆಸಾರ್ಟ್‌ಗಳು ೭ ಹೋಂಸ್ಟೇಗಳಿಗೆ ಅಧಿಕಾರಿಗಳೊಡನೆ ಭೇಟಿ ನೀಡಿ ರೆಸಾರ್ಟ್‌ಗಳ ದಾಖಲಾತಿ ಪಡೆದು ಪರಿಶೀಲಿಸುತ್ತಿದ್ದಾರೆ.
ರೆಸಾರ್ಟ್ ಅರಣ್ಯ ವ್ಯಾಪ್ತಿಗೆ ಬರುತ್ತದೆಯೇ, ಜಮೀನು ಒತ್ತುವರಿಯಾಗಿದೆಯೇ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿದ್ದಾರೆಯೇ ಎಂಬ ಕುರಿತು ರೆಸಾರ್ಟ್‌ನ ಮಾಲೀಕರು, ವ್ಯವಸ್ಥಾಪಕರಿಂದ ಮಾಹಿತಿ ಪಡೆದಿದ್ದಾರೆ.
ಹುಣಸೂರಿನ ಎಸಿ ಕಾವ್ಯರಾಣಿ, ತಹಸಿಲ್ದಾರ್ ಶ್ರೀನಿವಾಸ್, ಅರಣ್ಯ ಅಧಿಕಾರಿಗಳಾದ ಮಧು, ಮಹೇಶ್, ಸಿದ್ದರಾಜು, ತಾಪಂ ಇಒ ಧರಣೇಶ, ನೀರಾವರಿ ಇಲಾಖೆ ಅಧಿಕಾರಿ ಗಣೇಶ್, ಕಂದಾಯ ಇಲಾಖೆ ಅಧಿಕಾರಿಗಳಾದ ಸಂಜೀವ್ ಕುಮಾರ್, ಯೋಗೇಶ್, ಗೌಸ್ ಶಂಕರ್, ಲಿಂಗ, ನಾಗರಾಜು, ಸರ್ವೆ ಇಲಾಖೆಯ ಬಸವರಾಜು, ಶಂಭು, ಎಸ್‌ಐ ಚಂದ್ರಹಾಸ್, ಇತರರು ಉಪಸ್ಥಿತರಿದ್ದರು.
” ಕಬಿನಿ ಹಿನ್ನೀರಿನ ಅರಣ್ಯ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳ ಬಗ್ಗೆ ದೂರುಗಳು ಬಂದಿರುವುದರಿಂದ ಉನ್ನತ ಮಟ್ಟದ ಅಧಿಕಾರಿಗಳೊಡನೆ ಸಮಿತಿಯ ಮೂಲಕ ದಾಖಲಾತಿಗಳನ್ನು ಪಡೆದು ಪರಿಶೀಲಿಸಲಾಗುತ್ತಿದೆ. ತನಿಖೆ ನಡೆದ ನಂತರ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಯವರಿಗೆ ನೀಡಲಾಗುವುದು.”
-ಶ್ರೀನಿವಾಸ್, ತಹಸಿಲ್ದಾರ್
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…