ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಹಾಗೂ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಬಿ.ಸುದರ್ಶನ್ ರೆಡ್ಡಿ ಉಮೇದುವರಿಕೆ ಸಲ್ಲಿಸಿದ್ದಾರೆ.
ಆಡಳಿತ ಪಕ್ಷ ಉಪ ರಾಷ್ಟ್ರಪತಿ ಸ್ಥಾನವನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಟ್ಟಿದ್ದರೆ ನಮ್ಮ ಪ್ರಜಾ ಪ್ರಭುತ್ವಕ್ಕೆ ಹೆಚ್ಚಿನ ಮೆರುಗು ಬರುತ್ತಿತ್ತು. ಸಂಖ್ಯಾಬಲದ ದೃಷ್ಟಿಯಿಂದ ಎನ್ ಡಿಎ ಅಭ್ಯರ್ಥಿ ಸುಲಭವಾಗಿ ಜಯಗಳಿಸಬಹುದಾದರೂ, ವಿರೋಧ ಪಕ್ಷಗಳು ಸಾಂಕೇತಿಕವಾಗಿ ಅಭ್ಯರ್ಥಿಯನ್ನು ನಿಲ್ಲಿಸಿರುವುದು ಸ್ವಾಗತಾರ್ಹವಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು





