Virajpet Hospital to be upgraded soon
ನವೀನ್ ಡಿಸೋಜ
೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯಿಂದ ದಕ್ಷಿಣ ಕೊಡಗಿನವರಿಗೆ ಅನುಕೂಲ;
ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ
ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ದಕ್ಷಿಣ ಕೊಡಗಿನ ಜನಸಾಮಾನ್ಯರಿಗೆ ಅನುಕೂಲವಾಗಲಿದೆ.
ವಿರಾಜಪೇಟೆ ಆಸ್ಪತ್ರೆಗೆ ನಿತ್ಯ ೫೦೦ರಿಂದ ೬೦೦ ಮಂದಿ ಹೊರ ರೋಗಿಗಳು ಭೇಟಿ ನೀಡುತ್ತಿದ್ದು, ಈ ಸಂಖ್ಯೆಗೆ ಈಗಿರುವ ಆಸ್ಪತ್ರೆಯಲ್ಲಿನ ಸೌಲಭ್ಯಗಳು ಸಾಲುತ್ತಿರಲಿಲ್ಲ. ಹೀಗಾಗಿ ಇಲ್ಲಿನ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಈ ಬಾರಿ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ಅದು ಸಾಕಾರ ಗೊಂಡಿದೆ. ಆಸ್ಪತ್ರೆಯ ಸಾಮರ್ಥ್ಯವನ್ನು ೪೦೦ ಬೆಡ್‌ಗಳಿಗೆ ಹೆಚ್ಚಿಸುವುದರೊಂದಿಗೆ ಹೆಚ್ಚಿನ ವೈದ್ಯಕೀಯ ಸೌಲಭ್ಯಗಳನ್ನು ನೀಡಲು ಸರ್ಕಾರ ಸಮ್ಮತಿಸಿ ಈ ಹಿಂದಿನ ಬಜೆಟ್‌ನಲ್ಲಿ ಘೋಷಿಸಿತ್ತು.
ಇದೀಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.ದಕ್ಷಿಣ ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಡಿಗಳಿವೆ. ಗಿರಿಜನರು, ಬುಡಕಟ್ಟು ಸಮುದಾಯಗಳ ಸಾವಿರಾರು ಮಂದಿ ಈ ವ್ಯಾಪ್ತಿಯ ಸಣ್ಣಸಣ್ಣ ಮನೆ, ಗುಡಿಸಲು ಗಳಲ್ಲಿ ವಾಸವಿದ್ದಾರೆ. ಜೊತೆಗೆ ಕಾಫಿ ತೋಟದ ಕಾರ್ಮಿಕರ ಸಂಖ್ಯೆಯೂ ಈ ಭಾಗದಲ್ಲಿ ಹೆಚ್ಚಾಗಿದೆ. ಬಹುತೇಕ ಜನರು ಆರೋಗ್ಯ ಸೇವೆಗೆ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ.
ಇದನ್ನು ಓದಿ : ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಅತ್ಯಾಧುನಿಕ ಚಿಕಿತ್ಸೆ
ಈಗ ಸರ್ಕಾರ ವಿರಾಜಪೇಟೆ ಆಸ್ಪತ್ರೆ ಯನ್ನು ಮೇಲ್ದರ್ಜೆಗೇರಿಸುವುದರಿಂದ ಮತ್ತಷ್ಟು ಅನುಕೂಲವಾಗಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಸಿಗುವ ಬಹುತೇಕ ಆರೋಗ್ಯಸೇವೆ ವಿರಾಜಪೇಟೆಯಲ್ಲಿಯೇ ಲಭ್ಯವಾಗಲಿದ್ದು, ಸಾವಿರಾರು ಮಂದಿ ಇದರ ಅನುಕೂಲ ಪಡೆಯಲಿದ್ದಾರೆ.ಸ್ಕ್ಯಾನಿಂಗ್ ಸೇವೆ, ಹೃದ್ರೋಗ ಘಟಕ, ರಕ್ತನಿಧಿ ಕೇಂದ್ರ, ಐಸಿಯು ಘಟಕ ಹಾಗೂ ಡಯಾಲಿಸಿಸ್ ಘಟಕವನ್ನೂ ಮೇಲ್ದರ್ಜೆಗೆ ಏರಿಸಬೇಕಾಗಿದ್ದು, ಒಟ್ಟಿನಲ್ಲಿ ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆ ಕಾರ್ಯಾರಂಭ ಮಾಡಿದಲ್ಲಿ ಈ ವ್ಯಾಪ್ತಿಯ ಜನರಿಗೆ ಅನುಕೂಲವಾಗಲಿದೆ.
ವೈದ್ಯರ ಸಂಖ್ಯೆಯೂ ಹೆಚ್ಚಳ: ಸದ್ಯ ವಿರಾಜಪೇಟೆ ಆಸ್ಪತ್ರೆಯಲ್ಲಿ ಸುಮಾರು ೧೧ ಮಂದಿ ತಜ್ಞ ವೈದ್ಯರಿದ್ದಾರೆ. ಆಸ್ಪತ್ರೆ ಮೇಲ್ದರ್ಜೆಗೇರಿಸಿದಲ್ಲಿ ಈ ಸಂಖ್ಯೆ ೩೮ಕ್ಕೆ ಏರಿಕೆಯಾಗಲಿದೆ. ಜೊತೆಗೆ ಕೆಲವು ವಿಭಾಗಗಳಲ್ಲಿ ಬೇರೆಡೆಯ ವೈದ್ಯರನ್ನು ತಾತ್ಕಾಲಿಕವಾಗಿ ನಿಯೋಜಿಸಲಾಗಿದ್ದು, ಮುಂದೆ ಖಾಯಂ ವೈದ್ಯರ ಲಭ್ಯತೆ ಇರಲಿದೆ. ೨೬ ಆಡಳಿತ ಅಽಕಾರಿಗಳು, ೨೬೧ ನರ್ಸ್ ಮತ್ತು ಪ್ಯಾರಾಮೆಡಿಕಲ್ ಸೇರಿದಂತೆ ಒಟ್ಟು ಸಿಬ್ಬಂದಿಗಳ ಸಂಖ್ಯೆ ೩೧೯ಕ್ಕೆ ಏರಿಕೆಯಾಗಲಿದೆ.
” ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಹಾಸಿಗೆಗಳುಳ್ಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರದ ಅನುಮೋದನೆ ದೊರೆತಿದೆ. ಆಸ್ಪತ್ರೆಯ ಮೊದಲ ಹಂತದ ಕಾಮಗಾರಿಗೆ ೯೫.೦೬ ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು, ಮೊದಲ ಹಂತದಲ್ಲಿ ೨೫೦ ಹಾಸಿಗೆಗಳುಳ್ಳ ಆಸ್ಪತ್ರೆಯ ಕಾಮಗಾರಿ ಶೀಘ್ರ ಆರಂಭವಾಗಲಿದೆ. ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು. ಈ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಆಧುನಿಕ ಸೌಲಭ್ಯಗಳು ಜನರಿಗೆ ಲಭ್ಯವಾಗಲಿದೆ.”
-ಎ.ಎಸ್.ಪೊನ್ನಣ್ಣ, ವಿರಾಜಪೇಟೆ ಶಾಸಕ
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…