Andolana originals

ವಿರಾಜಪೇಟೆ ಸ್ವಚ್ಛತೆ: ಪುರಸಭೆ ಪ್ರಯತ್ನಕ್ಕೆ ಸಿಗದ ಮನ್ನಣೆ

ಕಾಂಗೀರ ಬೋಪಣ್ಣ

ಸಾಕಷ್ಟು ಕ್ರಮ ಕೈಗೊಂಡರೂ ಎಚ್ಚೆತ್ತುಕೊಳ್ಳದ ಜನತೆ; ಎಲ್ಲೆಂದರಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ವಿರಾಜಪೇಟೆ: ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡದಂತೆ ವಿರಾಜಪೇಟೆ ಪುರಸಭೆಯಿಂದ ಸಾಕಷ್ಟು ಕ್ರಮ ಕೈಗೊಂಡರೂ ಜನತೆ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಎಲ್ಲೆಂದರಲ್ಲಿ ಕಸ ಎಸೆಯುವ ಚಾಳಿಯನ್ನು ಕೆಲವರು ಮುಂದುವರಿಸಿದ್ದು, ಪೊಲೀಸ್ ಇಲಾಖೆ ಮೂಲಕ ಕ್ರಮ ಕೈಗೊಳ್ಳಬೇಕೆನ್ನುವ ಒತ್ತಾಯ ಕೇಳಿ ಬಂದಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದಂತೆ ಪುರಸಭೆಯಿಂದ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಮೊದಲ ಪ್ರಯತ್ನವಾಗಿ ಕಸ ಎಸೆಯುತ್ತಿದ್ದ ಸ್ಥಳದಲ್ಲಿ ಹೂಕುಂಡಗಳನ್ನಿಟ್ಟು ಕಸ ಎಸೆಯದಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಕಸ ಎಸೆಯುವವರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಪ್ರಯತ್ನವೂ ಸಫಲತೆ ಕಂಡಿಲ್ಲ. ಇದೀಗ ಸಿಸಿ ಕ್ಯಾಮೆರಾ ಅಳವಡಿಸಿದರೂ ಕೆಲವರು ಅದೇ ಚಾಳಿಯನ್ನು ಮುಂದುವರಿಸಿದ್ದು, ಪಟ್ಟಣದ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ತಂದು ಸುರಿಯಲಾಗುತ್ತಿದೆ.

ಕಸ ಎಸೆಯುವವರಿಗೆ ಸಣ್ಣ ಪ್ರಮಾಣದ ದಂಡ ವಿಧಿಸುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಇವರ ಮನೋಭಾವ ಬದಲಾಯಿಸಲು ಇವರಿಗೆ ದಂಡದ ಜೊತೆಗೆ ಪೊಲೀಸ್ ಇಲಾಖೆಗೂ ದೂರು ನೀಡಿ ಕಠಿಣ ಕ್ರಮ ಜರುಗಿಸಬೇಕೆಂಬುದು ಪಟ್ಟಣದ ಪ್ರಜ್ಞಾವಂತ ನಾಗರಿಕರ ಆಗ್ರಹವಾಗಿದೆ.

ಕೊಡಗಿನಲ್ಲಿ ಇತ್ತೀಚೆಗೆ ಹೋಂಸ್ಟೇ ಮತ್ತು ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಅಭಿಯಾನ ನಡೆಸಿ ರಾಶಿ ರಾಶಿ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲಾಗಿತ್ತು. ಆದರೆ ಮತ್ತೆ ಹೆದ್ದಾರಿ ಬದಿಯಲ್ಲಿ ಕಸ ರಾರಾಜಿಸುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರ ಕೊಡುಗೆಯೂ ಇದರಲ್ಲಿ ಬಹುಪಾಲು ಇದೆ. ಇದನ್ನು ತಡೆಯಲು ಸ್ಥಳೀಯ ಗ್ರಾ.ಪಂ.ಗಳು ಇನ್ನಿಲ್ಲದ ಕಸರತ್ತು ನಡೆಸಿದರೂ ಪ್ರಯೋಜನವಾಗುತ್ತಿಲ್ಲ.

ವಿರಾಜಪೇಟೆ ಪಟ್ಟಣದಲ್ಲಿ ವಾಹನಗಳು ಪ್ರತಿ ಮನೆ,ಅಂಗಡಿ ಮುಂಗಟ್ಟುಗಳ ಬಳಿ ಬಂದು ಹಸಿಕಸ, ಒಣಕಸವನ್ನು ಪ್ರತ್ಯೇಕವಾಗಿ ಸಂಗ್ರಹ ಮಾಡಿಕೊಂಡು ಹೋಗುತ್ತವೆ. ಆದರೆ ಕದ್ದು ಮುಚ್ಚಿ ತ್ಯಾಜ್ಯ ತಂದು ರಸ್ತೆ ಬದಿ ಎಸೆಯುವ ಕೆಲವು ಜನರ ಮನಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಸ ಎಸೆಯುವವರನ್ನು ಗುರುತಿಸಿ ದಂಡ ವಿಧಿಸುವ ಜವಬ್ದಾರಿಯನ್ನು ಪುರಸಭೆಯ ಪರಿಸರ ಅಭಿಯಂತರ ನೀತು ಸಿಂಗ್ ಅವರು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಇವರಿಗೆ ಪುರಸಭೆ ಸದಸ್ಯರು ಮುಕ್ತವಾಗಿ ಕೆಲಸ ಮಾಡಲು ಬಿಡಬೇಕು ಮತ್ತು ಕಸ ಹಾಕುವವರು ಯಾವುದೇ ಪಕ್ಷದವರು ಅಥವಾ ಮುಖಂಡ ಎನ್ನುವ ಭೇದವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಪುರಸಭೆಯನ್ನು ಒತ್ತಾಯಿಸಿದ್ದಾರೆ.

” ಕಸದ ವಿಚಾರದಲ್ಲಿ ಪುರಸಭೆ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಹಾಕುವವರಿಗೆ ಸಾವಿರ ರೂ. ದಂಡ ಹಾಕುತ್ತಿದ್ದು, ಶೇ.೯೦ ಹತೋಟಿಗೆ ಬಂದಿದೆ. ಇದಕ್ಕಾಗಿ ನೂತನವಾಗಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದ್ದು, ಈಗಾಗಲೇ ೬ ಕಡೆ ಅಳವಡಿಸಲಾಗಿದೆ. ಸದ್ಯದಲ್ಲಿಯೇ ಇವು ಕಾರ್ಯನಿರ್ವಹಿಸಲಿವೆ. ಆದರೆ ಕೆಲವರು ವಿನಾಕಾರಣ ಈ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿರುವುದು ಸರಿಯಲ್ಲ. ಮನೆ ಮನೆ ಪ್ರಚಾರ ಮಾಡಿ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದು, ಜನರು ತಮ್ಮ ಮನೋಭಾವನೆಯನ್ನು ಬದಲಾಯಿಸಿಕೊಳ್ಳಬೇಕಿದೆ.”

-ನಾಚಪ್ಪ, ಪುರಸಭೆ ಮುಖ್ಯಾಧಿಕಾರಿ, ವಿರಾಜಪೇಟೆ

” ನಾವು ಕೆಲವರು ಸೇರಿ ಸಾಮಾಜಿಕ ಬದ್ಧತೆಯಿಂದ ಜನಜಾಗೃತಿಗಾಗಿ ಕೆಲವರು ಸೇರಿ ಪ್ರಮುಖವಾಗಿ ಕಸ ಬಿಸಾಡುವ ಜಾಗದಲ್ಲಿ ಹೂವಿನ ಕುಂಡ ಇಟ್ಟು ಬಂದಿದ್ದೆವು. ಆದರೆ ಜನರು ಅಲ್ಲಿ ಮತ್ತೆ ಕಸ ಹಾಕುತ್ತಿದ್ದಾರೆ. ಈ ಪ್ರವೃತಿ ಸರಿಯಲ್ಲ. ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಅದರಲ್ಲಿ ಸೆರೆಯಾಗುವ ದೃಶ್ಯವನ್ನು ಆಧರಿಸಿ ಕ್ರಮ ಕೈಗೊಳ್ಳುವ ಕಾರ್ಯ ಶೀಘ್ರದಲ್ಲೇ ಆರಂಭವಾಗಬೇಕು. ಪಟ್ಟಣದಲ್ಲಿ ವಾಯುಮಾಲಿನ್ಯ ಹಾಗೂ ಜಲ ಮಾಲಿನ್ಯವನ್ನು ತಡೆಯಬೇಕಿದೆ. ಇದರಲ್ಲಿ ೧೮ ವಾರ್ಡ್ ಸದಸ್ಯರೂ ಭಾಗಿಯಾಗಬೇಕು. ಇದು ಸಿಬ್ಬಂದಿ ಹೊಣೆ ಮಾತ್ರ ಅಲ್ಲ. ನಾಗರಿಕರ ಜವಾಬ್ದಾರಿಯೂ ಹೌದು.”

-ಯೋಗೀಶ್ ನಾಯ್ಡು, ಸಾಮಾಜಿಕ ಕಾರ್ಯಕರ್ತರು, ವಿರಾಜಪೇಟೆ

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

10 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

10 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

10 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

11 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

12 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

12 hours ago