Andolana originals

ಅಧ್ಯಕ್ಷರಿಗಾಗಿ ಕಾದಿರುವ ಮೈಲ್ಯಾಕ್, ಮೃಗಾಲಯ ಪ್ರಾಧಿಕಾರ

• ಕೆ.ಬಿ.ರಮೇಶನಾಯಕ

ಮೈಸೂರು: ಪಂಚ ಗ್ಯಾರಂಟಿ ಯೋಜನೆಗಳ ಮೂಲಕವೇ ಮತದಾರರ ಮನಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಚುನಾವಣೆಯಲ್ಲಿ ಹಗಲಿರುಳು ದುಡಿದ ಮುಖಂಡರು, ಕಾರ್ಯಕರ್ತರಿಗೆ ನಿಗಮ/ ಮಂಡಳಿ, ಪ್ರಾಧಿಕಾರಗಳಲ್ಲಿ ಅವಕಾಶ ಮಾಡಿಕೊಡು ತ್ತಿದ್ದರೂ, ಮೈಸೂರಿನಲ್ಲಿರುವ ಎರಡು ಸರ್ಕಾರಿ ಸಂಸ್ಥೆ ಗಳ ಅಧ್ಯಕ್ಷ ಸ್ಥಾನಗಳನ್ನು ಇನ್ನೂ ಭರ್ತಿ ಮಾಡಿಲ್ಲ.

ಒಂದೆರಡು ದಿನಗಳಲ್ಲಿ ನೇಮಕಾತಿ ಆದೇಶ ಹೊರ ಬೀಳಬಹುದೆಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಚಾತಕ ಪಕ್ಷಿಯಂತೆ ಕಾದಿದ್ದಾರೆ. ಅದರ ಲ್ಲಿಯೂ ದಸರಾ ಮಹೋತ್ಸವಕ್ಕೆ ಮುನ್ನವೇ ನೇಮಕ ಮಾಡಿದರೂ ಒಂದಿಷ್ಟು ಹೆಚ್ಚು ಸಡಗರದಿಂದ ಓಡಾಡ ಬಹುದೆಂಬ ಕನಸು ಕಟ್ಟಿಕೊಂಡಿದ್ದಾರೆ.

ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ (ಮೈಲ್ಯಾಕ್) ಹಾಗೂ ಕರ್ನಾಟಕ ಮೃಗಾಲಯ ಪ್ರಾಧಿ ಕಾರದ ಅಧ್ಯಕ್ಷ ಸ್ಥಾನಗಳನ್ನು ಖಾಲಿ ಉಳಿಸಲಾಗಿದೆ. ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ನ ಕೆಲ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಮತ್ತು ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಬಳಿ ಅಲವತ್ತುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚಿಸಿತು. ನಂತರ, ನಿಗಮ ಮಂಡಳಿಗಳು, ಅಕಾಡೆಮಿಗಳು, ಪ್ರಾಧಿಕಾರ ಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಬೇಕೆಂಬ ಕೂಗು ಪಕ್ಷದ ಕಾರ್ಯ ಕರ್ತರಿಂದಲೇ ಕೇಳಿಬಂದಿತ್ತು.

ಆದರೆ, ಸಚಿವ ಸ್ಥಾನದಿಂದ ವಂಚಿತರಾದ ಶಾಸಕರಿಗೆ ನಿಗಮ/ಮಂಡಳಿ, ಪ್ರಾಧಿಕಾರ, ಅಕಾಡೆಮಿಗಳ ಅಧ್ಯಕ್ಷ ಸ್ಥಾನದ ಅವಕಾಶ ಮಾಡಿಕೊಡಬೇಕೆಂಬ ವಿಚಾರದಲ್ಲಿ ಗೊಂದಲಗಳು ಉಂಟಾಗಿ ಪ್ರಸ್ತಾಪವೇ ನನೆಗುದಿಗೆ ಬಿದ್ದಿತ್ತು. ನಂತರ ಶಾಸಕರು ಮತ್ತು ಮುಖಂಡರನ್ನು ಮಾರ್ಚ್ ತಿಂಗಳಲ್ಲಿ 50:50 ಅನುಪಾತದಲ್ಲಿ ನಿಯೋ ಜನೆ ಮಾಡಲು ಹೈಕಮಾಂಡ್ ಒಪ್ಪಿಗೆ ನೀಡಿದ್ದರಿಂದಾಗಿ ಮೈಸೂರು ಭಾಗದವರಿಗೂ ಅವಕಾಶ ಒಲಿದಿತ್ತು. ಆದರೆ, ಕರ್ನಾಟಕ ಮೃಗಾಲಯ ಪ್ರಾಧಿಕಾರ, ಅರಗು ಮತ್ತು ಬಣ್ಣದ ಕಾರ್ಖಾನೆ ಅಧ್ಯಕ್ಷ ಸ್ಥಾನಗಳಿಗೆ ಇದುವರೆಗೂ ಯಾರನ್ನೂ ನೇಮಕ ಮಾಡಿಲ್ಲ. ಖಾಲಿ ಇರುವ ಈ ಎರಡೂ ಸಂಸ್ಥೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಕಾಂಗ್ರೆಸ್‌ನ ಸ್ಥಳೀಯ ಮುಖಂಡರು ಒತ್ತಡ ಹೇರುತ್ತಿದ್ದಾರೆ. ಈಗಾಗಲೇ ಒಂದು ಅಲ್ಪ ಸಂಖ್ಯಾತ, ಕುರುಬ, ವೀರಶೈವ- ಲಿಂಗಾಯತ ಸಮುದಾಯಕ್ಕೆ ಅವಕಾಶ ಮಾಡಿ ಕೊಟ್ಟಿದ್ದು, ದಲಿತ ಬಲಗೈ-ಎಡಗೈ, ಇತರೆ ಹಿಂದುಳಿದ ವರ್ಗಗಳಿಗೆ ಅವಕಾಶ ಮಾಡಿಕೊಡಬೇಕಿದೆ. ಆದರೆ, ಮುಡಾ ಹಗರ ಣದ ವಿಚಾರದಲ್ಲಿ ತಲೆ ಬಿಸಿ ಮಾಡಿಕೊಂಡಿರುವ ಸಿಎಂ ಯಾವ ನಿರ್ಧಾರ ತೆಗೆದಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯಕ್ಕೆ ಮೃಗಾಲಯಕ್ಕೆ ಅರಣ್ಯ ಸಚಿವರೇ ಅಧ್ಯಕ್ಷರು: 2023ರ ಮೇ ತಿಂಗಳಿಂದ ಖಾಲಿ ಇರುವ ಕಾರಣ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಸದ್ಯಕ್ಕೆ ಅರಣ್ಯ ಸಚಿವರೇ ಅಧ್ಯಕ್ಷರಾಗಿದ್ದಾರೆ. ಮೈಲ್ಯಾಕ್ ಉಸ್ತುವಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಕಾರ್ಯದರ್ಶಿ ನಿರ್ವಹಿಸುತ್ತಿದ್ದಾರೆ.

ಈಗಾಗಲೇ ಅಧ್ಯಕ್ಷರ ನೇಮಕಾತಿ ಆಗಿರುವ ನಿಗಮ-ಮಂಡಳಿ: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಅಯೂಬ್ ಖಾನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ಕೆ.ಮರೀಗೌಡ, ಕಾಡಾಗೆ ಪಿ. ಮರಿಸ್ವಾಮಿ ಅವರನ್ನು ಅಧ್ಯಕ್ಷರಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಇವರಲ್ಲದೆ, ಅರಣ್ಯ, ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆಗೆ ಶಾಸಕ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಟ್)ಕ್ಕೆ ರಮೇಶ್ ಬಾಬು ಬಂಡಿಸಿದ್ದೇಗೌಡ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮಕ್ಕೆ ಮಾಜಿ ಶಾಸಕ ಎಸ್.ಜಯಣ್ಣ, ಎಂಎಸ್ಐಎಲ್‌ಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

8 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

11 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago