Andolana originals

ಪಿಎನ್‌ಜಿ ಬಳಕೆದಾರರಿಗೆ ಎಚ್ಚರಿಕೆ

ಹೆಚ್.ಎಸ್.ದಿನೇಶ್‌ಕುಮಾರ್

ಸಿಲಿಂಡರ್ ಹಿಂತಿರುಗಿಸದಿದ್ದರೆ ಎಫ್ಐಆರ್ ದಾಖಲು

ಸಿಲಿಂಡರ್‌ಗಳ ಕಾಳಸಂತೆ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ; ೫ಕೆಜಿ ಸಿಲಿಂಡರ್‌ಗೂ ಇನ್ನು ಮುಂದೆ ಒಟಿಪಿ ಕಡ್ಡಾಯ

ಮೈಸೂರು: ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ)ಬಳಕೆ ಜೊತೆಗೆ ಸಿಲಿಂಡರ್‌ಗಳನ್ನು ಕೂಡ ಗ್ರಾಹಕರು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಯಲ್ಲಿ ಸಿಲಿಂಡರ್ ಗಳನ್ನು ವಾಪಸ್ ನೀಡದವರ ವಿರುದ್ಧ ಎಫ್ ಐಆರ್ ದಾಖಲಿಸಲು ಇಂಧನ ಸಚಿವಾಲಯ ನಿಯಮ ರೂಪಿಸಿದೆ.

ನಗರದ ಕೆಲವೆಡೆ ಈಗಾಗಲೇ ನೂರಾರು ಮನೆಗಳಿಗೆ ಪೈಪ್‌ಲೈನ್ ಮೂಲಕ ಅನಿಲ ಸರಬರಾಜು ಮಾಡಲಾಗುತ್ತಿದೆ. ಆದರೆ, ಅವರುಗಳು ಈ ಹಿಂದೆ ಪಡೆದಿದ್ದ ಸಿಲಿಂಡರ್ಗಳನ್ನು ಆಯಾ ಏಜೆನ್ಸಿಗಳಿಗೆ ಹಿಂತಿರುಗಿಸಿಲ್ಲ. ಹೀಗೆ ಪಡೆದುಕೊಳ್ಳುವ ಸಿಲಿಂಡರ್‌ಗಳನ್ನು ಅನ್ಯರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿರುವುದು ಏಜೆನ್ಸಿಗಳ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಂತಹವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ವಿತರಣೆಗೆ ಕೇಂದ್ರ ಸರ್ಕಾರ ಮತ್ತಷ್ಟು ನಿಯಮಗಳನ್ನು ಜಾರಿಗೆ ತಂದಿದ್ದು, ಇನ್ನು ಮುಂದೆ ೫ ಕೆಜಿ ಸಿಲಿಂಡರ್ ಪಡೆಯಲೂ ಒಟಿಪಿ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಿದೆ.

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ಆರಂಭವಾದಾಗಿನಿಂದ ಅನಿಲ ಪೂರೈಕೆಯಲ್ಲಿ ಸಾಕಷ್ಟು ವ್ಯತ್ಯಯಗಳು ಉಂಟಾಗಿವೆ. ಗ್ರಾಹಕರಿಗೆ ಅನಿಲ ಸಿಲಿಂಡರ್ ವಿತರಣೆಗೆ ಸಾಕಷ್ಟು ಹೊಸ ನಿಯಮಗಳನ್ನೂ ಜಾರಿಗೊಳಿಸಲಾಗಿದೆ.

ಇಷ್ಟು ದಿನ ೫ ಕೆಜಿ ಸಿಲಿಂಡರ್‌ಗಳನ್ನು ೧೫.೫ ಕೆಜಿ ಸಿಲಿಂಡರ್‌ಗೆ ಪರ್ಯಾಯವಾಗಿ ಜನರು ಬಳಸುತ್ತಿದ್ದರು. ಸಿಲಿಂಡರ್ ಬುಕ್ ಮಾಡಿದಲ್ಲಿ ೨೦ ದಿನಗಳ ನಂತರ ಸಿಲಿಂಡರ್ ನೀಡುವ ಪದ್ಧತಿ ಜಾರಿಯಾದ ನಂತರ ೫ ಕೆಜಿ ಸಿಲಿಂಡರ್‌ಗೆ ಬೇಡಿಕೆ ಹೆಚ್ಚಾಗಿತ್ತು. ಯಾವುದೇ ದಾಖಲೆಗಳೂ ಇಲ್ಲದೆ ೫ ಕೆಜಿ ಸಿಲಿಂಡರ್‌ಗಳನ್ನು ಪಡೆಯಬಹುದಾಗಿತ್ತು. ಆದರೆ, ಈ ಸಿಲಿಂಡರ್ ಗಳಿಗೂ ಬೇಡಿಕೆ ಹೆಚ್ಚಾದ ಹಿನ್ನೆಯಲ್ಲಿ ಸರ್ಕಾರ ಒಟಿಪಿ ಕಡ್ಡಾಯ ಗೊಳಿಸುವುದರ ಜೊತೆಗೆ ೧೦ ದಿನಗಳ ಅಂತರದಲ್ಲಿ ಒಂದು ಸಿಲಿಂಡರ್ ನೀಡಲು ನಿಯಮ ರೂಪಿಸಿದೆ. ಇನ್ನು ವಾಣಿಜ್ಯ ಸಿಲಿಂಡರ್‌ಗಳಿಗಂತೂ ಸಾಕಷ್ಟು ಬೇಡಿಕೆ ಇದೆ. ಬೇಡಿಕೆಗೆ ಅನುಸಾರವಾಗಿ ಶೇ.೫೦ ರಿಂದ ೬೦ ರಷ್ಟು ಸಿಲಿಂಡರ್‌ಗಳನ್ನು ಹೋಟೆಲ್ ಹಾಗೂ ಇನ್ನಿತರ ವಾಣಿಜ್ಯ ಚಟುವಟಿಕೆಗೆ ನೀಡಲಾಗುತ್ತಿತ್ತು. ಆದರೆ, ಇನ್ನು ಮುಂದೆ ವಾಣಿಜ್ಯ ಸಿಲಿಂಡರ್‌ಗಳನ್ನು ಪಡೆಯಲು ಒಟಿಪಿ ಕಡ್ಡಾಯಗೊಳಿಸಲಾಗಿದೆ. ಇದರ ಜೊತೆಗೆ ಗೃಹ ಬಳಕೆ ಸಿಲಿಂಡರ್‌ಗೆ ನೀಡಿರುವ ಮೊಬೈಲ್ ಸಂಖ್ಯೆಯನ್ನು ವಾಣಿಜ್ಯ ಬಳಕೆ ಸಿಲಿಂಡರ್ ಪಡೆಯಲು ನೀಡುವಂತಿಲ್ಲ. ಇದಕ್ಕೆ ಪ್ರತ್ಯೇಕ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ.

ದರ ಹೆಚ್ಚಳ ಸಾಧ್ಯತೆ: 

ಮೂಲಗಳ ಪ್ರಕಾರ ಮುಂದಿನ ಒಂದು ವಾರದಲ್ಲಿ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳವಾಗುವ ಸಾಧ್ಯತೆಗಳಿವೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗೆ ೩೦೦ ರೂ. ಹಾಗೂ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ೫೦ ರೂ. ನಿಂದ ೬೦ ರೂ.ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಏಜೆನ್ಸಿಗಳ ಮಾಲೀಕರು ತಿಳಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

3 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

4 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

6 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

10 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

10 hours ago