Andolana originals

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್

ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. ಆದರೆ, ನೋಟಿಸ್ ಈತನಕ ಕೈ ಸೇರಿಲ್ಲವೆಂದು ಜಿಲ್ಲಾಡಳಿತ ಹೇಳಿದೆ.

ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ನ್ಯಾಯಾಲಯವು ಜಿಲ್ಲಾಧಿಕಾರಿಯವರ ಬಂಧನಕ್ಕೆ ವಾರಂಟ್ ಹೊರಡಿಸಿದ್ದು, ಏ.೨೪ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ. ಕುಂಬಾರಕೊಪ್ಪಲು ನಿವಾಸಿ ಜಯರಾಮು ಅವರ ಜಮೀನು ಸಂಬಂಧ ನ್ಯಾಯಾಲಯ ನೀಡಿದ್ದ ತೀರ್ಪನ್ನು ಜಿಲ್ಲಾಡಳಿತ ಜಾರಿಗೊಳಿಸದ ಹಿನ್ನೆಲೆಯಲ್ಲಿ ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆಯನ್ನು ಗಂಭೀರವಾಗಿ ಪರಿ ಗಣಿಸಿದ ನ್ಯಾಯಾಲಯ, ಆದೇಶ ಪಾಲನೆ ಆಗದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯ ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ. ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲಿಸಿ ನ್ಯಾಯಾಲಯದ ಆದೇಶದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪ್ರಕರಣ ಏನು?: ಹೆಬ್ಬಾಳು ಗ್ರಾಮದ ಸರ್ವೆ ನಂ. ೧೫೫ ಮತ್ತು ೧೫೯/೧ರಲ್ಲಿ ಇರುವ ಸುಮಾರು ಐದು ಎಕರೆ ಜಮೀನನ್ನು ೧೯೮೦ರಲ್ಲಿ ನಗರ ಭೂ ಕಾಯ್ದೆಯಡಿ ಜಿಲ್ಲಾಡಳಿತ ಸ್ವಾಧಿನಪಡಿಸಿಕೊಂಡಿತು

ಈ ಕ್ರಮವನ್ನು ಪ್ರಶ್ನಿಸಿ ಮೂಲ ಮಾಲೀಕರಾದ ಸೀತಾರಾಮೇಗೌಡ ಅವರ ಪುತ್ರ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ನ್ಯಾಯಾಲಯದ ಮೊರೆ ಹೋಗಿದ್ದರು. ಕೆಳ ನ್ಯಾಯಾಲಯ ಹಾಗೂ ಮೇಲ್ಮನವಿ ನ್ಯಾಯಾಲಯ ಎರಡೂ ಅರ್ಜಿದಾರರ ಪರ ತೀರ್ಪು ನೀಡಿದ್ದರೂ ಜಮೀನು ಹಸ್ತಾಂತರಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಬೇಸತ್ತ ಭೂ ಮಾಲೀಕರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ನ್ಯಾಯಾಲಯ ಕಠಿಣ ನಿಲುವು ತಾಳಿದೆ.

” ಜಯರಾಮು ಪರ ವಕೀಲ ನಾಗರಾಜು ನೀಡಿರುವ ಮಾಹಿತಿಯಂತೆ, ನ್ಯಾಯಾಲಯದ ಆದೇಶಪಾಲನೆಗೆ ವಿಫಲವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.”

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

2 hours ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

4 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

9 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

9 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

9 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

10 hours ago