Andolana originals

ನೀರಿನ ಕರ ಬಿಲ್: ಕೋಟಿಗಟ್ಟಲೇ ಹಣ ಗುಳುಂ

ಎಚ್.ಎಸ್.ದಿನೇಶ್‌ ಕುಮಾರ್‌ 

ಮೈಸೂರು ಮಹಾನಗರಪಾಲಿಕೆ: ಕೆಲ ವಾಟರ್ ಇನ್‌ಸ್ಪೆಕರ್, ಸಿಬ್ಬಂದಿ ಕರಾಮತ್ತು

ತಪ್ಪಿತಸ್ಥರ ವಿರುದ ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ನಗರಪಾಲಿಕೆ ಆಯುಕ್ತರು

ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಅವ್ಯವಹಾರ

ಕಟ್ಟಡಗಳಲ್ಲಿ ನೀರು ಸಂಪರ್ಕ ಪಡೆದವರಿಗೆ ನಕಲಿ ಬಿಲ್ ಕೊಟ್ಟು ವಂಚನೆ

ಸುಮಾರು ಒಂದು ವರ್ಷದಿಂದಲೂ ನಡೆಯುತ್ತಿರುವ ಮೋಸ

ಆಪರೇಟರ್‌ಗಳು ಸಾಥ್ ಈ ವಂಚನೆಯ ಪ್ರಕರಣದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಆಪರೇಟರ್‌ಗಳು ಸಾಥ್ ನೀಡಿದ್ದಾರೆ. ವಾಟರ್ ಇನ್ ಸ್ಪೆಕ್ಟರ್‌ಗಳು ಹೇಳಿದಂತೆ ಮಾಡಿದ ತಪ್ಪಿನಿಂದ ಅವರೀಗ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ.

ಮೈಸೂರು: ಇದು ‘ಬೇಲಿಯೇ ಎದ್ದು ಹೊಲ ಮೇಯ್ದ’ ಕಥೆ. ಒಂದೆಡೆ ಕೋಟ್ಯಂತರ ರೂ. ನೀರಿನ ತೆರಿಗೆ ಬಾಕಿ ಇದೆ ಎಂದು ನಗರಪಾಲಿಕೆ ಅಧಿಕಾರಿಗಳು ಬೊಬ್ಬಿಡುತ್ತಿದ್ದರೆ, ಮತ್ತೊಂದೆಡೆ ಕೆಲ ವಾಟರ್ ಇನ್‌ಸ್ಪೆಕ್ಟರ್‌ಗಳು ಮತ್ತು ಸಿಬ್ಬಂದಿಯೇ ನಕಲಿ ಬಿಲ್ ನೀಡಿ ೨ ಕೋಟಿ ರೂ. ಗಳಿಗೂ ಹೆಚ್ಚು ಹಣವನ್ನು ಗುಳುಂ ಮಾಡಿದ್ದಾರೆ.

ಇದು ನಗರಪಾಲಿಕೆ ಅಧೀನದಲ್ಲಿರುವ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಕರ್ಮಕಾಂಡ. ಅಲ್ಲಿನ ವಾಟರ್ ಇನ್‌ಸ್ಪೆಕ್ಟರ್ ಹಾಗೂ ನೀರಿನ ಬಿಲ್ ತಯಾರಿಸಿ ನೀಡುವ ಡಾಟಾ ಆಪರೇಟರ್‌ಗಳು ಸೇರಿ ಮಾಡಿರುವ ವಂಚನೆ. ಸ್ವತಃ ನಗರಪಾಲಿಕೆಯ ಆಯುಕ್ತರು ಈ ಅಕ್ರಮವನ್ನು ಒಪ್ಪಿಕೊಂಡಿದ್ದು, ಆದಷ್ಟು ಶೀಘ್ರವಾಗಿ ತಪ್ಪಿತಸ್ಥರ ವಿರುದ್ಧ ಬಿಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ತಪ್ಪಿತಸ್ಥರನ್ನು ಅಮಾನತ್ತುಗೊಳಿಸುವ ಪ್ರಕ್ರಿಯೆಯಲ್ಲೂ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ.

ಅಕ್ರಮವಾಗಿ ನೀರಿನ ಸಂಪರ್ಕ ಪಡೆಯುವವರಿಗೆ ದಂಡ ವಿಧಿಸುವುದರ ಜೊತೆಗೆ ಕಾಲಕಾಲಕ್ಕೆ ನೀರಿನ ಬಿಲ್ ಪಾವತಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾದ ಅಽಕಾರಿಗಳೇ ವಂಚನೆ ಎಸಗಿರು ವುದು ಆಶ್ಚರ್ಯ ಹುಟ್ಟಿಸುತ್ತದೆ.

ವಂಚನೆ ಹೇಗೆ?: ನಗರಪಾಲಿಕೆ ವ್ಯಾಪ್ತಿಯ ಯಾವುದೇ ಬಡಾವಣೆಗಳಲ್ಲಿ ವಾಣಿಜ್ಯ ಕಟ್ಟಡ ಅಥವಾ ಮನೆಗಳನ್ನು ನಿರ್ಮಿಸಬೇಕಾದಲ್ಲಿ ನಗರಪಾಲಿಕೆಗೆ ಹಣ ಪಾವತಿಸಿ ತಾತ್ಕಾಲಿಕ ಸಂಪರ್ಕ ಪಡೆದುಕೊಳ್ಳ ಬೇಕಾಗುತ್ತದೆ.

ಆದರೆ, ಕೆಲವರು ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ನೀರಿನ ಸಂಪರ್ಕವನ್ನು ಪಡೆದು ನೀರನ್ನು ಉಪ ಯೋಗಿಸಿಕೊಳ್ಳುವುದು ಆಗಾಗ್ಗೆ ನಡೆಯುತ್ತಿರುತ್ತದೆ. ಇಂತಹ ಕಟ್ಟಡಗಳನ್ನೇ ಗುರಿಯಾಗಿಟ್ಟುಕೊಳ್ಳುವ ನೀರು ಸರಬರಾಜು ಕೇಂದ್ರದ ಸಿಬ್ಬಂದಿ ಕಟ್ಟಡದ ಮಾಲೀಕರನ್ನು ಸಂಪರ್ಕಿಸಿ, ನೀವು ದಂಡ ಸಹಿತ ನೀರಿನ ಬಿಲ್ ಪಾವತಿಸಬೇಕು ಎಂದು ನೋಟಿಸ್ ನೀಡುತ್ತಿದ್ದರು. ನಂತರ ಅವರಿಂದ ಹಣ ಪಡೆದುಕೊಳ್ಳುತ್ತಿದ್ದ ಕೆಲ ವಾಟರ್ ಇನ್ಸ್ಪೆಕ್ಟರ್‌ಗಳು ಅವರಿಗೆ ನೀಡುತ್ತಿದ್ದುದು ಮಾತ್ರ ನಕಲಿ ಬಿಲ್!

ಈ ವಂಚನೆ ಸುಮಾರು ಒಂದು ವರ್ಷದಿಂದಲೂ ನಡೆದುಕೊಂಡು ಬಂದಿದೆ. ಕಳೆದ ತಿಂಗಳು ಕಟ್ಟಡದ ಮಾಲೀಕರೊಬ್ಬರಿಗೆ ಮಾಸಿಕ ನೀರಿನ ಬಿಲ್ ಬಂದಿದೆ. ಜೊತೆಗೆ ಬಾಕಿ ಹಣವೆಂದು ೫೫ ಸಾವಿರ ರೂ. ಬಂದಿದೆ. ಇದರಿಂದ ಶಾಕ್‌ಗೆ ಒಳಗಾದ ಅವರು ಬಿಲ್ ಸಮೇತ ನೀರು ಸರಬರಾಜು ಕೇಂದ್ರಕ್ಕೆ ಬಂದಿದ್ದಾರೆ. ನಾನು ಈ ಹಿಂದೆಯೇ ಹಣ ಪಾವತಿಸಿದ್ದರೂ ಬಿಲ್ ಬಂದಿದೆ ಎಂದು ದೂರಿದ್ದಾರೆ. ಈ ಸಂದರ್ಭದಲ್ಲಿ ಇಡೀ ಪ್ರಕರಣ ಬೆಳಕಿಗೆ ಬಂದಿದೆ.

ಮರುಪಾವತಿ: ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ನಗರಪಾಲಿಕೆ ಅಧಿಕಾರಿಗಳು ಸಂಬಂದಪಟ್ಟ ವಾಟರ್ ಇನ್‌ಸ್ಪೆಕ್ಟರ್‌ಗಳಿಗೆ ಹಣ ಹಿಂದಿರುಗಿಸುವಂತೆ ನೋಟಿಸ್ ನೀಡಿದ್ದಾರೆ.

ಇದರಿಂದ ಆತಂಕಕ್ಕೊಳಗಾದ ವಾಟರ್ ಇನ್‌ಸ್ಪೆಕ್ಟರ್‌ಗಳು ಸುಮಾರು ೭೬ ಲಕ್ಷ ರೂ. ಗಳಷ್ಟು ವಾಪಸ್ ನಗರಪಾಲಿಕೆ ಖಾತೆಗೆ ಜಮೆ ಮಾಡಿದ್ದಾರೆ. ಉಳಿದವರೂ ಕೂಡ ಹಣ ಪಾವತಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣದಿಂದ ತೀವ್ರ ಮುಜುಗರಕ್ಕೆ ಒಳಗಾಗಿರುವ ನಗರಪಾಲಿಕೆ ಅಧಿಕಾರಿಗಳು ಇದೀಗ ೬ ಮಂದಿ ವಾಟರ್ ಇನ್‌ಸ್ಪೆಕ್ಟರ್ ಗಳು ಹಾಗೂ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ೭ ಮಂದಿ ಆಪರೇಟರ್ ಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

೬ ಮಂದಿ ಇನ್‌ಸ್ಪೆಕ್ಟರ್‌ಗಳನ್ನು ಅಮಾನತ್ತು ಮಾಡಲು ನಿರ್ಧರಿಸಲಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಕವಾಗಿರುವ ೭ ಮಂದಿ ಆಪರೇಟರ್‌ಗಳನ್ನು ಸೇವೆಯಿಂದ ಬಿಡುಗಡೆಗೊಳಿಸಲು ಅಽಕಾರಿಗಳು ನಿರ್ಧ ರಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತನಿಖೆಯನ್ನು ವಿಸ್ತರಿಸಲು ನಿರ್ಧರಿಸಿರುವ ನಗರ ಪಾಲಿಕೆ ಅಧಿಕಾರಿಗಳು ನಗರ ವ್ಯಾಪ್ತಿಯ ೬೫ ವಾರ್ಡ್ ಗಳಲ್ಲಿ ನೀರಿನ ಬಿಲ್‌ಗಳ ಪರಿ ಶೀಲನಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿಯ ತಲೆದಂಡವಾಗುವುದು ಖಚಿತ ಎನ್ನಲಾಗಿದೆ

ಆಂದೋಲನ ಡೆಸ್ಕ್

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

32 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 hours ago