ಮಂಜು ಕೋಟೆ
ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್ ಮಾಡಲಾಗಿದೆ.
ತಿಂಗಳ ಪ್ರಾರಂಭದಲ್ಲಿ ಕೇರಳದ ವಯನಾಡು ಪ್ರದೇಶ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದ್ದರಿಂದ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಐದು ದಿನಗಳ ಹಿಂದೆ ಜಲಾಶಯದ ನಾಲ್ಕು ಗೇಟ್‌ಗಳ ಮೂಲಕ ೧೦,೦೦೦ ಕ್ಯೂಸೆಕ್ಸ್‌ನಿಂದ ೨೭ ಸಾವಿರ ಕ್ಯೂಸೆಕ್ಸ್‌ತನಕ ಪ್ರತಿನಿತ್ಯ ನೀರು ಬಿಡಲಾಗಿದ್ದು, ೬ ಟಿಎಂಸಿಗೂ ಹೆಚ್ಚಿನ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಸರ್ಕಾರಕ್ಕೆ ಕಬಿನಿ ಜಲಾಶಯ ವರದಾನವಾಗಿತ್ತು. ಪ್ರಾಧಿಕಾರ ನೀಡಿದ ಆದೇಶಕ್ಕಿಂತ ಒಂದೂವರೆ ಟಿಎಂಸಿ ನೀರು ಹೆಚ್ಚಾಗಿ ಹರಿದುಹೋಗಿದೆ.
ಬುಧವಾರದಿಂದ ಕೇರಳದ ವಯನಾಡು ಪ್ರದೇಶದಲ್ಲಿ ಮಳೆ ಪ್ರಮಾಣ ತೀವ್ರ ಕುಸಿತ ಕಂಡಿದ್ದರಿಂದ ಜಲಾಶಯಕ್ಕೆ ಒಳಹರಿವು ೯ ಕ್ಯೂಸೆಕ್ಸ್ ನಷ್ಟು ಮಾತ್ರ ಬರುತ್ತಿದೆ. ಹೀಗಾಗಿ ಜಲಾಶಯದಿಂದ ನಾಲ್ಕು ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ.
ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ರೈತರು ಮತ್ತು ಕೆರೆಕಟ್ಟೆಗಳಿಗೆ ೨,೦೦೦ ಕ್ಯೂಸೆಕ್ಸ್ ನೀರು, ಹುಲ್ಲಹಳ್ಳಿ, ರಾಂಪುರ ನಾಲೆಗಳಿಗೆ, ಮೈಸೂರು, ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಸುಭಾಷ್ ವಿದ್ಯುತ್ ಘಟಕದ ಮೂಲಕ ೫,೦೦೦ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ. ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳಿದ್ದು ಜಲಾಶಯದ ಸುರಕ್ಷತೆ ದೃಷ್ಟಿಯಿಂದ ೮೨ ಅಡಿಗಳಿಗೆ ನೀರನ್ನು ಶೇಖರಣೆ ಮಾಡಿಕೊಳ್ಳಲಾಗಿದೆ.
” ವಯನಾಡು ಪ್ರದೇಶದಲ್ಲಿ ಮಳೆ ಪ್ರಮಾಣ ಎರಡು ಮೂರು ದಿನಗಳಿಂದ ಕಡಿಮೆಯಾಗಿದ್ದು ಜಲಾಶಯಕ್ಕೆ ಒಳಹರಿವಿನ ಪ್ರಮಾಣ ೯,೦೦೦ ಕ್ಯೂಸೆಕ್ಸ್ ಬರುತ್ತಿದ್ದು, ನದಿಗೆ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಸ್ಥಗಿತಗೊಳಿಸಲಾಗಿದೆ.”
ಗಣೇಶ್, ಎಇಇ, ಕಬಿನಿ ಜಲಾಶಯ
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…