Andolana originals

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ

ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ 

ಹನೂರು: ಹನೂರು ಶೈಕ್ಷಣಿಕ ವಲಯದಲ್ಲಿ ೭೩ ಕಿರಿಯ ಪ್ರಾಥಮಿಕ ಶಾಲೆ, ೭೭ ಹಿರಿಯ ಪ್ರಾಥಮಿಕ ಶಾಲೆ, ೧೮ ಪ್ರೌಢಶಾಲೆಗಳು ಸೇರಿದಂತೆ ೧೬೮ ಗ್ರಾಮಗಳಲ್ಲಿ ಶಾಲೆಗಳು ಕಾರ್ಯಾಚರಿಸುತ್ತಿದ್ದು, ಹಲವು ಶಾಲೆಗಳಲ್ಲಿ ಶಿಥಿಲ ಗೊಂಡಿರುವ ಕೊಠಡಿಗಳನ್ನು ದುರಸ್ತಿ ಮಾಡುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲವಾಗಿರುವುದರಿಂದ ಮಳೆಗಾಲದ ಸಂದರ್ಭದಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

೩೭ ಕಟ್ಟಡಗಳು ಶಿಥಿಲ: ಈಗ ಮಳೆಗಾಲ ಪ್ರಾರಂಭವಾಗುತ್ತಿದ್ದು ಕಳೆದ ಒಂದು ವಾರದಿಂದ ನಿರಂತರವಾಗಿತಾಲ್ಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹನೂರು ಶೈಕ್ಷಣಿಕ ವಲಯದ ವ್ಯಾಪ್ತಿಯಲ್ಲಿ ೩೭ ಶಾಲಾ ಕಟ್ಟಡಗಳು ಸಂಪೂರ್ಣ ಶಿಥಿಲಗೊಂಡು ಬಳಸಲು ಯೋಗ್ಯವಿಲ್ಲದೆ ಇರುವುದರಿಂದ ಕೊಠಡಿಗಳ ನೆಲಸಮ ಮಾಡಲೇಬೇಕಿದೆ. ಆದರೆ ಅಧಿಕಾರಿಗಳು ಕ್ರಮವಹಿಸದೆ ಇರುವುದರಿಂದ ಮಳೆಗಾಲದ ಸಂದರ್ಭ ದಲ್ಲಿ ಯಾವು ದಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ನಾಗರಿಕರನ್ನು ಕಾಡುತ್ತಿದೆ.

ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಉರುಳಿ ಬಿದ್ದು ೯ ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಅದೇ ರೀತಿ ತಾಲ್ಲೂಕಿನಲ್ಲಿರುವ ಹಲವು ಶಾಲಾ ಕಟ್ಟಡಗಳು ಬೀಳುವ ಹಂತದಲ್ಲಿ ಇರುವುದರಿಂದ ಶೀಘ್ರದಲ್ಲಿ ತುರ್ತು ಕ್ರಮ ವಹಿಸಿ ಮುನ್ನೆಚ್ಚರಿಕೆ ವಹಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ನೆಲಸಮ ಯಾವಾಗ?: ಹನೂರು ಶೈಕ್ಷಣಿಕ ವಲಯದ ಕೂಡ್ಲೂರು, ಲೊಕ್ಕನಹಳ್ಳಿ, ಮಾರ್ಟಳ್ಳಿ, ಮಲೆ ಮಹದೇಶ್ವರ ಬೆಟ್ಟ, ಶಾಗ್ಯ, ಒಡೆಯರಪಾಳ್ಯ, ಮಾರಳ್ಳಿ, ಪಿ.ಜಿ.ಪಾಳ್ಯ, ರಾಮಾಪುರ, ಕೌದಳ್ಳಿ ಕ್ಲಸ್ಟರ್ ವ್ಯಾಪ್ತಿಯ ೩೭ ಶಾಲೆಗಳ ಕಟ್ಟಡಗಳು ಬಳಕೆಗೆ ಯೋಗ್ಯವಾಗಿಲ್ಲದಿರುವುದರಿಂದ ಇವುಗಳನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಟ್ಟಡಗಳ ತೆರವು ಆಗದೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

೧೧೪ ಕೊಠಡಿಗಳ ದುರಸ್ತಿ ಅಗತ್ಯ: ಬಂಡಳ್ಳಿ, ಅಲಗಾಪುರ, ಚಿಂಚಳ್ಳಿ, ಮಂಗಲ, ಕೆಂಪಯ್ಯನಹಟ್ಟಿ, ಕುರಟ್ಟಿ ಹೊಸೂರು, ಕೂಡ್ಲೂರು, ಹೂಗ್ಯಂ, ಲೊಕ್ಕನಹಳ್ಳಿ, ಹುತ್ತೂರು, ಒಡೆಯರ ಪಾಳ್ಯ, ಹುಣಸೆಪಾಳ್ಯ, ರಾಮಾಪುರ, ಎಲ್ಲೇಮಾಳ, ಗೊರಸಾಣೆ, ತುಳಸಿಕೆರೆ, ಬಸಪ್ಪನದೊಡ್ಡಿ, ಕೆ.ಗುಂಡಾಪುರ, ಸುಳವಾಡಿ, ಮಾರ್ಟಳ್ಳಿ, ವಡಕೆಹಳ್ಳ, ಮಹಾಲಿಂಗನ ಕಟ್ಟೆ ಗ್ರಾಮಗಳ ಶಾಲೆಗಳು ಸೇರಿದಂತೆ ಶಿಥಿಲಗೊಂಡಿರುವ ೧೧೪ ಶಾಲಾ ಕೊಠಡಿಗಳನ್ನು ದುರಸ್ತಿ ಮಾಡಬೇಕಿದೆ. ಆದರೆ ಇದುವರೆಗೂ ಕಾಮಗಾರಿ ನಡೆಸದೇ ಇರುವುದರಿಂದ ಮತ್ತಷ್ಟು ಶಿಥಿಲಗೊಳ್ಳುತ್ತಿವೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಽಗಳು, ಅಽಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಿ ದುರಸ್ತಿ ಮಾಡಬೇಕಿದೆ.

” ಹನೂರು ಶೈಕ್ಷಣಿಕ ವಲಯದಲ್ಲಿ ಸಂಪೂರ್ಣ ಶಿಥಿಲಗೊಂಡಿರುವ ಕೊಠಡಿಗಳನ್ನು ತೆರವು ಮಾಡಲು ಈಗಾಗಲೇ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಜತೆ ಪತ್ರವ್ಯವಹಾರ ಮಾಡಿ ಎರಡು ತಿಂಗಳಾಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ತೆರವು ಮಾಡಲು ಅನುಮತಿ ನೀಡಬೇಕು. ಅನುಮತಿ ನೀಡಿದ ತಕ್ಷಣ ಹೊಸ ಕೊಠಡಿ ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು.”

ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಹನೂರು ಶೈಕ್ಷಣಿಕ ವಲಯ

” ತಾಪಂ ಅನಿರ್ಬಂಧಿತ ಅನುದಾನದಲ್ಲಿ ೨೪.೯೦ ಲಕ್ಷ ರೂ.ವೆಚ್ಚದಲ್ಲಿ ಶಾಲಾ ಕಟ್ಟಡ ದುರಸ್ತಿ ಮಾಡಲು ಪಿಆರ್‌ಐಡಿ ಇಲಾಖೆಗೆ ಅನುದಾನ ನೀಡಲಾಗಿದೆ. ಕಾಮಗಾರಿಗೆ ತೆಗೆದುಕೊಂಡಿರುವ ಕೊಠಡಿಯನ್ನು ದುರಸ್ತಿ ಮಾಡುವಂತೆ ಸೂಚನೆ ನೀಡಲಾಗುವುದು.”

ಉಮೇಶ್, ಇಒ, ಹನೂರು ತಾಲ್ಲೂಕು

” ಶಿಥಿಲಗೊಂಡಿರುವ ಶಾಲಾ ಕಟ್ಟಡ ನೆಲಸಮ ಮಾಡುವ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪತ್ರ ಬಂದಿದೆ. ಇನ್ನು ೩ ದಿನಗಳಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಲಾಗುವುದು.”

ಸುರೇಂದ್ರ, ಎಇಇ, ಲೋಕೋಪಯೋಗಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago